Indian Coast Guard Recruitment 2021: 350 ನಾವಿಕ ಮತ್ತು ಯಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ; SSLC ಪಾಸಾದವರಿಗೆ ಅವಕಾಶ

10ನೇ ತರಗತಿ-ಮೆಟ್ರಿಕ್ಯುಲೇಶನ್,  ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

JOB

JOB

  • Share this:
    Indian Coast Guard Recruitment 2021: ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ 350 ನಾವಿಕ ಮತ್ತು ಯಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜುಲೈ 2 ರಿಂದ ಜುಲೈ 16,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

    ವಿದ್ಯಾರ್ಹತೆ:

    10ನೇ ತರಗತಿ-ಮೆಟ್ರಿಕ್ಯುಲೇಶನ್,  ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಯೋಮಿತಿ: ನಾವಿಕ ಮತ್ತು ಯಾಂತ್ರಿಕ ಹುದ್ದೆಗಳಿಗೆ ಐಸಿಜಿ ಸಿಜಿಇಪಿಟಿ ನೇಮಕಾತಿ ಅಧಿಸೂಚನೆಯಲ್ಲಿರುವಂತೆ ಕನಿಷ್ಟ 18 ರಿಂದ ಗರಿಷ್ಟ 22 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

    -ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

    ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700 ರಿಂದ 29,200 ರೂಗಳ ವರೆಗೆ ವೇತನವನ್ನು ನೀಡಲಾಗುವುದು.

    ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ, ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ: ಅರ್ಜಿದಾರರು 250 ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

    -ಪ.ಜಾ/ಪ,ಪಂ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

    ಅರ್ಜಿ ಸಲ್ಲಿಸುವುದು ಹೇಗೆ?: ಆಸಕ್ತ ಆನ್‌ಲೈನ್ ಮೂಲಕ https://joinindiancoastguard.cdac.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಬೇಕು.
    Published by:Harshith AS
    First published: