India Post Recruitment 2021: PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ; ಮಾಸಿಕ ವೇತನ ₹ 81,100

ಪೋಸ್ಟ್​ಮ್ಯಾನ್​, ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-27 ವರ್ಷದೊಳಗಿರಬೇಕು.

Post Office

Post Office

  • Share this:
India Post Recruitment 2021: ಪಶ್ಚಿಮ ಬಂಗಾಳ ಪೋಸ್ಟಲ್ ಸರ್ಕಲ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 124 ಪೋಸ್ಟ್​ಮ್ಯಾನ್​, ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, 12ನೇ ತರಗತಿ ಪಾಸಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅಭ್ಯರ್ಥಿಗಳು ಆಫ್​ಲೈನ್(ಪೋಸ್ಟಲ್​) ಮೂಲಕ ಡಿಸೆಂಬರ್ 24ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್​ಸೈಟ್​ indiapost.gov.in ಗೆ ಭೇಟಿ ನೀಡಬಹುದು.



ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.









































ಸಂಸ್ಥೆಪಶ್ಚಿಮ ಬಂಗಾಳ ಪೋಸ್ಟಲ್ ಸರ್ಕಲ್
ಹುದ್ದೆಯ ಹೆಸರುಪೋಸ್ಟ್​ಮ್ಯಾನ್​, ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್
ಒಟ್ಟು ಹುದ್ದೆಗಳು124
ವಿದ್ಯಾರ್ಹತೆ12ನೇ ತರಗತಿ ಪಾಸ್
ಉದ್ಯೋಗದ ಸ್ಥಳಕೊಲ್ಕತ್ತಾ
ವೇತನಮಾಸಿಕ ₹21,700-81,100
ಅರ್ಜಿ ಸಲ್ಲಿಸುವ ವಿಧಾನಆಫ್​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ15/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ24/12/2021



ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24/12/2021

ಇದನ್ನೂ ಓದಿ: India Post Recruitment 2021:ತಿಂಗಳಿಗೆ ₹ 81,000 ಸಂಬಳ; SSLC, PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

ಅರ್ಜಿ ಶುಲ್ಕ:

ಪೋಸ್ಟ್​ಮ್ಯಾನ್​, ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕು.

ಹುದ್ದೆಯ ಮಾಹಿತಿ:

ಪೋಸ್ಟ್​ಮ್ಯಾನ್​-48
ಪೋಸ್ಟಲ್ ಅಸಿಸ್ಟೆಂಟ್-51
ಸಾರ್ಟಿಂಗ್ ಅಸಿಸ್ಟೆಂಟ್ - 25

ವಿದ್ಯಾರ್ಹತೆ:

ಪೋಸ್ಟ್​ಮ್ಯಾನ್​, ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆ/ ಬೋರ್ಡ್​ನಿಂದ 12ನೇ ತರಗತಿ/ ದ್ವಿತೀಯ ಪಿಯುಸಿ ಪಾಸಾಗಿರಬೇಕು.

ಸ್ಥಳೀಯ ಭಾಷೆಯ ಜ್ಞಾನವಿರಬೇಕು. ಕೇಳಲಾಗಿರುವ ಕ್ರೀಡಾ ಅರ್ಹತೆಯನ್ನು ಹೊಂದಿರಬೇಕು. ದ್ವಿಚಕ್ರ ವಾಹನದ ಡ್ರೈವಿಂಗ್ ಲೈಸೆನ್ಸ್​ ಹೊಂದಿರಬೇಕು.



ಕ್ರೀಡಾ ಅರ್ಹತೆ:

ರಾಷ್ಟ್ರೀಯ/ಅಂತರಾಷ್ಟ್ರೀಯ ಕ್ರೀಡೆಯಲ್ಲಿ ರಾಜ್ಯ/ದೇಶವನ್ನು ಪ್ರತಿನಿಧಿಸಿರುವ ಕ್ರೀಡಾಪಟುಗಳು.

ಅಂತರ್-ಯೂನಿವರ್ಸಿಟಿ ಕ್ರೀಡಾ ಮಂಡಳಿಯು ನಡೆಸಿದ ಇಂಟರ್-ಯೂನಿವರ್ಸಿಟಿ ಟೂರ್ನಮೆಂಟ್ಸ್​​ನಲ್ಲಿ ತಮ್ಮ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿರುವ ಕ್ರೀಡಾಪಟುಗಳು.

ಅಖಿಲ ಭಾರತ ಸ್ಕೂಲ್​ ಗೇಮ್ಸ್​ ಫೆಡರೇಶನ್​ ನಡೆಸಿದ ಕ್ರೀಡಾಕೂಟದಲ್ಲಿ ರಾಜ್ಯ ಶಾಲಾ ತಂಡಗಳನ್ನು ಪ್ರತಿನಿಧಿಸಿರುವ ಕ್ರೀಡಾಪಟುಗಳು.

ರಾಷ್ಟ್ರೀಯ ಶಾರೀರಿಕ ದಕ್ಷತೆಯ ಚಾಲನೆಯ ಅಡಿಯಲ್ಲಿ ದೈಹಿಕ ದಕ್ಷತೆಯಲ್ಲಿ ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದ ಕ್ರೀಡಾಪಟುಗಳು.

ವಯೋಮಿತಿ:

ಪೋಸ್ಟ್​ಮ್ಯಾನ್​, ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-27 ವರ್ಷದೊಳಗಿರಬೇಕು.

ಉದ್ಯೋಗದ ಸ್ಥಳ:

ಪೋಸ್ಟ್​ಮ್ಯಾನ್​, ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ:

ಪೋಸ್ಟಲ್ ಅಸಿಸ್ಟೆಂಟ್/ಸಾರ್ಟಿಂಗ್ ಅಸಿಸ್ಟೆಂಟ್ -ಮಾಸಿಕ ₹ 25,500-81,100

ಪೋಸ್ಟ್​ಮ್ಯಾನ್- ಮಾಸಿಕ ₹ 21,700-69,100

ಆಯ್ಕೆ ಪ್ರಕ್ರಿಯೆ:

ಶಾರ್ಟ್​ಲಿಸ್ಟಿಂಗ್
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಇದನ್ನೂ ಓದಿ: India Post Recruitment 2021: ತಿಂಗಳಿಗೆ ₹ 81,100 ಸಂಬಳ; SSLC, PUC ಪಾಸಾದವರಿಗೆ ಪೋಸ್ಟ್​ ಆಫೀಸ್​​​​​ ಉದ್ಯೋಗ

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಹಾಗೂ ತಮ್ಮ ಇತ್ತೀಚಿನ ಪಾಸ್​ಪೋರ್ಟ್​​ ಸೈಜಿನ ಫೋಟೋ ಜೊತೆಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಅಸಿಸ್ಟೆಂಟ್ ಡೈರೆಕ್ಟರ್ ಆಫ್ ಪೋಸ್ಟಲ್ ಸರ್ವೀಸಸ್
ಚೀಫ್​ ಪೋಸ್ಟ್​ ಮಾಸ್ಟರ್ ಜನರಲ್ ಕಚೇರಿ
ಪಶ್ಚಿಮ ಬಂಗಾಳ ಸರ್ಕಲ್
ಪಿ-36, ಸಿ.ಆರ್. ಅವೆನ್ಯೂ
ಯೋಗಾಯೋಗ್ ಭವನ್
ಕೊಲ್ಕತ್ತಾ- 700012



ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
Published by:Latha CG
First published: