IISc Recruitment: ಬೆಂಗಳೂರು ಐಐಎಸ್ಸಿಯಲ್ಲಿ ಬಿಸಿಎ ಆದವರಿಗೆ ಕೆಲಸ; ತಿಂಗಳಿಗೆ 55 ಸಾವಿರ ರೂ ವೇತನ

ಕಂಪ್ಯೂಟರ್​ ಸೈನ್ಸ್​ನಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಐಐಎಸ್​ಸಿ ಬೆಂಗಳೂರು

ಐಐಎಸ್​ಸಿ ಬೆಂಗಳೂರು

  • Share this:
    ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯು (Indian Institute of Science -IISc) ನೇಮಕಾತಿಗೆ ಮುಂದಾಗಿದೆ. ಸಂಸ್ಥೆಯಲ್ಲಿ ನೆಟ್‌ವರ್ಕಿಂಗ್ ಮತ್ತು ಸಿಸ್ಟಮ್ಸ್ ನಿರ್ವಾಹಕರ (Networking and Systems Administrator) ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ. ಕಂಪ್ಯೂಟರ್​ ಸೈನ್ಸ್​ನಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 29 ಆಗಿದೆ. 

    ಈ ಹುದ್ದೆ ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಹುದ್ದೆಯ ಅವಧಿ ಒಂದು ವರ್ಷ ಆಗಿದೆ. ಅಭ್ಯರ್ಥಿಗಳ ಕಾರ್ಯ ಕ್ಷಮತೆ ಆಧಾರದ ಮೇಲೆ ಐದು ವರ್ಷಗಳ ಕಾಲ ವಿಸ್ತರಣೆ ಮಾಡಲಾಗುವುದು. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಯ ಹೆಸರುಭಾರತೀಯ ವಿಜ್ಞಾನ ಸಂಸ್ಥೆ(IISc)
    ಹುದ್ದೆಯ ಹೆಸರುನೆಟ್‌ವರ್ಕಿಂಗ್ ಮತ್ತು ಸಿಸ್ಟಮ್ಸ್ ಅಡ್ಮಿನಿಸ್ಟ್ರೇಟರ್
    ಹುದ್ದೆಗಳ ಸಂಖ್ಯೆನಿರ್ದಿಷ್ಟಪಡಿಸಲಾಗಿಲ್ಲ
    ಉದ್ಯೋಗ ಸ್ಥಳಬೆಂಗಳೂರು
    ವೇತನ45000-55000 ರೂ ಮಾಸಿಕ

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿಎಟೆಕ್​, ಎಂಸಿಎ ಅಥವಾ ಬಿಸಿಎ ಪೂರ್ಣಗೊಳಿಸಿರಬೇಕು.

    ವಯಸ್ಸಿನ ಮಿತಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು ಮೀರಿರಬಾರದು.

    ಇದನ್ನು ಓದಿ: ಮೈಸೂರಿನಲ್ಲಿ ಪ್ರಾಜೆಕ್ಟ್​ ಅಸಿಸ್ಟಂಟ್​ ಹುದ್ದೆಗೆ ಅರ್ಜಿ ಆಹ್ವಾನ; 35960 ರೂ ಮಾಸಿಕ ವೇತನ

    ಅರ್ಜಿ ಸಲ್ಲಿಕೆ: ಆನ್​ಲೈನ್​

    ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 9 ಸೆಪ್ಟೆಂಬರ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29 ಸೆಪ್ಟೆಂಬರ್​​ 2022

     ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: iisc.ac.in

    ಇದನ್ನು ಓದಿ: ಬೆಂಗಳೂರು ಇನ್ಫೋಸಿಸ್ ಕಚೇರಿಯಲ್ಲಿ ವಾಕ್​ ಇನ್​ ಇಂಟರ್​ವ್ಯೂ; ಇಲ್ಲಿದೆ ಸಂಪೂರ್ಣ ಮಾಹಿತಿ

    ಅರ್ಜಿ ಸಲ್ಲಿಕೆ ವಿಧಾನ

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: