Jobs in IITTM: ಪ್ರವಾಸೋದ್ಯಮ ಸಂಸ್ಥೆಯಲ್ಲಿದೆ ವಿವಿಧ ಮ್ಯಾನೇಜರ್​ ಹುದ್ದೆ; ಮಾಸಿಕ 50000 ರೂ ವೇತನ

ಈ ಹುದ್ದೆಗಳು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಒಂದು ವರ್ಷದ ಒಪ್ಪಂದದ ಮೇರೆಗೆ ನೇಮಕಾತಿ ನಡೆಸಲಾಗುವುದು. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ವಿಸ್ತರಣೆ ನಡೆಸಲಾಗುವುದು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಭಾರತೀಯ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ ಸಂಸ್ಥೆ (Indian Institute of Tourism and Travel Management) ವಿವಿಧ ಮ್ಯಾನೇಜರ್​ (Manger Post) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪ್ರವಾಸೋದ್ಯಮ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆ ಸೇರಿದಂತೆ ಒಟ್ಟು 31 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರವಾಸೋದ್ಯಮದಲ್ಲಿ ಎಂಬಿಎ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 5 ಆಗಿದೆ.

    ಈ ಹುದ್ದೆಗಳು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಒಂದು ವರ್ಷದ ಒಪ್ಪಂದದ ಮೇರೆಗೆ ನೇಮಕಾತಿ ನಡೆಸಲಾಗುವುದು. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ವಿಸ್ತರಣೆ ನಡೆಸಲಾಗುವುದು. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಭಾರತೀಯ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ ಸಂಸ್ಥೆ (IITTM)
    ಹುದ್ದೆಯ ಹೆಸರು: ಪ್ರವಾಸೋದ್ಯಮ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ
    ಹುದ್ದೆಗಳ ಸಂಖ್ಯೆ: 31
    ಉದ್ಯೋಗ ಸ್ಥಳ: ದೇಶಾದ್ಯಂತ
    ಸಂಬಳ: 50000-75000 ರೂ. ಮಾಸಿಕ





















    ಹುದ್ದೆಹುದ್ದೆ ಸಂಖ್ಯೆವಯೋಮಿತಿವೇತನ
    ಪ್ರವಾಸೋದ್ಯಮ ವ್ಯವಸ್ಥಾಪಕ12ಗರಿಷ್ಠ 4075000 ರೂ ಮಾಸಿಕ
    ಸಹಾಯಕ ವ್ಯವಸ್ಥಾಪಕ 19 35 5000019ಗರಿಷ್ಠ 3550000 ರೂ ಮಾಸಿಕ

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪ್ರವಾಸೋದ್ಯಮದಲ್ಲಿ ಎಂಬಿಎ ಪದವಿ ಪೂರ್ಣಗೊಳಿಸಿರಬೇಕು.

    ಅನುಭವ:
    ಪ್ರವಾಸೋದ್ಯಮ ವ್ಯವಸ್ಥಾಪಕರು: ಕೇಂದ್ರ ಅಥವಾ ರಾಜ್ಯ ಸರ್ಕಾರದ ಯೋಜನೆಗಳಲ್ಲಿ ಅಥವಾ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಭ್ಯರ್ಥಿಗಳು 05 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇರಬೇಕು.

    ಸಹಾಯಕ ವ್ಯವಸ್ಥಾಪಕರು: ಕೇಂದ್ರ ಅಥವಾ ರಾಜ್ಯ ಸರ್ಕಾರದ ಯೋಜನೆಗಳಲ್ಲಿ ಅಥವಾ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಭ್ಯರ್ಥಿಗಳು 02 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇರಬೇಕು.

    ಇದನ್ನು ಓದಿ: ಕೆಪಿಎಸ್​ಸಿ ಗ್ರೂಪ್​ 'ಸಿ' ಹುದ್ದೆಗೆ ಅರ್ಜಿ ಸಲ್ಲಿಸಿ; ಇಲ್ಲಿದೆ ಸಂಪೂರ್ಣ ಮಾಹಿತಿ

    ವಯೋಮಿತಿ ಸಡಿಲಿಕೆ:
    ಭಾರತೀಯ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ  ಸಂಸ್ಥೆ ನಿಯಮಗಳ ಪ್ರಕಾರ

    ಅರ್ಜಿ ಶುಲ್ಕ
    ಎಲ್ಲಾ ಅಭ್ಯರ್ಥಿಗಳು: 500 ರೂ

    ಪಾವತಿ ವಿಧಾನ: ಆನ್‌ಲೈನ್ ಹಾಗೂ ಆಫ್‌ಲೈನ್

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28 ಜುಲೈ  2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05 ಆಗಸ್ಟ್ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: iittm.ac.in

    ಇದನ್ನು ಓದಿ: 6432 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದ ಐಬಿಪಿಎಸ್

    ಅರ್ಜಿ ಸಲ್ಲಿಕೆ ವಿಳಾಸ 

    ನಿರ್ದೇಶಕ-IITTM, ಗೋವಿಂದಪುರಿ, ಗ್ವಾಲಿಯರ್- 474011, ಮಧ್ಯ ಪ್ರದೇಶ.

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ

    - ಆನ್‌ಲೈನ್ ಮೋಡ್ ಮೂಲಕ ನಿಗದಿತ ಅರ್ಜಿಯನ್ನು ಡೌನ್​ ಲೋಡ್​ ಮಾಡಿ. ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

    ಆನ್‌ಲೈನ್‌ನಲ್ಲಿ ಲಾಗ್​ ಇನ್​ ಆಗಿ. ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ  ವಿಳಾಸಕ್ಕೆ ಅರ್ಜಿ ಸಲ್ಲಿಸಿ.
    Published by:Seema R
    First published: