South Eastern Railway Recruitment 2021: ಆಗ್ನೇಯ ರೈಲ್ವೆ(South Eastern Railway) ಯಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 520 ಗೂಡ್ಸ್ ಗಾರ್ಡ್(Goods Guard) ಹುದ್ದೆಗಳು ಖಾಲಿ ಇದ್ದು, ಪದವೀಧರರು(Degree Candidates) ಅರ್ಜಿ ಸಲ್ಲಿಸಬಹುದು. ನವೆಂಬರ್ 24ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 23 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last date)ವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಆಗ್ನೇಯ ರೈಲ್ವೆಯ ಅಧಿಕೃತ ವೆಬ್ಸೈಟ್ ser.indianrailways.gov.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಆಗ್ನೇಯ ರೈಲ್ವೆ |
ಹುದ್ದೆಯ ಹೆಸರು |
ಗೂಡ್ಸ್ ಗಾರ್ಡ್ |
ಒಟ್ಟು ಹುದ್ದೆಗಳು |
520 |
ವಿದ್ಯಾರ್ಹತೆ |
ಪದವಿ |
ಉದ್ಯೋಗದ ಸ್ಥಳ |
ಕೊಲ್ಕತ್ತಾ |
ವೇತನ |
ನಿಯಮಾನುಸಾರ |
ಅರ್ಜಿ ಸಲ್ಲಿಸುವ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
24/11/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
23/12/2021 |
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/12/2021
ಇದನ್ನೂ ಓದಿ: India Post Recruitment 2021: PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ; ಮಾಸಿಕ ವೇತನ ₹ 81,100
ಹುದ್ದೆಯ ಮಾಹಿತಿ:
ಗೂಡ್ಸ್ ಗಾರ್ಡ್- 520 ಹುದ್ದೆಗಳು
ಸಾಮಾನ್ಯ- 277
SC-126
ST-30
OBC-87
ವಿದ್ಯಾರ್ಹತೆ:
ಗೂಡ್ಸ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ನಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ವಯೋಮಿತಿ:
ಗೂಡ್ಸ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 42 ವರ್ಷ, ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 45 ವರ್ಷ, SC/ST ವರ್ಗದ ಅಭ್ಯರ್ಥಿಗಳಿಗೆ 47 ವರ್ಷ ವಯಸ್ಸಾಗಿರಬೇಕು.
ಉದ್ಯೋಗದ ಸ್ಥಳ:
ಗೂಡ್ಸ್ ಗಾರ್ಡ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಇದನ್ನೂ ಓದಿ: India Post Recruitment 2021:ತಿಂಗಳಿಗೆ ₹ 81,000 ಸಂಬಳ; SSLC, PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ
ವೇತನ:
ಗೂಡ್ಸ್ ಗಾರ್ಡ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ಮಾಸಿಕ ವೇತನ ನೀಡಲಾಗುತ್ತದೆ. ಅಂದರೆ 7ನೇ ವೇತನ ಆಯೋಗದ ಅನ್ವಯ ಮಾಸಿಕ ₹5200-20,200 ರವರೆಗೆ ವೇತನ ಕೊಡಲಾಗುತ್ತದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ