IIMB Recruitment: ಸಮಾಜಶಾಸ್ತ್ರದಲ್ಲಿ ಪದವಿ ಆಗಿದ್ರೆ ಐಐಎಂಬಿಯಲ್ಲಿದೆ ಕೆಲಸ; ಬೇಗ ಅರ್ಜಿ ಸಲ್ಲಿಸಿ

ಒಂದು ವರ್ಷದ ಒಪ್ಪಂದದ ಆಧಾರದ ಮೇಲೆ ಈ ನೇಮಕಾತಿ ನಡೆಯುತ್ತಿದೆ. ಸಮುದಾಯಿಕ ಗುಂಪುಗಳಲ್ಲಿ ಕೆಲಸ ಮಾಡುವ ಆಸಕ್ತಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕೆಲಸ ಖಾಲಿ ಇದೆ

ಕೆಲಸ ಖಾಲಿ ಇದೆ

  • Share this:
    ಇಂಡಿಯನ್ ಇನ್ಸಿಟ್ಯೂಟ್​​ ಆಫ್ ಮ್ಯಾನೇಜ್​ಮೆಂಟ್​ನಲ್ಲಿ ( Indian Institute of Management Bangalore) ಖಾಲಿ ಇರುವ ರಿಸರ್ಚ್​ ಅಸೋಸಿಯೇಟ್- ಅರ್ಬನ್​ ಪಾಲಿಸಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಇಮೇಲ್​ ಮೂಲಕ ಕಳುಹಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್​ 20 ಆಗಿದೆ.

    ಒಂದು ವರ್ಷದ ಒಪ್ಪಂದದ ಆಧಾರದ ಮೇಲೆ ಈ ನೇಮಕಾತಿ ನಡೆಯುತ್ತಿದೆ. ಸಮುದಾಯಿಕ ಗುಂಪುಗಳಲ್ಲಿ ಕೆಲಸ ಮಾಡುವ ಆಸಕ್ತಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ನೇಮಕಾತಿ, ವಿದ್ಯಾರ್ಹತೆ, ಆಯ್ಕೆ ಪ್ರಕ್ರಿಯೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು
    ಹುದ್ದೆರಿಸರ್ಚ್ ಅಸೋಸಿಯೇಟ್ (ನಗರ ನೀತಿ)
    ಹುದ್ದೆ ಸಂಖ್ಯೆನಿರ್ದಿಷ್ಟಪಡಿಸಿಲ್ಲ
    ಕಾರ್ಯ ನಿರ್ವಹಣೆ ಸ್ಥಳಬೆಂಗಳೂರು
    ವೇತನ75000 ರೂ ಮಾಸಿಕ

    ಶೈಕ್ಷಣಿಕ ಅರ್ಹತೆ: ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಅರ್ಥಶಾಸ್ತ್ರ/ಸಾರ್ವಜನಿಕ ನೀತಿ/ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

    ಅನುಭವ
    ಅಭ್ಯರ್ಥಿಯು ತಾಂತ್ರಿಕ, ಸಾರ್ವಜನಿಕ ನೀತಿ, ದತ್ತಾಂಶ ನಿರ್ವಹಣೆಯ ಕನಿಷ್ಠ ಐದು ವರಷ ಅನುಭವ ಹೊಂದಿರಬೇಕು.

    ವಯಸ್ಸಿನ ಮಿತಿ: ತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಐಐಎಂಬಿ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

    ಇದನ್ನು ಓದಿ: ಟಿಸಿಎಸ್​​ನಲ್ಲಿ ನೇಮಕಾತಿ; ಎಂಬಿಎ ಪದವೀಧರರಿಗೆ ಉತ್ತಮ ಅವಕಾಶ

    ವಯೋಮಿತಿ ಸಡಿಲಿಕೆ:
    ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು ನಿಯಮಗಳ ಪ್ರಕಾರ

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಅರ್ಜಿ ಸಲ್ಲಿಕೆ
    ಇಮೇಲ್​ ಮುಖಾಂತರ

    ಪ್ರಮುಖ ದಿನಾಂಕಗಳು :
    ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: ಜೂನ್​ 7, 2022
    ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ: ಜೂನ್ 20, 2022

    ಇದನ್ನು ಓದಿ: ಒಂಬುಡ್ಸ್​ಮನ್​ಗಳ​ ನೇಮಕಾತಿ ಮುಂದಾದ ಗ್ರಾಮೀಣಾಭಿವೃದ್ದಿ ಇಲಾಖೆ; ಪದವಿ ಆಗಿದ್ರೆ ಸಾಕು

    ಪ್ರಮುಖ ಲಿಂಕ್​​ಗಳು
    ಅಧಿಕೃತ ಅಧಿಸೂಚನೆಗೆ ಇಲ್ಲಿ ಕ್ಲಿಕ್​ ಮಾಡಿ
    ಅಧಿಕೃತ ವೆಬ್​​ಸೈಟ್​​: iimb.ac.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ
    -ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ
    -ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.
    ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಈ ಇಮೇಲ್ ವಿಳಾಸಕ್ಕೆ cpp@iimb.ac.in ಗೆ ಜೂನ್​ 20ರೊಳಗೆ ಕಳುಹಿಸಬೇಕು
    Published by:Seema R
    First published: