Karnataka Govt Job: ಮಾಹಿತಿ ಆಯುಕ್ತರ ಹುದ್ದೆಗೆ ಅರ್ಜಿ ಆಹ್ವಾನ; ಕಲಬುರಗಿ, ಬೆಂಗಳೂರಲ್ಲಿ ಕೆಲಸ

ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (Department of Personnel and administrative Reforms) ಮಾಹಿತಿ ಆಯುಕ್ತರ (information commission) ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಮಾಹಿತಿ ಆಯೋಗದಲ್ಲಿ ಖಾಲಿ ಇರುವ ಮೂರು ಹುದ್ದೆಗಳಿ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ಕಲಬುರಗಿ ಪೀಠ ಮತ್ತು ಬೆಂಗಳೂರಿನಲ್ಲಿ ಎರಡು ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 4 ಆಗಿದೆ.

    ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆ: ಮಾಹಿತಿ ಹಕ್ಕು ಆಯೋಗ
    ಹುದ್ದೆ: ಮಾಹಿತಿ ಆಯುಕ್ತರು
    ಒಟ್ಟು ಹುದ್ದೆ: 3
    ಕಾರ್ಯ ನಿರ್ವಹಣೆ ಸ್ಥಳ: ಬೆಂಗಳೂರು ಮತ್ತು ಕಲಬುರಗಿ
    ವೇತನ: ಮಾಹಿತಿ ಹಕ್ಕು ನಿಯಮದ ಅನುಸಾರ


















    ಹುದ್ದೆ ಮಾಹಿತಿಹುದ್ದೆ ಸಂಖ್ಯೆಕಾರ್ಯ ನಿರ್ವಹಣೆ ಸ್ಥಳ
    ಮಾಹಿತಿ ಆಯುಕ್ತರು1ಕಲಬುರಗಿ
    ಮಾಹಿತಿ ಆಯುಕ್ತರು2ಬೆಂಗಳೂರು

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆ ಅನುಸಾರ ಅಭ್ಯರ್ಥಿಯು ಅಧಿಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಕಾನೂನು, ವಿಜ್ಞಾನ, ತಂತ್ರಜ್ಞಾನ, ಸಮಾಜ ಸೇವೆ, ನಿರ್ವಹಣೆ, ಪತ್ರಿಕೋದ್ಯಮ, ಸಮೂಹ ಮಾಧ್ಯಮ ಅಥವಾ ಆಡಳಿತದಲ್ಲಿ ವಿಶಾಲ ತಿಳುವಳಿಕೆ ಮತ್ತು ಅನುಭವ ಹೊಂದಿರಬೇಕು.
    ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿಗಳನ್ನು ಆಯುಕ್ತರನ್ನಾಗಿ ನೇಮಕಾತಿ ಮಾಡಲು ಅವಕಾಶ ಇದೆ.

    ವಯೋಮಿತಿ: ಮಾಹಿತಿ ಆಯೋಗದ ನಿಯಮದ ಅನುಸಾರ

    ಇದನ್ನು ಓದಿ: ಚಳ್ಳಕೆರೆಯ ಐಐಎಸ್​ಸಿಯಲ್ಲಿ ಪ್ರಾಜೆಕ್ಟ್​ ಅಸಿಸ್ಟಂಟ್​ ಹುದ್ದೆಗೆ ಅರ್ಜಿ ಆಹ್ವಾನ

    ಅರ್ಜಿ ಸಲ್ಲಿಕೆ: ಆಫ್​ಲೈನ್​

    ವಿಶೇಷ ಸೂಚನೆ: ಅಭ್ಯರ್ಥಿಗಳು ಯಾವುದೇ ಸಂಸತ್​ ಸದಸ್ಯರಾಗಲೀ ಅತವಾ ಯಾವುದೇ ರಾಜ್ಯದ ಅಥವಾ ಕೇಂದ್ರಾಡಳಿ ಪ್ರದೇಶದ ವಿಧಾನಮಂಡಲದ ಸದಸ್ಯರಾಗಿರಬಾರದು
    ಯಾವುದೇ ಲಾಭದಾಯಕ ಹುದ್ದೆ ಹೊಂದಿರಬಾರದು.
    ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಪರ್ಕ ಅಥವಾ ವ್ಯಾಪಾರ ವ್ಯವಹಾರ ಅತವಾ ವೃತ್ತಿಯನ್ನು ಹೊಂದಿರಬಾರದು.

    ಪ್ರಮುಖ ದಿನಾಂಕ
    ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 7 ಜುಲೈ 2022
    ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ: 4 ಆಗಸ್ಟ್​​ 2022

    ಅಧಿಸೂಚನೆ ಲಿಂಕ್​ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್​​ಗೆ ಇಲ್ಲಿ ಕ್ಲಿಕ್​ ಮಾಡಿ
    ಅಧಿಕೃತ ವೆಬ್​ಸೈಟ್​: janaspandana.karnataka.gov.in

    ಇದನ್ನು ಓದಿ: 72 ಗ್ರೂಪ್​ 'ಬಿ' ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ ಕೆಪಿಎಸ್​ಸಿ; ಇಲ್ಲಿದೆ ಉದ್ಯೋಗ ಮಾಹಿತಿ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಅಧಿಸೂಚನೆ  ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಈ ಕೆಳಗಿನ ವಿಳಾಸಕ್ಕೆ ಅಂಚೆ, ಸ್ಪೀಡ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮೂಲಕ ನಿಗದಿತ ದಿನಾಂಕದೊಳಗೆ ಸಲ್ಲಿಸಿ. 

    ವಿಳಾಸ
    ಸರ್ಕಾರದ ಅಧೀನ ಕಾರ್ಯದರ್ಶಿ-1, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಜನಸ್ಪಂದನ), 3ನೇ ಮಹಡಿ, ಪೋಡಿಯಂ ಬ್ಲಾಕ್​, ವಿಶ್ವೇಶ್ವರಯ್ಯ ಗೋಪುರ, ಡಾ. ಬಿಆರ್​ ಅಂಬೇಡ್ಕರ್​ ವೀಧಿ, ಬೆಂಗಳೂರು- 560001
    Published by:Seema R
    First published: