RDPR Recruitment: ಚಾಮರಾಮನಗರದಲ್ಲಿ ಹಿರಿಯ ವಿಶ್ಲೇಷಕ ಹುದ್ದೆ: ಅರ್ಜಿ ಸಲ್ಲಿಸಲು ಆ.17 ಕೊನೆ ದಿನ

ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 17 ಆಗಿದೆ.

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
ಚಾಮರಾಜನಗರ ಜಿಲ್ಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ (Rural Drinking Water and Sanitation Department) ಹಿರಿಯ ವಿಶ್ಲೇಷಕ (Senior Analyst) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಗ್ರಾಮೀಣ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗಾಗಿ ಈ ಹುದ್ದೆಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 17 ಆಗಿದೆ.

ಈ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಅವಧಿಗೆ ನೇಮಕಾತಿ ನಡೆಸಲಾಗುವುದು. ಅಭ್ಯರ್ಥಿಯ ಕಾರ್ಯಕ್ಷಮತೆ ಆಧಾರದ ಮೇಲೆ ಈ ಹುದ್ದೆ ವಿಸ್ತರಣೆ ನಡೆಸಲಾವುದು. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























ಹುದ್ದೆ ಮಾಹಿತಿಹುದ್ದೆ ವಿವರ
ಸಂಸ್ಥೆಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ಹುದ್ದೆ ಹೆಸರುಹಿರಿಯ ವಿಶ್ಲೇಷಕ
ಒಟ್ಟು ಹುದ್ದೆನಿಗದಿ ಪಡಿಸಿಲ್ಲ
ಕಾರ್ಯ ನಿರ್ವಹಣೆ ಸ್ಥಳಚಾಮರಾಜನಗರ
ವೇತನಚಾಮರಾಜನಗರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲಸ್ಯ ಇಲಾಖೆ ನಿಯಮ ಅನುಸಾರ

ಶೈಕ್ಷಣಿಕ ಅರ್ಹತೆ: ಅಧಿಕೃತ ನೇಮಕಾತಿ ಅಧಿಸೂಚನೆ ಅನುಸಾರ ಅಭ್ಯರ್ಥಿಯು ರಾಸಾಯನ ಶಾಸ್ತ್ರ, ಬಯೋಕೆಮಿಸ್ಟ್ರಿ, ಮೈಕ್ರೋಬಯೋಲಜಿ, ಎನ್ವಿರಾನ್ಮೆಂಟಲ್​ ಸೈನ್ಸ್​, ಬಯೋಟೆಕ್ನಾಲಜಿಯಲ್ಲಿ ಎಂಎಸ್ಸಿ ಅಥವಾ ಬಿಇ ಪದವಿಯನ್ನು ಹೊಂದಿರಬೇಕು.

ನೀರಿನ ಗುಣಮಟ್ಟ ಪರೀಕ್ಷಕರ ಹುದ್ದೆ ಕಾರ್ಯಾನುಭವ ಹೊಂದಿರುವವರಿಗೆ ಹುದ್ದೆಗೆ ಆದ್ಯತೆ ನೀಡಲಾಗುವುದು.

ಅನುಭವದ ವಿವರ
ಅಭ್ಯರ್ಥಿಯು ನೀರಿನ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯದಲ್ಲಿ ಮೂರು ವರ್ಷ ಸೇವೆ ಸಲ್ಲಿಸಿರಬೇಕು.
ಸಾಮಾನ್ಯ ಕಂಪ್ಯೂಟರ್​ ಜ್ಞಾನ ಹೊಂದಿರಬೇಕು.

ವಯೋಮಿತಿ: ಚಾಮರಾಜನಗರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲಸ್ಯ ಇಲಾಖೆ ನಿಯಮ ಅನುಸಾರ

ಇದನ್ನು ಓದಿ: ಭಾರತೀಯ ರೈಲ್ವೆಯಲ್ಲಿ 60 ಹುದ್ದೆಗಳ ನೇಮಕಾತಿ; ಡಿಗ್ರಿ ಆದವರು ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ: ಆಫ್​ಲೈನ್​

ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಅನುಭವ, ಶೈಕ್ಷಣಿಕ ಅರ್ಹತೆ ಮತ್ತು ಸಂದರ್ಶನ

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಆರಂಭಿಕ ದಿನಾಂ: 6 ಆಗಸ್ಟ್​​ 2022
ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ: 17 ಆಗಸ್ಟ್​ 2022

ಪ್ರಮುಖ ಲಿಂಕ್​ಗಳು
ಅಧಿಕೃತ ವೆಬ್​ಸೈಟ್​: chamrajnagar.nic.in

ಇದನ್ನು ಓದಿ: ಧಾರವಾಡ ಕೃಷಿ ವಿವಿಯಲ್ಲಿ ನೇಮಕಾತಿ; ಮಾಸಿಕ 31 ಸಾವಿರ ರೂ ವೇತನ

ಅರ್ಜಿ ಸಲ್ಲಿಕೆ ವಿಳಾಸ
ಕಾರ್ಯಪಾಲಕ ಇಂಜಿನಿಯರ್​ ಕಚೇರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕೋರ್ಟ್​ ರಸ್ತೆ, ಚಾಮರಾಜನಗರ ವಿಭಾಗ, ಚಾಮರಾಜನಗರ-571313.

ವಿಶೇಷ ಸೂಚನೆ:
ಈ ಹುದ್ದೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು ದೂರವಾಣಿ ಸಂಖ್ಯೆ 08226-226054 ಅಥವಾ eerdwsd,chn@gmail.com ಗೆ ಸಂಪರ್ಕಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ

ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

ರೆಸ್ಯೂಮೆ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ ​ ವಿಳಾಸಕ್ಕೆ ನಿಗದಿತ ದಿನಾಂಕದ ಮುನ್ನ ಕಳುಹಿಸಬೇಕು.
Published by:Kavya V
First published: