Indian Army Recruitment: ಭಾರತೀಯ ಸೇನೆಯಲ್ಲಿ 3068 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಎಸ್​ಎಸ್​ಎಲ್​ಸಿ ಆಗಿದ್ರೆ ಸಾಕು

Jobs in Indian Army: ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಭಾರತೀಯ ಸೇನೆಯಲ್ಲಿ (Indian Army) ಬರೋಬ್ಬರಿ 3068 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಟ್ರೇಡ್ಸ್‌ಮ್ಯಾನ್ ಮೇಟ್, ಫೈರ್‌ಮ್ಯಾನ್  (Tradesman Mate and Fireman) ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​​ 22 ಆಗಿದೆ.

    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಭಾರತೀಯ ಸೇನೆ
    ಹುದ್ದೆಯ ಹೆಸರು: ಟ್ರೇಡ್ಸ್‌ಮ್ಯಾನ್ ಮೇಟ್, ಫೈರ್‌ಮ್ಯಾನ್
    ಹುದ್ದೆಗಳ ಸಂಖ್ಯೆ: 3068
    ಉದ್ಯೋಗ ಸ್ಥಳ: ಅಖಿಲ ಭಾರತ
    ವೇತನ: 18000-63200 ರೂ. ಪ್ರತಿ ತಿಂಗಳು



























    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವೇತನ
    ಟ್ರೇಡ್ಸ್‌ಮ್ಯಾನ್ ಮೇಟ್2313ಎಸ್​ಎಸ್​ಎಲ್​ಸಿ18000-56900 ರೂ ಮಾಸಿಕ
    ಅಗ್ನಿಶಾಮಕ656ಎಸ್​ಎಸ್​ಎಲ್​ಸಿ19900-63200 ರೂ ಮಾಸಿಕ
    ಜೂನಿಯರ್ ಆಫೀಸ್ ಅಸಿಸ್ಟೆಂಟ್ (JOA)99ಪಿಯುಸಿ, ಪದವಿ, ಡಿಪ್ಲೊಮಾ19900-63200 ರೂ ಮಾಸಿಕ

    ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.

    ಇದನ್ನು ಓದಿ: ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅಧಿಸೂಚನೆ ಪ್ರಕಟ: ಈ ರೀತಿ ಅರ್ಜಿ ಸಲ್ಲಿಕೆ ಮಾಡಿ

    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
    ಪ.ಜಾ, ಪ.ಪಂ  ಅಭ್ಯರ್ಥಿಗಳು: 5 ವರ್ಷಗಳು
    ವಿಕಲಚೇತನ) ಅಭ್ಯರ್ಥಿಗಳು: 10 ವರ್ಷಗಳು

    ಅರ್ಜಿ ಶುಲ್ಕ:
    ಅರ್ಜಿ ಶುಲ್ಕ ವಿನಾಯಿತಿ

    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದೈಹಿಕ ಪರೀಕ್ಷೆ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01 ಸೆಪ್ಟೆಂಬರ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಸೆಪ್ಟೆಂಬರ್​ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: aocrecruitment.gov.in

    ಇದನ್ನು ಓದಿ: ಕೆಪಿಎಸ್​ಸಿಯಿಂದ 229 ಅಸಿಸ್ಟಂಟ್​ ಇಂಜಿನಿಯರ್​ ಹುದ್ದೆಗೆ ಅರ್ಜಿ ಆಹ್ವಾನ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಇತ್ಯಾದಿ ದಾಖಲೆಗಳನ್ನು ಅರ್ಜಿಯಲ್ಲಿ ದಾಖಲಿಸಿ

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: