• Home
  • »
  • News
  • »
  • jobs
  • »
  • IISc Bangalore: ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರಿನಲ್ಲಿ ಸೆಂಟರ್ ಹೆಡ್ ಹುದ್ದೆಗೆ ಅರ್ಜಿ ಆಹ್ವಾನ

IISc Bangalore: ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರಿನಲ್ಲಿ ಸೆಂಟರ್ ಹೆಡ್ ಹುದ್ದೆಗೆ ಅರ್ಜಿ ಆಹ್ವಾನ

ಐಐಎಸ್​ಸಿ ಬೆಂಗಳೂರು

ಐಐಎಸ್​ಸಿ ಬೆಂಗಳೂರು

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ apply.pgcoe@iisc.ac.in ಗೆ ನವೆಂಬರ್ 20ಕ್ಕೆ ಮುನ್ನ ಕಳುಹಿಸಬೇಕು.

  • Share this:

    IISc Bangalore Recruitment 2022: ಭಾರತೀಯ ವಿಜ್ಞಾನ ಸಂಸ್ಥೆ(Indian Institute of Science) ಬೆಂಗಳೂರು ಖಾಲಿ ಇರುವ ಸೆಂಟರ್ ಹೆಡ್(Center Head- CEO) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ(Bengaluru) ಕೆಲಸ ಮಾಡಲು ಬಯಸುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ನವೆಂಬರ್ 20, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು
    ಹುದ್ದೆಯ ಹೆಸರುಸೆಂಟರ್ ಹೆಡ್
    ವಿದ್ಯಾರ್ಹತೆಬಿಇ/ಬಿ.ಟೆಕ್
    ವೇತನನಿಯಮಾನುಸಾರ
    ಸ್ಥಳಬೆಂಗಳೂರು
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ನೋಟಿಫಿಕೇಶನ್ ಬಿಡುಗಡೆ ದಿನಾಂಕ07/11/2022
    ಇ-ಮೇಲ್ ಕಳುಹಿಸಲು ಕೊನೆ ದಿನ20/11/2022

     


    ವಿದ್ಯಾರ್ಹತೆ:


    ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಸೆಂಟರ್ ಹೆಡ್​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್​/ ಕಂಪ್ಯೂಟರ್​ ಸೈನ್ಸ್​ ವಿಭಾಗದಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.


    ವಯೋಮಿತಿ:
    ಸೆಂಟರ್ ಹೆಡ್​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ ಇರಬೇಕು.


    ವಯೋಮಿತಿ ಸಡಿಲಿಕೆ:
    ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ ಸೆಂಟರ್ ಹೆಡ್​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಆಯ್ಕೆ ಪ್ರಕ್ರಿಯೆ:
    ಸ್ಕ್ರೀನಿಂಗ್
    ಶಾರ್ಟ್​​ಲಿಸ್ಟಿಂಗ್
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ apply.pgcoe@iisc.ac.in ಗೆ ನವೆಂಬರ್ 20ಕ್ಕೆ ಮುನ್ನ ಕಳುಹಿಸಬೇಕು.


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 07/11/2022
    ಇ-ಮೇಲ್ ಕಳುಹಿಸಲು ಕೊನೆ ದಿನ: 20/11/2022

    Published by:Latha CG
    First published: