IRCTC Recruitment: ರೈಲ್ವೆಯಲ್ಲಿದೆ ಕಂಪ್ಯೂಟರ್​ ಆಪರೇಟರ್​ ಹುದ್ದೆ; ಎಸ್​ಎಸ್​ಎಲ್​ಸಿ, ಐಟಿಐ ವಿದ್ಯಾರ್ಹತೆ

ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ನೇಮಕ ಮಾಡಲಾಗುತ್ತಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳು ಇಲ್ಲಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (Indian Railway Catering and Tourism Corporation) ವಿವಿಧ ಕಂಪ್ಯೂಟರ್​ ಆಪರೇಟರ್​ ಮತ್ತು ಪ್ರೋಗ್ರಾಮಿಂಗ್​ ಸಹಾಯಕರ (Computer Operator and Programming Assistant)  ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 9 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅಧಿಸೂಚನೆ ಪ್ರಕಟಿಸಿದೆ. ತಮಿಳುನಾಡಿನಲ್ಲಿ ಕಾರ್ಯ ನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 30 ಆಗಿದೆ.

    ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ನೇಮಕ ಮಾಡಲಾಗುತ್ತಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC)
    ಹುದ್ದೆಯ ಹೆಸರುಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಸಹಾಯಕ (COPA)
    ಹುದ್ದೆಗಳ ಸಂಖ್ಯೆ9
    ಉದ್ಯೋಗ ಸ್ಥಳತಮಿಳುನಾಡು
    ಸ್ಟೈಪೆಂಡ್5000-9000ರೂ ಪ್ರತಿ ತಿಂಗಳು

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ, ಐಟಿಐ ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: 138 ಪ್ರಾಜೆಕ್ಟ್​ ಸೈಟಿಂಸ್​ ಹುದ್ದೆಗೆ ಅರ್ಜಿ ಆಹ್ವಾನ; ಎಎಸ್ಸಿ ಆಗಿದ್ರೆ ಅವಕಾಶ

    ವಯಸ್ಸಿನ ಮಿತಿ: ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ, ಕನಿಷ್ಠ 16 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.

    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
    ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು
    ನಿವೃತ್ತ ಸೇವಾಧಿಕಾರಿ: 10 ವರ್ಷಗಳು

    ಅರ್ಜಿ ಸಲ್ಲಿಕೆ
    ಆನ್​ಲೈನ್​

    ಅರ್ಜಿ ಶುಲ್ಕ:
    ಅರ್ಜಿ ಶುಲ್ಕ ವಿನಾಯಿತಿ

    ಇದನ್ನು ಓದಿ: ಎಲ್​ಐಸಿ ಹೌಸಿಂಗ್​ ಫೈನಾನ್ಸ್​ನಲ್ಲಿ 80 ಸಹಾಯಕರ​ ಹುದ್ದೆ; ಯಾವುದೇ ಡಿಗ್ರಿ ಆಗಿದ್ರೂ ಅರ್ಜಿ ಸಲ್ಲಿಸಿ

    ಆಯ್ಕೆ ಪ್ರಕ್ರಿಯೆ:
    ಮೆರಿಟ್ ಪಟ್ಟಿ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11 ಆಗಸ್ಟ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಆಗಸ್ಟ್ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: irctc.co.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ:

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ
    Published by:Seema R
    First published: