India Post Office Recruitment 2021: ಭಾರತೀಯ ಅಂಚೆ ಇಲಾಖೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿವಿಧ ಮಲ್ಟಿ ಟಾಸ್ಕಿಂಗ್ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ಪಾಸಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 8ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ನವೆಂಬರ್ 18 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ tamilnadupost.nic.in ಗೆ ಭೇಟಿ ನೀಡಬಹುದಾಗಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಭಾರತೀಯ ಅಂಚೆ ಇಲಾಖೆ |
ಹುದ್ದೆಯ ಹೆಸರು |
ಮಲ್ಟಿ ಟಾಸ್ಕಿಂಗ್ ಸ್ಟಾಫ್ |
ವಿದ್ಯಾರ್ಹತೆ: |
10ನೇ ತರಗತಿ |
ಉದ್ಯೋಗದ ಸ್ಥಳ |
ಚೆನ್ನೈ |
ವೇತನ |
ನಿಯಮಾನುಸಾರ |
ಅರ್ಜಿ ಸಲ್ಲಿಕೆ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
08/11/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
18/11/2021 |
ಇದನ್ನೂ ಓದಿ: India Post Recruitment 2021:ತಿಂಗಳಿಗೆ ₹ 81,000 ಸಂಬಳ; SSLC, PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18/11/2021
ವಿದ್ಯಾರ್ಹತೆ:
ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆ/ ಬೋರ್ಡ್ನಿಂದ 10ನೇ ತರಗತಿ ಪಾಸಾಗಿರಬೇಕು.
ಪೋಸ್ಟ್ ಆಫೀಸ್ನಲ್ಲಿ ಕಡ್ಡಾಯವಾಗಿ ಗ್ರಾಮೀಣ ಡಕ್ ಸೇವಕ್ ಹುದ್ದೆಯಲ್ಲಿ ಸೇವೆ ಸಲ್ಲಿಸಿರಬೇಕು.
ಉದ್ಯೋಗದ ಸ್ಥಳ:
ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಮಿಳುನಾಡಿನ ಚೆನ್ನೈನಲ್ಲಿ ಉದ್ಯೋಗ ನೀಡಲಾಗುತ್ತದೆ.
ಇದನ್ನೂ ಓದಿ:NITI Aayog Recruitment 2021: ಮಾಸಿಕ ವೇತನ ₹2,65,000; ನೀತಿ ಆಯೋಗದಲ್ಲಿ ವಿವಿಧ ಹುದ್ದೆಗಳು ಖಾಲಿ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ವೈಯಕ್ತಿಕ ಸಂದರ್ಶನ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ