IISc Recruitment 2023: ಭಾರತೀಯ ವಿಜ್ಞಾನ ಸಂಸ್ಥೆ(Indian Institute of Science) ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 76 ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಬೆಂಗಳೂರಿನಲ್ಲಿ(Bengaluru) ವೃತ್ತಿ ಮಾಡ ಬಯಸುವವರು ಅರ್ಜಿ ಹಾಕಿ. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತದೆ. ಡಿಸೆಂಬರ್ 22ರಿಂದಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಜನವರಿ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಹಾಕಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು |
ಹುದ್ದೆ | ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ |
ಒಟ್ಟು ಹುದ್ದೆ | 76 |
ವೇತನ | ಮಾಸಿಕ ₹ 21700 - 69100 |
ಉದ್ಯೋಗದ ಸ್ಥಳ | ಬೆಂಗಳೂರು |
ಇದನ್ನೂ ಓದಿ: Anganwadi Jobs: 500 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ-10th ಪಾಸಾದವರು ಅಪ್ಲೈ ಮಾಡಿ
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ www.iisc.ac.in ಗೆ ಭೇಟಿ ನೀಡಿ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು. ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.
ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/12/2022
ಅರ್ಜಿ ಸಲ್ಲಿಸಲು ಕೊನೆ ದಿನ: 06/01/2023
ಅರ್ಜಿ ಶುಲ್ಕ:
ಜನರಲ್/ಒಬಿಸಿ ಅಭ್ಯರ್ಥಿಗಳಿಗೆ 50 ರೂ.
SC/ST/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.
ಪಾವತಿಸುವ ವಿಧಾನ: ಡೆಬಿಡ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್
ಉದ್ಯೋಗದ ಸ್ಥಳ: ಬೆಂಗಳೂರು
ಇದನ್ನೂ ಓದಿ: High Court Jobs: ಜಸ್ಟ್ 8th ಪಾಸಾಗಿದ್ರೆ ಹೈಕೋರ್ಟ್ನಲ್ಲಿದೆ ಬಂಪರ್ ಉದ್ಯೋಗ- ಕೈ ತುಂಬಾ ಸಂಬಳ
ವಯೋಮಿತಿ:
ಜನರಲ್ ಅಭ್ಯರ್ಥಿಗಳು- 26 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ
OBC ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 21700 - 69100 ಸಂಬಳ ಕೊಡಲಾಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ