ISEC Recruitment: ಪ್ರೋಫೆಸರ್ ಹುದ್ದೆಗಳಿಗೆ ನೇಮಕಾತಿ; 1ಲಕ್ಷದ 44ಸಾವಿರ ರೂ ವೇತನ

ಕೃಷಿ ಅಭಿವೃದ್ಧಿ ಮತ್ತು ಗ್ರಾಮೀಣ ಪರಿವರ್ತನೆ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿಗೆ ಸಂಸ್ಥೆ ಮುಂದಾಗಿದೆ

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ

  • Share this:
    ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ (Institute for Social & Economic Change) ವಿವಿಧ ಅಸೋಸಿಯೇಟ್ ಪ್ರೋಫೆಸರ್ ಮತ್ತು ಪ್ರೋಫೆಸರ್ ಹುದ್ದೆಗಳ ನೇಮಕಾತಿಗೆ ಮುಂದಾಗಿದೆ. ಕೃಷಿ ಅರ್ಥಶಾಸ್ತ್ರ ಅಥವಾ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಮಾಡಿದವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 4 ಆಗಿದೆ.

    ಕೃಷಿ ಅಭಿವೃದ್ಧಿ ಮತ್ತು ಗ್ರಾಮೀಣ ಪರಿವರ್ತನೆ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿಗೆ ಸಂಸ್ಥೆ ಮುಂದಾಗಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ ಮತ್ತು ಇನ್ನಿತರ ಮಾಹಿತಿಗಳು ಈ ಕೆಳಗಿನಂತೆ ಇದೆ.

    ಸಂಸ್ಥೆ: ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ (ISEC)
    ಹುದ್ದೆಗಳ ಸಂಖ್ಯೆ: ನಿರ್ದಿಷ್ಟಪಡಿಸಲಾಗಿಲ್ಲ
    ಉದ್ಯೋಗ ಸ್ಥಳ: ಬೆಂಗಳೂರು
    ಹುದ್ದೆಯ ಹೆಸರು: ಅಸೋಸಿಯೇಟ್ ಪ್ರೋಫೆಸರ್ ಮತ್ತು ಪ್ರೋಫೆಸರ್
    ವೇತನ: 131400-144200 ರೂ ಪ್ರತಿ ತಿಂಗಳು















    ಹುದ್ದೆಹುದ್ದೆ ಸಂಖ್ಯೆ
    ಅಸೋಸಿಯೇಟ್ ಪ್ರೋಫೆಸರ್131400 ರೂ ಮಾಸಿಕ
    ಪ್ರಾಧ್ಯಾಪಕರು144200 ರೂಮಾಸಿಕ

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕನಿಷ್ಠ 55% ಅಂಕಗಳೊಂದಿಗೆ ಕೃಷಿ ಅರ್ಥಶಾಸ್ತ್ರ ಅಥವಾ ಅರ್ಥ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಪಿಎಚ್​ಡಿ ಪೂರ್ಣಗೊಳಿಸಿರಬೇಕು.

    ವಯಸ್ಸಿನ ಮಿತಿ: ನೇಮಕಾತಿ ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

    ವಯಸ್ಸಿನ ಸಡಿಲಿಕೆ:
    ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ನಿಯಮಗಳ ಪ್ರಕಾರ

    ಇದನ್ನು ಓದಿ: ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಹುದ್ದೆ; ಪದವಿ ಆದವರಿಗೆ ಅವಕಾಶ

    ಅರ್ಜಿ ಸಲ್ಲಿಕೆ ವಿಧಾನ: ಇಮೇಲ್​ ಹಾಗೂ ಆಫ್​ಲೈನ್​​ ಮೂಲಕ

    ಆಯ್ಕೆ ಪ್ರಕ್ರಿಯೆ
    ದಾಖಲೆಗಳ ಪರಿಶೀಲನೆ, ಶೈಕ್ಷಣಿಕ ಕಾರ್ಯಕ್ಷಮತೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: ಜೂನ್​ 5, 2022
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: ಜುಲೈ 4, 2022

    ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: isec.ac.in

    ಇದನ್ನು ಓದಿ: ದಾವಣೆಗೆರೆಯಲ್ಲಿ 82 ಅಂಗನವಾಡಿ ಕಾರ್ಯಕರ್ತರ ಹುದ್ದೆಗೆ ನೇಮಕಾತಿ ಅಧಿಸೂಚನೆ ಪ್ರಕಟ

    ಅರ್ಜಿ ಸಲ್ಲಿಕೆ ವಿಧಾನ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಮೇಲ್ಕಂಡ ಇಮೇಲ್​ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.

    ಅರ್ಜಿಜೊತೆಗೆ  ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ ಈ ಇಮೇಲ್​ ವಿಳಾಸಕ್ಕೆ  recruitment@isec.ac.in ಕಳುಹಿಸಬೇಕು. ಹಾರ್ಡ್​ ಕಾಪಿಯನ್ನು  ಈ ಕೆಳಕಂಡ ವಿಳಾಸಕ್ಕೆ ನಿಗದಿತ ದಿನಾಂಕದ ಮೊದಲು ಕಳುಹಿಸಬೇಕು.

    ರಿಜಿಸ್ಟ್ರಾರ್, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ, ನಾಗರಭಾವಿ ಪಿಒ, ಬೆಂಗಳೂರು - 560072
    Published by:Seema R
    First published: