India Post Recruitment 2021: ಮಾಸಿಕ ವೇತನ ₹80,000; 10th, 12th ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Himachal Pradesh Post Office Recruitment 2021: ಭಾರತೀಯ ಅಂಚೆ ಇಲಾಖೆ(India Post Office) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪೋಸ್ಟಲ್​ ಅಸಿಸ್ಟೆಂಟ್/ಸಾರ್ಟಿಂಗ್ ಅಸಿಸ್ಟೆಂಟ್(Postal Assistant/Sorting Assistant), ಪೋಸ್ಟ್​ಮ್ಯಾನ್(Postman)​ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್(Multi Tasking Staff) ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಕ್ರೀಡಾ ಕೋಟಾದಡಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರತಿಭಾನ್ವಿತ ಕ್ರೀಡಾ ಅಭ್ಯರ್ಥಿ(Sports Candidates)ಗಳನ್ನು ಈ ಹುದ್ದೆಗೆ ನೇಮಿಸಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್​ಲೈನ್(Offline Mode)​​ ಮೂಲಕ ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 15, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಹಿಮಾಚಲ ಪ್ರದೇಶ​ ಪೋಸ್ಟ್​ ಆಫೀಸ್ ನೇಮಕಾತಿ 2021ರ ಅಧಿಸೂಚನೆ:

ಮುಖ್ಯ ಪೋಸ್ಟ್​ ಮಾಸ್ಟರ್ ಜನರಲ್ ಕಚೇರಿ, ಹಿಮಾಚಲ ಪ್ರದೇಶ ಪೋಸ್ಟಲ್​​ ಸರ್ಕಲ್​ನಲ್ಲಿ ಒಟ್ಟು 18 ‘C‘ ಗ್ರೂಪ್​ ಪೋಸ್ಟಲ್​ ಅಸಿಸ್ಟೆಂಟ್/ಸಾರ್ಟಿಂಗ್ ಅಸಿಸ್ಟೆಂಟ್, ಪೋಸ್ಟ್​ಮ್ಯಾನ್​ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳು ಖಾಲಿ ಇವೆ. ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಹಿಮಾಚಲ ಪ್ರದೇಶ​ ಪೋಸ್ಟಲ್​ ಸರ್ಕಲ್ ಅಡಿಯಲ್ಲಿ ನೇಮಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್​ಸೈಟ್ indiapost.gov.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.





























ಸಂಸ್ಥೆಭಾರತೀಯ ಅಂಚೆ ಇಲಾಖೆ
ಹುದ್ದೆಯ ಹೆಸರುಪೋಸ್ಟಲ್​ ಅಸಿಸ್ಟೆಂಟ್/ಸಾರ್ಟಿಂಗ್ ಅಸಿಸ್ಟೆಂಟ್, ಪೋಸ್ಟ್​ಮ್ಯಾನ್​ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್
ಒಟ್ಟು ಹುದ್ದೆಗಳು18
ವಿದ್ಯಾರ್ಹತೆ10ನೇ ತರಗತಿ, 12ನೇ ತರಗತಿ ಪಾಸ್
ಅರ್ಜಿ ಸಲ್ಲಿಸುವ ವಿಧಾನಆಫ್​ಲೈನ್​
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15/12/2021



ಹುದ್ದೆಯ ವಿವರ:

  • ಪೋಸ್ಟಲ್ ಅಸಿಸ್ಟೆಂಟ್/ಸಾರ್ಟಿಂಗ್ ಅಸಿಸ್ಟೆಂಟ್- 13

  • ಪೋಸ್ಟ್​ಮ್ಯಾನ್-02

  • ಮಲ್ಟಿ ಟಾಸ್ಕಿಂಗ್ ಸ್ಟಾಫ್- 03


ಇದನ್ನೂ ಓದಿ:India Post Recruitment 2021: ತಿಂಗಳಿಗೆ ₹ 81,100 ಸಂಬಳ, 10ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

ವೇತನ:

  • ಪೋಸ್ಟಲ್ ಅಸಿಸ್ಟೆಂಟ್/ಸಾರ್ಟಿಂಗ್ ಅಸಿಸ್ಟೆಂಟ್ -ಮಾಸಿಕ ₹ 25,500-81,100

  • ಪೋಸ್ಟ್​ಮ್ಯಾನ್- ಮಾಸಿಕ ₹ 21,700-69,100

  • ಮಲ್ಟಿ-ಟಾಸ್ಕಿಂಗ್ ಸ್ಟಾಫ್ -ಮಾಸಿಕ ₹ 18,000- 56,900


ವಯೋಮಿತಿ:

  • ಪೋಸ್ಟಲ್ ಅಸಿಸ್ಟೆಂಟ್/ಸಾರ್ಟಿಂಗ್ ಅಸಿಸ್ಟೆಂಟ್- 18-27 ವರ್ಷ

  • ಪೋಸ್ಟ್​ಮ್ಯಾನ್-18 ವರ್ಷ ಮೇಲ್ಪಟ್ಟವರು

  • ಮಲ್ಟಿ ಟಾಸ್ಕಿಂಗ್ ಸ್ಟಾಫ್- 18-25 ವರ್ಷ




ವಿದ್ಯಾರ್ಹತೆ:

  • ಪೋಸ್ಟಲ್ ಅಸಿಸ್ಟೆಂಟ್/ಸಾರ್ಟಿಂಗ್ ಅಸಿಸ್ಟೆಂಟ್- ಅಭ್ಯರ್ಥಿಯು ಮಾನ್ಯತೆ ಪಡೆದ ಬೋರ್ಡ್​ ಅಥವಾ ವಿಶ್ವವಿದ್ಯಾನಿಲಯದಿಂದ 12ನೇ ತರಗತಿ ಪಾಸಾಗಿರಬೇಕು. ಜೊತೆಗೆ ಕ್ರೀಡಾ ಅರ್ಹತೆಯನ್ನು ಹೊಂದಿರಬೇಕು.

  • ಪೋಸ್ಟ್​ಮ್ಯಾನ್- ಅಭ್ಯರ್ಥಿಯು ಮಾನ್ಯತೆ ಪಡೆದ ಬೋರ್ಡ್​ ಅಥವಾ ವಿಶ್ವವಿದ್ಯಾನಿಲಯದಿಂದ 12ನೇ ತರಗತಿ ಪಾಸಾಗಿರಬೇಕು. ಜೊತೆಗೆ ಕ್ರೀಡಾ ಅರ್ಹತೆಯನ್ನು ಹೊಂದಿರಬೇಕು.

  • ಮಲ್ಟಿ ಟಾಸ್ಕಿಂಗ್ ಸ್ಟಾಫ್- ಅಭ್ಯರ್ಥಿಯು ಮಾನ್ಯತೆ ಪಡೆದ ಬೋರ್ಡ್​ ಅಥವಾ ವಿಶ್ವವಿದ್ಯಾನಿಲಯದಿಂದ 10ನೇ ತರಗತಿ ಪಾಸಾಗಿರಬೇಕು. ಜೊತೆಗೆ ಕ್ರೀಡಾ ಅರ್ಹತೆಯನ್ನು ಹೊಂದಿರಬೇಕು.


ಇದನ್ನೂ ಓದಿ:India Post Office Recruitment 2021: ತಿಂಗಳಿಗೆ ₹ 81,100 ಸಂಬಳ; 10th, 12th ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

ಅರ್ಜಿ ಶುಲ್ಕ:

ಸಾಮಾನ್ಯ/ EWS/OBC/OC ಅಭ್ಯರ್ಥಿಗಳಿಗೆ - 400 ರೂ. ಅರ್ಜಿ ಶುಲ್ಕ
SC/ST/PHC/ಮಹಿಳಾ ಅಭ್ಯರ್ಥಿಗಳಿಗೆ-100 ರೂ. ಅರ್ಜಿ ಶುಲ್ಕ

ಅಭ್ಯರ್ಥಿಗಳು ಚಲನ್ ಬಳಸಿ ಯಾವುದೇ ಗಣಕೀಕೃತ ಅಂಚೆ ಕಚೇರಿಗಳಲ್ಲಿ ಇ-ಪೇಮೆಂಟ್​​ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಹಾಗೂ ತಮ್ಮ ಇತ್ತೀಚಿನ ಪಾಸ್​ಪೋರ್ಟ್​​ ಸೈಜಿನ ಫೋಟೋ ಜೊತೆಗೆ,

ಮುಖ್ಯ ಪೋಸ್ಟ್​ಮಾಸ್ಟರ್​ ಜನರಲ್,

HP ಸರ್ಕಲ್, ಕಸುಂಪತಿ,

ಶಿಮ್ಲಾ -171009

ಈ ವಿಳಾಸಕ್ಕೆ ಡಿಸೆಂಬರ್ 15 ರೊಳಗೆ ಮುಂಚೆ ರಿಜಿಸ್ಟರ್ಡ್​/ ಸ್ಪೀಡ್ ಪೋಸ್ಟ್​ ಮೂಲಕ ಕಳುಹಿಸಬೇಕು.


ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

Published by:Latha CG
First published: