ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದಲ್ಲಿ (Indian Railway Catering and Tourism Corporation) ಖಾಲಿ ಇರುವ ಒಂದು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೀನಿಯರ್ ಎಕ್ಸಿಕ್ಯೂಟಿವ್, ಎಕ್ಸಿಕ್ಯುಟಿವ್ ಹುದ್ದೆ ಭರ್ತಿಗೆ ಭಾರತೀಯ ರೈಲ್ವೆ ಮುಂದಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಯನ್ನು ಆನ್ಲೈನ್ (Online) ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 1 ಆಗಿದೆ.
ಈ ಹುದ್ದೆಯು ಮೂರು ವರ್ಷದ ಒಪ್ಪಂದದ ಮೇರೆಗೆ ಆಗಿದ್ದು, ಈಗಾಗಲೇ ರೈಲ್ವೆ ಕ್ಯಾಟರಿಂಗ್ ಸೇವೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ ಆಯ್ಕೆ, ನೇಮಕಾತಿ, ವೇತನ ಸೇರಿದಂತೆ ಇನ್ನಿತರ ಮಾಹಿತಿ ಕೆಳಕಂಡಂತೆ ಇದೆ.
ಹುದ್ದೆ ಮಾಹಿತಿ |
ಹುದ್ದೆ ವಿವರ |
ಸಂಸ್ಥೆ |
ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) |
ಹುದ್ದೆ |
ಸೀನಿಯರ್. ಎಕ್ಸಿಕ್ಯೂಟಿವ್, ಎಕ್ಸಿಕ್ಯೂಟಿವ್ |
ಹುದ್ದೆಗಳ ಸಂಖ್ಯೆ |
1 |
ಉದ್ಯೋಗ ಸ್ಥಳ |
ಲಕ್ನೋ - ಉತ್ತರ ಪ್ರದೇಶ |
ವೇತನ |
ಐಆರ್ಸಿಟಿಸಿ ನಿಯಮಗಳ ಪ್ರಕಾರ |
ಶೈಕ್ಷಣಿಕ ಅರ್ಹತೆ: ಐಆರ್ಸಿಟಿಸಿ ನೇಮಕಾತಿ ನಿಯಮಗಳ ಪ್ರಕಾರ
ವಯಸ್ಸಿನ ಮಿತಿ: ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು 55 ವರ್ಷಗಳಾಗಿರಿಂತ ಹೆಚ್ಚಿರಬಾರದು.
ಅನುಭವ: ರೈಲ್ವೆಯಲ್ಲಿ 20 ವರ್ಷ ವಾಣಿಜ್ಯ ಮತ್ತಿ ಕ್ಯಾಟರಿಂಗ್ ಕೆಲಸ ಮಾಡಿದ ಅನುಭವ ಇರಬೇಕು.
ವಾಣಿಜ್ಯ ನಿಯಮದ ಬಗ್ಗೆ ಅನುಭವ ಇರಬೇಕು.
ವಯೋಮಿತಿ ಸಡಿಲಿಕೆ:
ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದ ನಿಯಮಗಳ ಪ್ರಕಾರ
ಆಯ್ಕೆ ಪ್ರಕ್ರಿಯೆ
ರೈಲ್ವೆ ಸಚಿವಾಲಯದ ನಿಯಮಗಳ ಪ್ರಕಾರ ಈ ನೇಮಕಾತಿ ನಡೆಯಲಿದೆ.
ಅರ್ಜಿ ಸಲ್ಲಿಕೆ ವಿಧಾನ
ಆಫ್ಲೈನ್
ಇದನ್ನು ಓದಿ: ವಿಜಯಪುರ, ಧಾರವಾಡ, ಬಾಗಲಕೋಟೆ ಪದವೀಧರರಿಗೆ ಉತ್ತಮ ಅವಕಾಶ
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ನಿಗದಿಸಿಲ್ಲ.
ಪ್ರಮುಖ ದಿನಾಂಕಗಳು:
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಮೇ 31, 2022
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 1, 2022
ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ವೆಬ್ಸೈಟ್:
irctc.co.in
ಇದನ್ನು ಓದಿ: ಹುಬ್ಬಳ್ಳಿ ರೈಲ್ವೆಯಲ್ಲಿ ನೇಮಕಾತಿ; ಸ್ನಾತಕೋತ್ತರ ಪದವೀಧರರಿಂದ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ ಪ್ರಕ್ರಿಯೆ
-ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ
-ಆನ್ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.
- ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಮೇಲ್ಕಂಡ ವಿಳಾಸಕ್ಕೆ ಖುದ್ದು ಅಥವಾ ಸ್ಪೀಡ್, ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬಹುದಾಗಿದೆ.
ಕಾರ್ಪೊರೇಟ್ ಆಫೀಸ್, IRCTC, ನವದೆಹಲಿ. ಅಥವಾ deputation@irctc.com ಈ ಇಮೇಲ್ ವಿಳಾಸಕ್ಕೆ ಕೂಡ ಅರ್ಜಿದಾರರು ತಮ್ಮ ಅರ್ಜಿ ಸಲ್ಲಿಸಬಹುದಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ