India Post Office Recruitment: ಭಾರತೀಯ ಅಂಚೆ ಇಲಾಖೆಯಲ್ಲಿದೆ ಉದ್ಯೋಗ; ಎಸ್​ಎಸ್​ಎಲ್​ಸಿ ಆಗಿದ್ರೆ ಸಾಕು

ಬೆಂಗಳೂರು ಮತ್ತು ನವದೆಹಲಿಯಲ್ಲಿ ಈ ಹುದ್ದೆಗಳ ಭರ್ತಿ ನಡೆಯಲಿದೆ. ಎಸ್​ಎಸ್​ಎಲ್​ಸಿ ಓದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಿ

  • Share this:
    ಭಾರತೀಯ ಅಂಚೆ ಇಲಾಖೆಯಲ್ಲಿ (India Post Office)  20 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸ್ಟಾಫ್​​ ಕಾರ್​​ ಡ್ರೈವರ್​ (Staff Car Driver) ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಮತ್ತು ನವದೆಹಲಿಯಲ್ಲಿ ಈ ಹುದ್ದೆಗಳ ಭರ್ತಿ ನಡೆಯಲಿದೆ. ಎಸ್​ಎಸ್​ಎಲ್​ಸಿ ಓದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ 26 ಸೆಪ್ಟೆಂಬರ್​ ಆಗಿದೆ.

    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಭಾರತ ಅಂಚೆ ಕಚೇರಿ (ಭಾರತೀಯ ಅಂಚೆ)
    ಹುದ್ದೆಯ ಹೆಸರು: ಸ್ಟಾಫ್ ಕಾರ್ ಡ್ರೈವರ್
    ಹುದ್ದೆಗಳ ಸಂಖ್ಯೆ: 20
    ಉದ್ಯೋಗ ಸ್ಥಳ: ಬೆಂಗಳೂರು - ನವದೆಹಲಿ
    ವೇತನ: 19900-63200 ರೂ. ಪ್ರತಿ ತಿಂಗಳು





















    ಹುದ್ದೆಹುದ್ದೆ ಸಂಖ್ಯೆವಯೋಮಿತಿವಿದ್ಯಾರ್ಹತೆ
    ಸಿಬ್ಬಂದಿ ಕಾರು ಚಾಲಕ (ಗ್ರೇಡ್​ ಸಿ)1ಗರಿಷ್ಟ 56 ವರ್ಷಎಸ್​ಎಸ್​ಎಲ್​ಸಿ
    ಸಿಬ್ಬಂದಿ ಕಾರ್ ಚಾಲಕ19ಕನಿಷ್ಟ 18 ಗರಿಷ್ಟ 27ವರ್ಷ ಎಸ್​ಎಸ್​ಎಲ್​ಸಿ

    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
    ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು

    ಅರ್ಜಿ ಸಲ್ಲಿಕೆ: ಆಫ್​​ ​ಲೈನ್​

    ಇದನ್ನು ಓದಿ: ಎಸ್​ಬಿಐನಲ್ಲಿ 665 ಹುದ್ದೆಗೆ ಅರ್ಜಿ ಆಹ್ವಾನ: ಬ್ಯಾಂಕಿಂಗ್​ ಕ್ಷೇತ್ರದಲ್ಲಿ ಭರ್ಜರಿ ಅವಕಾಶ

    ಆಯ್ಕೆ ಪ್ರಕ್ರಿಯೆ
    ಡ್ರೈವಿಂಗ್ ಟೆಸ್ಟ್, ಥಿಯರಿ ಟೆಸ್ಟ್ ಮತ್ತು ಸಂದರ್ಶನ

    ಅರ್ಜಿ ಸಲ್ಲಿಕೆ ವಿಳಾಸ

    ಸ್ಟಾಫ್ ಕಾರ್ ಡ್ರೈವರ್: ವಿನಾಯಕ್ ಮಿಶ್ರಾ ಸಹಾಯಕ ಮಹಾನಿರ್ದೇಶಕ (ಅಡ್ಮಿನ್.), ವಿಭಾಗದ ಮುಖ್ಯಸ್ಥರು, ನವದೆಹಲಿ
    ಸಿಬ್ಬಂದಿ ಕಾರ್ ಡ್ರೈವರ್ (ಗ್ರೇಡ್​ಸಿ ): ಮ್ಯಾನೇಜರ್, ಮೇಲ್ ಮೋಟಾರ್ ಸೇವೆ, ಬೆಂಗಳೂರು-560001, ಕರ್ನಾಟಕ.

    ಪ್ರಮುಖ ದಿನಾಂಕಗಳು:
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26 ಆಗಸ್ಟ್​ 2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26 ಸೆಪ್ಟೆಂಬರ್​​ 2022

    ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ - ಸಿಬ್ಬಂದಿ ಕಾರು ಚಾಲಕ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: indiapost.gov.in

    ಇದನ್ನು ಓದಿ: ಭಾರತೀಯ ಆಹಾರ ನಿಗಮದಲ್ಲಿ ಭರ್ಜರಿ ನೇಮಕಾತಿ; 5043 ಹುದ್ದೆಗೆ ಅರ್ಜಿ ಆಹ್ವಾನ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಇತ್ಯಾದಿ ದಾಖಲೆಗಳನ್ನು ಅರ್ಜಿಯಲ್ಲಿ ದಾಖಲಿಸಿ

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ ವಿಳಾಸಕ್ಕೆ ನಿಗದಿತ ದಿನಾಂಕಕ್ಕೆ  ಮುನ್ನ ಸ್ಪೀಡ್​ ಪೋಸ್ಟ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮೂಲಕ ಸಲ್ಲಿಸಿ
    Published by:Seema R
    First published: