Indian Army Recruitment 2022: ಭಾರತೀಯ ಸೇನೆಯಲ್ಲಿದೆ 90 ಹುದ್ದೆ; ಪಿಯುಸಿ ಆಗಿದ್ರೆ ಅರ್ಜಿ ಸಲ್ಲಿಸಿ

Indian Army Recruitment 2022: ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಭಾರತೀಯ ಸೇನೆಯಲ್ಲಿ (Indian Army) ವಿವಿಧ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. 10+2 ತಾಂತ್ರಿಕ ಪ್ರವೇಶ 48 (10+2 Entry Scheme - 48) ಯೋಜನೆಗೆ ಈ ಹುದ್ದೆ ನೇಮಕಾತಿ ನಡೆಯಲಿದೆ. ಒಟ್ಟು 90 ಹುದ್ದೆಗಳು ಖಾಲಿ ಇದ್ದು, ಪಿಯುಸಿಯಲ್ಲಿ ಪಿಸಿಎಂ ಅಧ್ಯಯನ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 21 ಆಗಿದೆ.

    ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಭಾರತೀಯ ಸೇನೆ
    ಹುದ್ದೆ ಹೆಸರು10+2 ಟೆಕ್ನಿಕಲ್ ಎಂಟ್ರಿ ಸ್ಕೀಮ್ - 48
    ಹುದ್ದೆಗಳ ಸಂಖ್ಯೆ90
    ಉದ್ಯೋಗ ಸ್ಥಳಅಖಿಲ ಭಾರತ
    ವೇತನ56100-250000 ರೂ. ಪ್ರತಿ ತಿಂಗಳು

    ಶೈಕ್ಷಣಿಕ ಅರ್ಹತೆ: ಭಾರತೀಯ ಸೇನೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
    ಅಭ್ಯರ್ಥಿಯು JEE (ಮೇನ್ಸ್) 2022 ರ ಪರೀಕ್ಷೆಗೆ ಹಾಜರಾಗಿರಬೇಕು.

    ಇದನ್ನು ಓದಿ: ಬಳ್ಳಾರಿ ಜಿಲ್ಲಾ ಪಂಚಾಯತ್​ನಲ್ಲಿ ನರೇಗಾ ಯೋಜನೆ ಅಡಿ ಖಾಲಿ ಇದೆ ವಿವಿಧ ಹುದ್ದೆ

    ವಯೋಮಿತಿ: ಭಾರತೀಯ ಸೇನಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 16.5 ವರ್ಷಗಳು ಮತ್ತು ಗರಿಷ್ಠ 19.5 ವರ್ಷಗಳನ್ನು ಹೊಂದಿರಬೇಕು.

    ಆಯ್ಕೆ ಪ್ರಕ್ರಿಯೆ:
    ವೈದ್ಯಕೀಯ ಪರೀಕ್ಷೆ, ದೈಹಿಕ ಮಾನದಂಡಗಳು, ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22 ಆಗಸ್ಟ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21 ಸೆಪ್ಟೆಂಬರ್​​ 2022
    ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಎಸ್​ಎಸ್​ಬಿ ಸಂದರ್ಶನದ ದಿನಾಂಕ: ಅಕ್ಟೋಬರ್-2022 ರಿಂದ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: joinindianarmy.nic.in

    ಇದನ್ನು ಓದಿ: ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದಲ್ಲಿದೆ ವಿವಿಧ ಹುದ್ದೆ; ಎಸ್​ಎಸ್​ಎಲ್​ಸಿ, ಪಿಯುಸಿ ಆಗಿದ್ರೆ ಅರ್ಜಿ ಸಲ್ಲಿಸಿ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ:

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್ ಸೇರಿದಂತೆ ಅಗತ್ಯ ದಾಖಲೆಗಳನ್ನು ನೀಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ
    Published by:Seema R
    First published: