Indian Air Force Recruitment 2021: ಭಾರತೀಯ ವಾಯುಪಡೆ(Indian Air Force) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 317 ಗ್ರೌಂಡ್ ಡ್ಯೂಟಿ(Ground Duty) (ಟೆಕ್ನಿಕಲ್ & ನಾನ್ ಟೆಕ್ನಿಕಲ್), ಕಮಿಷನ್ಡ್ ಆಫೀಸರ್(Commissioned Officer) ಹುದ್ದೆಗಳು ಖಾಲಿ ಇದ್ದು, ಬಿಇ, ಬಿ ಟೆಕ್, ಎಂಎಸ್ಸಿ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 1ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ವಾಯುಪಡೆಯ ಅಧಿಕೃತ ವೆಬ್ಸೈಟ್ indianairforce.nic.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಭಾರತೀಯ ವಾಯುಪಡೆ |
ಹುದ್ದೆಯ ಹೆಸರು |
ಗ್ರೌಂಡ್ ಡ್ಯೂಟಿ (ಟೆಕ್ನಿಕಲ್ & ನಾನ್ ಟೆಕ್ನಿಕಲ್), ಕಮಿಷನ್ಡ್ ಆಫೀಸರ್ |
ಒಟ್ಟು ಹುದ್ದೆಗಳು |
317 |
ವಿದ್ಯಾರ್ಹತೆ |
ಬಿಇ, ಬಿ ಟೆಕ್, ಎಂಎಸ್ಸಿ |
ಉದ್ಯೋಗದ ಸ್ಥಳ |
ಭಾರತದಲ್ಲಿ ಎಲ್ಲಿ ಬೇಕಾದರೂ |
ವೇತನ |
ಮಾಸಿಕ ₹ 56,100-1,77,500 |
ಅರ್ಜಿ ಸಲ್ಲಿಕೆ ಬಗೆ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
01/12/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
30/12/2021 |
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/12/2021
ಇದನ್ನೂ ಓದಿ: India Post Recruitment 2021: PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ; ಮಾಸಿಕ ವೇತನ ₹ 81,100
ಅರ್ಜಿ ಶುಲ್ಕ:
ಗ್ರೌಂಡ್ ಡ್ಯೂಟಿ (ಟೆಕ್ನಿಕಲ್ & ನಾನ್ ಟೆಕ್ನಿಕಲ್), ಕಮಿಷನ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 250 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ವಿದ್ಯಾರ್ಹತೆ:
ಗ್ರೌಂಡ್ ಡ್ಯೂಟಿ (ಟೆಕ್ನಿಕಲ್ & ನಾನ್ ಟೆಕ್ನಿಕಲ್), ಕಮಿಷನ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ, ಬಿ. ಟೆಕ್, ಎಂಎಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕಮಿಷನ್ಡ್ ಆಫೀಸರ್ : 20-24 ವರ್ಷ
ಗ್ರೌಂಡ್ ಡ್ಯೂಟಿ (ಟೆಕ್ನಿಕಲ್ & ನಾನ್ ಟೆಕ್ನಿಕಲ್): 20-26 ವರ್ಷ
ಇದನ್ನೂ ಓದಿ: India Railway Recruitment 2021: ಆಗ್ನೇಯ ರೈಲ್ವೆಯಲ್ಲಿ ಪದವೀಧರರಿಗೆ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ
ವೇತನ:
ಗ್ರೌಂಡ್ ಡ್ಯೂಟಿ (ಟೆಕ್ನಿಕಲ್ & ನಾನ್ ಟೆಕ್ನಿಕಲ್), ಕಮಿಷನ್ಡ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 56,100-1,77,500 ವೇತನ ನೀಡಲಾಗುತ್ತದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಪ್ರಾಕ್ಟಿಕಲ್/ಫಿಜಿಕಲ್/ಸ್ಕಿಲ್ ಟೆಸ್ಟ್
ವೈಯಕ್ತಿಕ ಸಂದರ್ಶನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ