Indian Navy Recruitment 2021: ನೌಕಾಪಡೆಯಲ್ಲಿ 300 ಹುದ್ದೆಗಳು ಖಾಲಿ, 10ನೇ ತರಗತಿ ಪಾಸಾಗಿದ್ದರೆ ಸಾಕು, ತಿಂಗಳ ಸಂಬಳ ₹ 69,100

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ನೌಕಾಪಡೆ

ನೌಕಾಪಡೆ

  • Share this:
Indian Navy Recruitment 2021: ಭಾರತೀಯ ನೌಕಾಪಡೆ(Indian Navy) ಖಾಲಿ ಇರುವ ಅನೇಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರದ ಉದ್ಯೋಗ(Central Government Jobs) ಅರಸುತ್ತಿರುವವರು ಹಾಗೂ ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡಲು ಬಯಸುತ್ತಿರುವವರು ಕೂಡಲೇ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಭಾರತೀಯ ನೌಕಾಪಡೆಯು 300 ನಾವಿಕ(Sailors)​ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, 10ನೇ ತರಗತಿ(SSLC Pass) ಪಾಸಾದವರಿಗೆ ಇದು ಸುವರ್ಣಾವಕಾಶವಾಗಿದೆ.

ಅರ್ಹ ಮತ್ತು ಆಸಕ್ತ ಆಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದೇ ಅಕ್ಟೋಬರ್ 29ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ನವೆಂಬರ್ 2ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕೆಲಸ ಅರಸುತ್ತಿರುವ ಉದ್ಯೋಗಾಂಕ್ಷಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್​ಸೈಟ್ www.indiannavy.nic.in
ಗೆ ಭೇಟಿ ನೀಡಿ ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.







































ಸಂಸ್ಥೆ ಭಾರತೀಯ ನೌಕಾಪಡೆ
ಹುದ್ದೆಯ ಹೆಸರು ನಾವಿಕ
ಒಟ್ಟು ಹುದ್ದೆಗಳು 300
ವಿದ್ಯಾರ್ಹತೆ 10ನೇ ತರಗತಿ ಉತ್ತೀರ್ಣ
ಕೆಲಸದ ಸ್ಥಳ ಭಾರತದ ಯಾವುದೇ ಸ್ಥಳ
ಸಂಬಳ ಮಾಸಿಕ ₹ 14,600-69,100
ಅರ್ಜಿ ಸಲ್ಲಿಸುವ ಬಗೆ ಆನ್​ಲೈನ್
ಅರ್ಜಿ ಸಲ್ಲಿಕೆ ಆರಂಭ 29/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 02/11/2021



ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ: 29/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:02/11/2021

ಖಾಲಿ ಇರುವ ನಾವಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ಕಡ್ಡಾಯವಾಗಿ 10ನೇ ತರಗತಿ/ಮೆಟ್ರಿಕ್ಯುಲೇಷನ್ ಪಾಸಾಗಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಏಪ್ರಿಲ್​ 1, 2022 ರಿಂದ ಮಾರ್ಚ್​ 31, 2005ರೊಳಗೆ ಜನಿಸಿರಬೇಕು.

ಇದನ್ನೂ ಓದಿ:Indian Navy SSC Recruitment 2021: ಅರ್ಜಿ ಆಹ್ವಾನಿಸಿದ ಭಾರತೀಯ ನೌಕಾಪಡೆ; ತಿಂಗಳಿಗೆ ಸಂಬಳ 1.10 ಲಕ್ಷ ರೂ

ಸಂಬಳ:

ಪ್ರಾಥಮಿಕ ತರಬೇತಿ ಅವಧಿಯಲ್ಲಿ ಸ್ಟೇಫಂಡ್​ ಆಗಿ ತಿಂಗಳಿಗೆ 14,600 ರೂ. ನೀಡಲಾಗುತ್ತದೆ. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಬಳಿಕ, ಡಿಫೆನ್ಸ್​ ಪೇ ಮ್ಯಾಟ್ರಿಕ್ಸ್​ನ 3ನೇ ಲೆವೆಲ್​ಗೆ ಆಯ್ಕೆ ಮಾಡಲಾಗುತ್ತದೆ. ಆಗ ಅವರ ಸಂಬಳ ₹ 21,700-69,100 ರೂ.ವರೆಗೆ ಇರುತ್ತದೆ. ಇದರೊಂದಿಗೆ ₹5,200 DA ಅನ್ನು ಪ್ರತೀ ತಿಂಗಳು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

  • ದೈಹಿಕ ಸಾಮರ್ಥ್ಯದ ಪರೀಕ್ಷೆ

  • ಲಿಖಿತ ಪರೀಕ್ಷೆ

  • ಸಂದರ್ಶನ


ಅರ್ಜಿ ಸಲ್ಲಿಸುವುದು ಹೇಗೆ?

ನಾವಿಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 29/10/2021ರಿಂದ 02/11/2021 ರವರೆಗೆ ಕಾಲಾವಕಾಶ ಇರುತ್ತದೆ. ಈ ಕೆಳಕಂಡ ಹಂತಗಳ ಮೂಲಕ ಹುದ್ದೆಗೆ ಅರ್ಜಿ ಸಲ್ಲಿಸಿ.

  • ಮೊದಲು ಭಾರತೀಯ ನೌಕಾಪಡೆಯ ಅಧಿಕೃತ ವೆಬ್​ಸೈಟ್​ www.indiannavy.nic.in.ಗೆ ಭೇಟಿ ನೀಡಿ.

  • ಅಲ್ಲಿ ಕಾಣಸಿಗುವ “Recruitment/ Career/ Advertisement menu”

  • ಲಿಂಕ್​ ಮೇಲೆ ಕ್ಲಿಕ್ ಮಾಡಿ.

  • ಎಂಆರ್​ ಜಾಬ್​​ನ ನಾವಿಕ ಹುದ್ದೆಗಳ ನೋಟಿಫಿಕೇಶನ್​ಗಾಗಿ ಸರ್ಚ್ ಮಾಡಿ, ಅದರ ಮೇಲೆ ಕ್ಲಿಕ್ ಮಾಡಿ.

  • ಅಧಿಕೃತ ನೋಟಿಫಿಕೇಶನ್​ನ ಲಿಂಕ್​ನ್ನು ಡೌನ್​ಲೋಡ್ ಮಾಡಿಕೊಳ್ಳಿ.

  • ನೋಟಿಫಿಕೇಶನ್​ನಲ್ಲಿ ನೀಡಲಾಗಿರುವ ಎಲ್ಲಾ ಸೂಚನೆಗಳನ್ನು ಸರಿಯಾಗಿ ಓದಿ.

  • ಕೆಳಗೆ ನೀಡಲಾಗಿರುವ Official Online Apply/ Registration

  • ಲಿಂಕ್ ಮೇಲೆ ಕ್ಲಿಕ್ ಮಾಡಿ.

  • ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ

  • ಕೇಳಿರುವ ಎಲ್ಲಾ ಅಗತ್ಯ ದಾಖಲೆಗಳನ್ನು ಸರಿಯಾದ ಫಾರ್ಮ್ಯಾಟ್ ಹಾಗೂ ಸೈಜಿನಲ್ಲಿ ಅಪ್​ಲೋಡ್ ಮಾಡಿ.

  • ಕೊನೆಯಲ್ಲಿ ಎಲ್ಲಾ ಮಾಹಿತಿ ಸರಿಯಾಗಿದೆಯೇ ಎಂದು ಪರಿಶೀಲಿಸಿ, ಸಬ್​ಮಿಟ್ ಕೊಡಿ.

  • ಬಳಿಕ ಭಾರತೀಯ ನೌಕಾಪಡೆ ಅರ್ಜಿ ಶುಲ್ಕ ಕೇಳಿದ್ದರೆ, ಪಾವತಿಸಿ.

  • ಕೊನೆಯಲ್ಲಿ ಅರ್ಜಿಯನ್ನು ಸಬ್​ಮಿಟ್ ಮಾಡಿ, ಒಂದು ಪ್ರತಿಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ.


ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

https://kannada.news18.com/news/jobs/jobs-in-karnataka-india-abroad-government-private-it-company-sector-business-own-interview-634247.html
Published by:Latha CG
First published: