ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ (Integral Coach Factory) 876 ಅಪ್ರೆಂಟಿಸ್ (Apprentices) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕೇಂದ್ರ ರೈಲ್ವೆ ಇಲಾಖೆ ಅಡಿಯ ಈ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಐಟಿಐ ಪಾಸ್ ಆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಕಡೆಯ ದಿನ ಜುಲೈ 27 ಆಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಸಂಸ್ಥೆಯ ಹೆಸರು: ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಚೆನ್ನೈ (ICF ಚೆನ್ನೈ)
ಹುದ್ದೆಗಳು: ಅಪ್ರೆಂಟಿಸ್ಗಳು
ಒಟ್ಟು ಹುದ್ದೆಗಳ ಸಂಖ್ಯೆ: 876
ವೇತನ: 6,000 – 7,000ರೂ ಪ್ರತಿ ತಿಂಗಳು
ಉದ್ಯೋಗ ಸ್ಥಳ: ಚೆನ್ನೈ
ಹುದ್ದೆ |
ಹುದ್ದೆ ಸಂಖ್ಯೆ |
ಬಡಗಿ |
87 |
ಎಲೆಕ್ಟ್ರಿಷಿಯನ್ |
188 |
ಫಿಟ್ಟರ್ |
208 |
ಮೆಕಾನಿಸ್ಟ್ |
63 |
ಪೈಂಟರ್ |
83 |
ವೆಲ್ಡರ್ |
245 |
ಪಾಸಾ |
2 |
ವಿದ್ಯಾರ್ಹತೆ: ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಐಟಿಐ ಪದವಿ ಪಡೆದಿರಬೇಕು.
ವಯೋಮಿತಿ: ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 15 ಮತ್ತು ಗರಿಷ್ಠ 24 ವರ್ಷ ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು
ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು
ಇದನ್ನು ಓದಿ: ರಾಯಚೂರು ಕೃಷಿ ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕರು ನೇಮಕಾತಿ
ಅರ್ಜಿ ಶುಲ್ಕ:
ಇತರೆ ಅಭ್ಯರ್ಥಿಗಳು: 100 ರೂ
ಪ.ಜಾ, ಪ.ಪಂ, ವಿಕಲಚೇತನ ಮಹಿಳಾ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ ನೀಡಲಾಗಿದೆ.
ಪಾವತಿ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಮೆರಿಟ್, ಸಂದರ್ಶನ
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27 ಜೂನ್ 2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ಜುಲೈ 2022
ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್:
ಇಲ್ಲಿ ಕ್ಲಿಕ್ ಮಾಡಿ
ಸೂಚನೆಗಳು:
ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ:
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:
pbicf.in
ಇದನ್ನು ಓದಿ: ಧಾರವಾಡ ಕೃಷಿ ವಿವಿಯಲ್ಲಿ ಬೇಕಾಗಿದ್ದಾರೆ ಅರೆಕಾಲಿಕ ಉಪನ್ಯಾಸಕರು; ಬೇಗ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ವಿಧಾನ
ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
-ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.
-ಮೇಲಿನ ಲಿಂಕ್ನಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿ. ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
-ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
-ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ