Indian Coast Guard Recruitment 2022: ನೌಕಪಡೆಯಲ್ಲಿದೆ 300 ಹುದ್ದೆ; ಅರ್ಜಿ ಸಲ್ಲಿಕೆಗೆ ಇನ್ನು ಎರಡು ದಿನ ಬಾಕಿ

ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಅಭ್ಯರ್ಥಿಗಳ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಬೇಗ ಅರ್ಜಿ ಹಾಕಿ

ಬೇಗ ಅರ್ಜಿ ಹಾಕಿ

  • Share this:
    ಭಾರತೀಯ ಕೋಸ್ಟ್​ ಗಾರ್ಡ್​ನಲ್ಲಿ (Indian Coast Guard) 300 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನಾವಿಕ ಮತ್ತು ಯಾತ್ರಿಕ್ (Navik and Yantrik)​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಅಭ್ಯರ್ಥಿಗಳ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 22 ಆಗಿದೆ. 

    ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಇಂಡಿಯನ್ ಕೋಸ್ಟ್ ಗಾರ್ಡ್
    ಹುದ್ದೆಯ ಹೆಸರು: ನಾವಿಕ್, ಯಾಂತ್ರಿಕ್
    ಹುದ್ದೆಗಳ ಸಂಖ್ಯೆ: 300
    ಉದ್ಯೋಗ ಸ್ಥಳ: ಅಖಿಲ ಭಾರತ
    ವೇತನ: 21700-29200 ರೂ. ಪ್ರತಿ ತಿಂಗಳು




























    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವೇತನ
    ನಾವಿಕ್ (ಸಾಮಾನ್ಯ ಕರ್ತವ್ಯ)225ಪಿಯುಸಿ21700 ರೂ ಮಾಸಿಕ
    ನಾವಿಕ್ (ದೇಶೀಯ ಶಾಖೆ)40ಎಸ್​ಎಸ್​ಎಲ್​ಸಿ21700 ರೂ ಮಾಸಿಕ
    ಯಾಂತ್ರಿಕ 3535ಎಸ್​ಎಸ್​ಎಲ್​ಸಿ, ಪಿಯುಸಿ ಅಥವಾ ಎಲೆಕ್ಟ್ರಿಕಲ್/ಮೆಕ್ಯಾನಿಕಲ್/ಎಲೆಕ್ಟ್ರಾನಿಕ್ಸ್/ಟೆಲಿಕಮ್ಯುನಿಕೇಶನ್ (ರೇಡಿಯೋ/ಪವರ್) ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪದವಿ29200 ರೂ ಮಾಸಿಕ


    ವಯಸ್ಸಿನ ಮಿತಿ: ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 22 ವರ್ಷಗಳನ್ನು ಹೊಂದಿರಬೇಕು.

    ಇದನ್ನು ಓದಿ: ಕೊಡಗು ಸೈನಿಕ ಶಾಲೆಯಲ್ಲಿ ನೇಮಕಾತಿ; ಬಿಎಡ್​ ಆಗಿದ್ರೆ ಅರ್ಜಿ ಸಲ್ಲಿಸಿ

    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
    ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು

    ಅರ್ಜಿ ಶುಲ್ಕ:
    ಪ.ಜಾ, ಪ.ಪಂ ಅಭ್ಯರ್ಥಿಗಳು: ಇಲ್ಲ
    ಎಲ್ಲಾ ಇತರ ಅಭ್ಯರ್ಥಿಗಳು: 225 ರೂ.

    ಪಾವತಿ ವಿಧಾನ: ಆನ್‌ಲೈನ್

    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ

    ಇದನ್ನು ಓದಿ: ಗ್ರೂಪ್​ ಬಿ ಹುದ್ದೆ ನೇಮಕಾತಿ; ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

    ಪ್ರಮುಖ ದಿನಾಂಕ: 

    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08 ಸೆಪ್ಟೆಂಬರ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಸೆಪ್ಟೆಂಬರ್​ 2022

    ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: joinindiancoastguard.gov.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಲಗತ್ತಿಸಿ

    ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್  ಮಾಡಿ
    Published by:Seema R
    First published: