India Post Recruitment 2021: ತಿಂಗಳಿಗೆ ₹81,100 ಸಂಬಳ, 10ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

ಒಟ್ಟು 95 ಹುದ್ದೆಗಳು ಖಾಲಿ ಇದ್ದು, ಅಕ್ಟೋಬರ್ 21ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಡಿಸೆಂಬರ್ 3ರವರೆಗೆ ಆಫ್​ಲೈನ್​(ಪೋಸ್ಟಲ್) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಭಾರತೀಯ ಅಂಚೆ ಇಲಾಖೆ(Indian Postal Department)ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪೋಸ್ಟಲ್ ಅಸಿಸ್ಟೆಂಟ್(Postal Assistant), ಸಾರ್ಟಿಂಗ್ ಅಸಿಸ್ಟೆಂಟ್(Sorting Assistant), ಪೋಸ್ಟ್​​ಮ್ಯಾನ್(Postman) ಹಾಗೂ ಮಲ್ಟಿ ಟಾಸ್ಕಿಂಗ್ ಸ್ಟಾಫ್(Multi Tasking Staff)​ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 95 ಹುದ್ದೆಗಳು ಖಾಲಿ ಇದ್ದು, ಅಕ್ಟೋಬರ್ 21ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಡಿಸೆಂಬರ್ 3ರವರೆಗೆ ಆಫ್​ಲೈನ್​(ಪೋಸ್ಟಲ್) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಭಾರತೀಯ ಅಂಚೆ ಇಲಾಖೆ
ಹುದ್ದೆಯ ಹೆಸರುಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್, ಪೋಸ್ಟ್​​ಮ್ಯಾನ್ ಹಾಗೂ ಮಲ್ಟಿ ಟಾಸ್ಕಿಂಗ್ ಸ್ಟಾಫ್
ಒಟ್ಟು ಹುದ್ದೆಗಳು95
ವಿದ್ಯಾರ್ಹತೆ10ನೇ ತರಗತಿ, 12ನೇ ತರಗತಿ, ಕ್ರೀಡಾ ಕೋಟಾ
ಉದ್ಯೋಗದ ಸ್ಥಳತಿರುವನಂತಪುರಂ-ಕೇರಳ
ಸಂಬಳಮಾಸಿಕ ₹ 18,000- 81,100
ಅರ್ಜಿ ಸಲ್ಲಿಸುವ ವಿಧಾನಆಫ್​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ 21/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ03/12/2021

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03/12/2021

ಇದನ್ನೂ ಓದಿ: Post Office Recruitment 2021: ತಿಂಗಳಿಗೆ ₹81,100 ಸಂಬಳ, 10th, 12th ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಕೆಲಸ

ಅರ್ಜಿ ಶುಲ್ಕ:

ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕು.

ಹುದ್ದೆಯ ಮಾಹಿತಿ:

ಪೋಸ್ಟಲ್​ ಅಸಿಸ್ಟೆಂಟ್- 16 ಹುದ್ದೆಗಳು
ಸಾರ್ಟಿಂಗ್ ಅಸಿಸ್ಟೆಂಟ್ - 13 ಹುದ್ದೆಗಳು
ಪೋಸ್ಟ್​ಮ್ಯಾನ್​- 28 ಹುದ್ದೆಗಳು
ಮ್ಯೇಲ್ ಗಾರ್ಡ್- 1 ಹುದ್ದೆ
ಮಲ್ಟಿ ಟಾಸ್ಕಿಂಗ್ ಸ್ಟಾಫ್- 37 ಹುದ್ದೆಗಳು

ವಿದ್ಯಾರ್ಹತೆ:

ಪೋಸ್ಟಲ್​ & ಸಾರ್ಟಿಂಗ್ ಅಸಿಸ್ಟೆಂಟ್- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಲ್ಲಿ 12ನೇ ತರಗತಿ ಉತ್ತೀರ್ಣರಾಗಿರಬೇಕು.

ಪೋಸ್ಟ್​ಮ್ಯಾನ್ &ಮ್ಯೇಲ್ ಗಾರ್ಡ್​- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಲ್ಲಿ 12ನೇ ತರಗತಿ ಉತ್ತೀರ್ಣರಾಗಿರಬೇಕು. ಸ್ಥಳೀಯ ಭಾಷೆ ಮಲೆಯಾಳಂ ಕಡ್ಡಾಯವಾಗಿ ಗೊತ್ತಿರಬೇಕು.

ಮಲ್ಟಿ ಟಾಸ್ಕಿಂಗ್ ಸ್ಟಾಫ್- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಲ್ಲಿ 10ನೇ ತರಗತಿ ಉತ್ತೀರ್ಣರಾಗಿರಬೇಕು. ಸ್ಥಳೀಯ ಭಾಷೆ ಮಲೆಯಾಳಂ ಕಡ್ಡಾಯವಾಗಿ ಗೊತ್ತಿರಬೇಕು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಶೈಕ್ಷಣಿಕ ಮತ್ತು ಕ್ರೀಡಾ ಅರ್ಹತೆ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ:India Post GDS Recruitment 2021: 10ನೇ ತರಗತಿ ಪಾಸಾದವರಿಗೆ ಅಂಚೆ ಕಚೇರಿಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಸಲು ಹೀಗೆ ಮಾಡಿ

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸೂಕ್ತ ಮಾಹಿತಿಯೊಂದಿಗೆ ಭರ್ತಿ ಮಾಡಿ, ‘‘ ಅಸಿಸ್ಟೆಂಟ್ ಡೈರೆಕ್ಟರ್, ಮುಖ್ಯ ಪೋಸ್ಟ್​ ಮಾಸ್ಟರ್ ಕಚೇರಿ, ಕೇರಳ ಸರ್ಕಲ್, ತಿರುವನಂತಪುರಂ-695033‘‘ ಗೆ ಡಿಸೆಂಬರ್ 3ರೊಳಗೆ ಅರ್ಜಿ ಪೋಸ್ಟ್ ಮೂಲಕ ಕಳುಹಿಸಬೇಕು.


ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

Published by:Latha CG
First published: