Indian Navy Recruitment: 10ನೇ ಕ್ಲಾಸ್ ಓದಿದವರಿಗೆ ನೌಕಪಡೆಯಲ್ಲಿ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆಗೆ 2 ದಿನವಷ್ಟೇ ಬಾಕಿ

Trades mate jobs in Indian navy : ಎಸ್​ಎಸ್​ಎಲ್​ಸಿ ಮತ್ತು ಐಟಿಐ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 6 ಆಗಿದೆ.

ಬೇಗ ಅರ್ಜಿ ಹಾಕಿ

ಬೇಗ ಅರ್ಜಿ ಹಾಕಿ

  • Share this:
    ಭಾರತೀಯ ನೌಕಾ ಪಡೆ (Indian Navy)  112 ಟ್ರೇಡ್ಸ್​ ಮ್ಯಾನ್​​ (Tradesman Mate)​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಂಡಮಾನ್​ ಮತ್ತು ನಿಕೋಬರ್​ ಹೆಡ್​ಕ್ವಾಟ್ರಸ್​ನಿಂದ ಗ್ರೂಪ್​ ಸಿಯ ನಾನ್​ ಗೆಜೆಟೆಡ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್​ಎಸ್​ಎಲ್​ಸಿ ಮತ್ತು ಐಟಿಐ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 6 ಆಗಿದೆ.

    ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಭಾರತೀಯ ನೌಕಾಪಡೆ
    ಹುದ್ದೆಟ್ರೇಡ್ಸ್‌ಮ್ಯಾನ್
    ಹುದ್ದೆಗಳ ಸಂಖ್ಯೆ112
    ಕಾರ್ಯ ನಿರ್ವಹಣೆ ಸ್ಥಳಭಾರತದಾದ್ಯಂತ
    ವೇತನ18000-56900 ರೂ. ಪ್ರತಿ ತಿಂಗಳು

    ಶೈಕ್ಷಣಿಕ ಅರ್ಹತೆ: ಭಾರತೀಯ ನೌಕಾಪಡೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ, ಐಟಿಐ ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ಆಕ್ಸೆಂಚರ್​ನಲ್ಲಿ ಭರ್ಜರಿ ನೇಮಕಾತಿ; ಬಿಇ, ಎಂಎಸ್ಸಿ ಆದವರಿಗೆ ಅವಕಾಶ

    ವಯಸ್ಸಿನ ಮಿತಿ: ಭಾರತೀಯ ನೌಕಾಪಡೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಟ ವಯಸ್ಸು 18 ವರ್ಷಗಳು ಗರಿಷ್ಠ ವಯಸ್ಸು 25 ವರ್ಷಗಳು ಹೊಂದಿರಬೇಕು.

    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
    ಪ.ಜಾ, ಪ.ವ ಅಭ್ಯರ್ಥಿಗಳು: 05 ವರ್ಷಗಳು
    ಮಾಜಿ ಸೈನಿಕ ಅಭ್ಯರ್ಥಿಗಳು: 03 ವರ್ಷಗಳು

    ಅರ್ಜಿ ಶುಲ್ಕ:
    ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ:
    ಸ್ಕ್ರೀನಿಂಗ್, ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06 ಆಗಸ್ಟ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06 ಸೆಪ್ಟೆಂಬರ್​ 2022

    ಇದನ್ನು ಓದಿ: ಬಿಬಿಎಂಪಿಯಲ್ಲಿ ಬೃಹತ್​ ನೇಮಕಾತಿ; 940 ಹುದ್ದೆಗೆ ವಾಕ್​ ಇನ್​ ಇಂಟರ್​ವ್ಯೂ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: joinindiannavy.gov.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    ಬಳಿಕ andaman.gov.in ಮತ್ತು ncs.gov.in ಲಿಂಕ್​ ಗೆ ಕ್ಲಿಕ್​ ಮಾಡಿ ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್ ನೀಡಿ. ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದ ಬಳಿಕ ಸಲ್ಲಿಸುವ ಬಟನ್​ ಕ್ಲಿಕ್ ಮಾಡಿ
    Published by:Kavya V
    First published: