IIT Dharwad Recruitment: ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ - ಬೇಗ ಅಪ್ಲೈ ಮಾಡಿ

Job Alert: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 18-04-2022 ರಂತೆ 35 ವರ್ಷಗಳು. 

2 ಹುದ್ದೆಗೆ ಅರ್ಜಿ ಹಾಕಿ

2 ಹುದ್ದೆಗೆ ಅರ್ಜಿ ಹಾಕಿ

  • Share this:
IIT Dharwad Recruitment 2022 : ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ (IIT Dharwad) ಅಧಿಕೃತ ಅಧಿಸೂಚನೆ ಹಿರಿಯ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.  ಬಹಳ ದಿನಗಳಿಂದ ಕರ್ನಾಟಕ ಸರ್ಕಾರದಲ್ಲಿ (Government Of Karnataka) ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಆಸಕ್ತ ಅಭ್ಯರ್ಥಿಗಳು ಏಪ್ರಿಲ್​15ರ ಮೊದಲು ಆನ್‌ಲೈನ್‌(Online)ನಲ್ಲಿ ಅರ್ಜಿ ಸಲ್ಲಿಸಬಹುದು. 

ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಏಪ್ರಿಲ್​ 12 ಮೊದಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.  ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿ.   











































ಸಂಸ್ಥೆಯ ಹೆಸರುಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ (ಐಐಟಿ ಧಾರವಾಡ)
ಹುದ್ದೆಗಳ ಸಂಖ್ಯೆ02
ಉದ್ಯೋಗ ಸ್ಥಳಧಾರವಾಡ - ಕರ್ನಾಟಕ
ಹುದ್ದೆಯ ಹೆಸರುಹಿರಿಯ ಪ್ರಾಜೆಕ್ಟ್ ಎಂಜಿನಿಯರ್
ವೇತನರೂ.35000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್/ಕಂಪ್ಯೂಟರ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ
ವಯೋಮಿತಿ35 ವರ್ಷಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ15-04-2022
ವೆಬ್​ಸೈಟ್ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ನೇರ ಲಿಂಕ್ನೇರವಾಗಿ ಇಲ್ಲಿ ಅರ್ಜಿ ಹಾಕಿ 

ಖಾಲಿ ಇರುವ 2 ಹಿರಿಯ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್/ಕಂಪ್ಯೂಟರ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. 35 ವರ್ಷ ಒಳಗಿನ ಅಭ್ಯರ್ಥಿಗಳು ಏಪ್ರಿಲ್​ 15ರ ಒಳಗೆ ಆನ್​ಲೈನ್​ ಮೂಲಕ ಅರ್ಜಿ ಹಾಕಬಹುದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.35000/- ವೇತನ ನೀಡಲಾಗುತ್ತದೆ.  

ಸಂಸ್ಥೆಯ ಹೆಸರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ (ಐಐಟಿ ಧಾರವಾಡ)

ಹುದ್ದೆಗಳ ಸಂಖ್ಯೆ: 2

ಉದ್ಯೋಗ ಸ್ಥಳ: ಧಾರವಾಡ - ಕರ್ನಾಟಕ

ಹುದ್ದೆಯ ಹೆಸರು: ಹಿರಿಯ ಪ್ರಾಜೆಕ್ಟ್ ಎಂಜಿನಿಯರ್

ವೇತನ: ರೂ.35000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: ಐಐಟಿ ಧಾರವಾಡದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್/ಕಂಪ್ಯೂಟರ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: ಪದವಿ ಆಗಿದ್ರೆ ಇಲ್ಲಿದೆ ಅವಕಾಶ - ತಿಂಗಳಿಗೆ 50 ಸಾವಿರ ಸಂಬಳ

ವಯೋಮಿತಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 18-04-2022 ರಂತೆ 35 ವರ್ಷಗಳು.

ವಯೋಮಿತಿ ಸಡಿಲಿಕೆ:

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-04-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-04-2022

ಕಿರುಪಟ್ಟಿಯ ಘೋಷಣೆಯ ದಿನಾಂಕ: ಏಪ್ರಿಲ್ 16, 2022

ಆಯ್ಕೆ ಪ್ರಕ್ರಿಯೆಗಳ ದಿನಾಂಕ: ಏಪ್ರಿಲ್ 18 2022

ವೆಬ್​ಸೈಟ್​: iitdh.ac.in 

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ನೇರವಾಗಿ ಅರ್ಜಿ ಹಾಕಿ 

ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ ಪ್ರಶ್ನೆಗೆ, ಅರ್ಜಿದಾರರು ಇಮೇಲ್ ಕಳುಹಿಸಬಹುದು prasanna@iitdh.ac.in
Published by:Sandhya M
First published: