ಸೌತ್ ಈಸ್ಟರ್ನ್ ರೈಲ್ವೆ(ಆಗ್ನೇಯ ರೈಲ್ವೆ) (South Eastern Railway)ಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1785 ಅಪ್ರೆಂಟಿಸ್(Apprentice) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 10ನೇ ತರಗತಿ, ಐಟಿಐ(SSLC, ITI) ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಡಿಸೆಂಬರ್ 14ರವರೆಗೆ ಅರ್ಜಿ ಹಾಕಬಹುದಾಗಿದೆ. ನವೆಂಬರ್ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಆಗ್ನೇಯ ರೈಲ್ವೆಯ ಅಧಿಕೃತ ವೆಬ್ಸೈಟ್ ser.indianrailways.gov.in ಗೆ ಭೇಟಿ ನೀಡಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಆಗ್ನೇಯ ರೈಲ್ವೆ |
ಹುದ್ದೆಯ ಹೆಸರು |
ಅಪ್ರೆಂಟಿಸ್ |
ಒಟ್ಟು ಹುದ್ದೆಗಳು |
1785 |
ವಿದ್ಯಾರ್ಹತೆ |
10ನೇ ತರಗತಿ, ಐಟಿಐ ಪಾಸ್ |
ಕೆಲಸದ ಸ್ಥಳ |
ಕೊಲ್ಕತ್ತಾ |
ಸಂಬಳ |
ನಿಯಮಾನುಸಾರ |
ಅರ್ಜಿ ಸಲ್ಲಿಸುವ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
15/11/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
14/12/2021 |
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15/11/2021
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14/12/2021
ಇದನ್ನೂ ಓದಿ:Koppal Anganwadi Recruitment 2021: ಕೊಪ್ಪಳದಲ್ಲಿ 161 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಶುಲ್ಕ:
- ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕು.
- SC/ST/PWD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 15-24 ವರ್ಷದೊಳಗೆ ಇರಬೇಕು.
ವೇತನ:
ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.
ಉದ್ಯೋಗದ ಸ್ಥಳ:
ಆಯ್ಕೆಯಾದ ಅಭ್ಯರ್ಥಿಯನ್ನು ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಕೆಲಸಕ್ಕೆ ನೇಮಿಸಲಾಗುತ್ತದೆ.
ಇದನ್ನೂ ಓದಿ:South Eastern Railway Recruitment 2021: ಸ್ನಾತಕೋತ್ತರ ಪದವೀಧರರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ದಾಖಲಾತಿ ಪರಿಶೀಲನೆ
- ವೈಯಕ್ತಿಕ ಸಂದರ್ಶನ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ