• Home
  • »
  • News
  • »
  • jobs
  • »
  • Indian Army Recruitment 2022: ಭಾರತೀಯ ಸೇನೆಯಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ ಹುದ್ದೆ ನೇಮಕಾತಿ

Indian Army Recruitment 2022: ಭಾರತೀಯ ಸೇನೆಯಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ ಹುದ್ದೆ ನೇಮಕಾತಿ

Indian Army

Indian Army

ಅರ್ಜಿಯನ್ನು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 6 ಆಗಿದೆ.

  • Share this:

    ಭಾರತೀಯ ಸೇನೆಯಲ್ಲಿ 128 ಜೂನಿಯರ್ ಕಮಿಷನ್ಡ್ ಆಫೀಸರ್ (Junior Commissioned Officer (Religious Teacher) ಹುದ್ದೆ ನೇಮಕಾತಿ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಧಾರ್ಮಿಕ ಶಿಕ್ಷಕರಾಗಿ ಕಾರ್ಯ ನಿರ್ವಹಣೆ ಮಾಡಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 6 ಆಗಿದೆ.


    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.


    ಸಂಸ್ಥೆಯ ಹೆಸರು: ಭಾರತೀಯ ಸೇನೆ
    ಹುದ್ದೆಯ ಹೆಸರು: ಜೂನಿಯರ್ ಕಮಿಷನ್ಡ್ ಆಫೀಸರ್ (ಧಾರ್ಮಿಕ ಶಿಕ್ಷಕ)
    ಹುದ್ದೆಗಳ ಸಂಖ್ಯೆ: 128
    ಉದ್ಯೋಗ ಸ್ಥಳ: ಅಖಿಲ ಭಾರತ
    ವೇತನ: ಭಾರತೀಯ ಸೇನೆಯ ನಿಯಮಗಳ ಪ್ರಕಾರ

    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆ
    ಪಂಡಿತ್108ಕರಮ್​ ಕಂಡ್​ನಲ್ಲಿ ಡಿಪ್ಲೊಮಾ ಪದವಿ
    ಪಂಡಿತ್ (ಗೋರ್ಖಾ) ಗೂರ್ಖಾ ರೆಜಿಮೆಂಟ್ಸ್5ಕರಮ್​ ಕಂಡ್​ನಲ್ಲಿ ಡಿಪ್ಲೊಮಾ ಪದವಿ
    ಗ್ರಂಥಿ8ಪದವಿ
    ಮೌಲ್ವಿ (ಸುನ್ನಿ)3 ಪದವಿ
    ಮೌಲ್ವಿ (ಶಿಯಾ) ಲಡಾಖ್ ಸ್ಕೌಟ್ಸ್1 ಪದವಿ
    ಪಡ್ರೆ2 ಪದವಿ
    ಬೋಧ ಸನ್ಯಾಸಿ (ಮಹಾಯಾನ) ಲಡಾಖ್ ಸ್ಕೌಟ್ಸ್1 ಪದವಿ

    ವಯೋಮಿತಿ ಸಡಿಲಿಕೆ:
    ಭಾರತೀಯ ಸೇನೆಗೆ ಸೇರುವ ನಿಯಮಗಳ ಪ್ರಕಾರ


    ಅರ್ಜಿ ಸಲ್ಲಿಕೆ: ಆಫ್​ಲೈನ್​


    ಇದನ್ನು ಓದಿ: ಡ್ರಗ್​ ಇನ್ಸ್​ಪೆಕ್ಟರ್​ ಹುದ್ದೆ ನೇಮಕಾತಿ; ಇಲ್ಲಿದೆ ವಿವರ


    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಸಂದರ್ಶನ


    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08 ಅಕ್ಟೋಬರ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಅರ್ಜಿಯ ಹಾರ್ಡ್ ಪ್ರತಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 06 ನವೆಂಬರ್ 2022


    ಇದನ್ನು ಓದಿ:  ಡಾಟಾ ಎಂಟ್ರಿ ಆಪರೇಟರ್​ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು


    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: joinindianarmy.nic.in


    ಅರ್ಜಿ ಸಲ್ಲಿಕೆ ಪ್ರಕ್ರಿಯೆ 


    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.


    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


    -ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. ಅದರ ಮಾಹಿತಿ ಅಪ್​ಲೋಡ್​ ಮಾಡಿ


    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸ್ಪೀಡ್​ ಅಥವಾ ರಿಜಿಸ್ಟರ್​ ಪೋಸ್ಟ್​ ಅನ್ನು ನಿಗದಿತ ದಿನಾಂಕ್ಕೆ ಮುನ್ನ ತಲುವಂತೆ ಕಳುಹಿಸಿ.

    Published by:Seema R
    First published: