• Home
  • »
  • News
  • »
  • jobs
  • »
  • IOCL Recruitment: 1535​ ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಆಹ್ವಾನ; ಐಟಿಐ, ಡಿಪ್ಲೊಮಾ ಆದವರಿಗೆ ಅವಕಾಶ

IOCL Recruitment: 1535​ ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಆಹ್ವಾನ; ಐಟಿಐ, ಡಿಪ್ಲೊಮಾ ಆದವರಿಗೆ ಅವಕಾಶ

ಇಂಡಿಯನ್​ ಆಯಿಲ್​

ಇಂಡಿಯನ್​ ಆಯಿಲ್​

ಐಟಿಐ, ಟಿಪ್ಲೊಮಾ ಮತ್ತು ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 23 ಆಗಿದೆ.

  • Share this:

    ಇಂಡಿಯನ್​ ಆಯಿಲ್​ ಕಾರ್ಪೊರೇಷನ್ ಲಿಮಿಟೆಡ್​​ನಲ್ಲಿ (Indian Oil Corporation Limited)  ವಿವಿಧ ಟ್ರೇಡ್​ ಮತ್ತು ಟೆಕ್ನಿಷಿಯನ್​ ಅಪ್ರೆಂಟಿಸ್ (for Trade and Technician Apprentice)​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ, ಟಿಪ್ಲೊಮಾ ಮತ್ತು ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 1535 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 23 ಆಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


    ಒಂದು ವರ್ಷದ ಅವಧಿಗೆ ಈ ನೇಮಕಾತಿಗಳು ನಡೆಯಲಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಯ ಹೆಸರುಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)
    ಹುದ್ದೆಯ ಹೆಸರುಟ್ರೇಡ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್
    ಹುದ್ದೆಗಳ ಸಂಖ್ಯೆ1535
    ಉದ್ಯೋಗ ಸ್ಥಳಅಖಿಲ ಭಾರತ
    ಸ್ಟೈಪೆಂಡ್IOCL ನಿಯಮಹಗಳ ಪ್ರಕಾರ

    ಶೈಕ್ಷಣಿಕ ಅರ್ಹತೆ: ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಐಟಿಐ, ಡಿಪ್ಲೊಮಾ ಹಾಗೂ ಬಿಎ, ಬಿಎಸ್ಸಿ, ಬಿಕಾಂ ಪದವಿಯನ್ನು ಹೊಂದಿರಬೇಕು.


    ಇದನ್ನು ಓದಿ: ಟಿಸಿಎಸ್​ನಲ್ಲಿ ಬಿಇ ಪ್ರೆಶರ್ಸ್​​ ನೇಮಕಾತಿಗೆ ಚಾಲನೆ; ಇಲ್ಲಿದೆ ಅರ್ಜಿ ಸಲ್ಲಿಕೆ ಲಿಂಕ್


    ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 24 ವರ್ಷಗಳನ್ನು ಹೊಂದಿರಬೇಕು.


    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
    ಪ.ಜಾ, ಪ. ಪಂ ಅಭ್ಯರ್ಥಿಗಳು: 05 ವರ್ಷಗಳು
    ವಿಕಲಚೇತನ (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು


    ಅರ್ಜಿ ಶುಲ್ಕ:
    ಅರ್ಜಿ ಶುಲ್ಕವಿಲ್ಲ


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ


    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24 ಸೆಪ್ಟೆಂಬರ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23 ಅಕ್ಟೋಬರ್ 2022


    ಇದನ್ನು ಓದಿ: ಜಲ ಸಂಪನ್ಮೂಲ ಇಲಾಖೆಯ 155 ಎಸ್​ಡಿಎ ಹುದ್ದೆ ನೇಮಕಾತಿಗೆ ಅರ್ಜಿ ಸಲ್ಲಿಕೆಗೆ ಆಹ್ವಾನ


    ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: iocl.com


    ಅರ್ಜಿ ಸಲ್ಲಿಕೆ ಪ್ರಕ್ರಿಯೆ


    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್ ನೀಡಿ. ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.


    -ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ಪಾವತಿಸಿ, ಅದರ ಮಾಹಿತಿ ಅಪ್​ಲೋಡ್​ ಮಾಡಿ.


    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದ ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ

    Published by:Seema R
    First published: