ISEC Recruitment: ಪದವೀಧರರಿಗೆ ಇಲ್ಲಿದೆ ಉತ್ತಮ ಅವಕಾಶ - ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಹಾಕಿ

Job News: ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ISEC ನೇಮಕಾತಿ ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ISEC Recruitment 2022: ರಿಸರ್ಚ್ ಅಸೋಸಿಯೇಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ (ISEC) ಅರ್ಜಿಗಳನ್ನು ಆಹ್ವಾನಿಸಿದೆ. ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದ್ದು, ಕರ್ನಾಟಕ ಸರ್ಕಾರದಲ್ಲಿ ಕೆಲಸ ಹುಡುಕುತ್ತಿರುವವರಿಗೆ ಮಾತ್ರವಲ್ಲದೇ ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಸಹ ಇದು ಒಳ್ಳೆಯ ಅವಕಾಶವಾಗಿದ್ದು,  ಆಸಕ್ತ ಅಭ್ಯರ್ಥಿಗಳು ಏಪ್ರಿಲ್​ 7 ರ ಮೊದಲು ಆಫ್‌ಲೈನ್‌(Offline)ನಲ್ಲಿ ಅರ್ಜಿ ಹಾಕಬಹುದು.

ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿ.   















































ಇನ್ಸ್ಟಿಟ್ಯೂಟ್ ಹೆಸರುಇನ್ಸ್ಟಿಟ್ಯೂಟ್ ಫಾರ್ ಸೋಶಿಯಲ್ & ಎಕನಾಮಿಕ್ ಚೇಂಜ್ (ISEC)
ಪೋಸ್ಟ್‌ಗಳ ಸಂಖ್ಯೆನಿಗದಿಯಾಗಿಲ್ಲ
ಉದ್ಯೋಗ ಸ್ಥಳಬೆಂಗಳೂರು - ಕರ್ನಾಟಕ
ಹುದ್ದೆಯ ಹೆಸರುರಿಸರ್ಚ್ ಅಸೋಸಿಯೇಟ್
ವೇತನರೂ.20000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆಅರ್ಥಶಾಸ್ತ್ರ ಅಥವಾ ಸಮಾಜ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ
ವಯೋಮಿತಿನಿಯಮ ಪ್ರಕಾರ
ಅರ್ಜಿ ಸಲ್ಲಿಸುವ ಲಿಂಕ್indrajit@isec.ac.in
ಅರ್ಜಿ ಕಳುಹಿಸುವ ವಿಳಾಸಡಾ. ಇಂದ್ರಜಿತ್ ಬೈರಾಗ್ಯ, ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ, ಪ್ರೊಫೆಸರ್ ವಿ ಕೆಆರ್‌ವಿ ರಾವ್ ರಸ್ತೆ, ನಾಗರಭಾವಿ, ಅಂಚೆ, ಬೆಂಗಳೂರು – 560072
ವೆಬ್​ಸೈಟ್​ಇಲ್ಲಿ  ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-04-2022

ಇನ್ಸ್ಟಿಟ್ಯೂಟ್ ಫಾರ್ ಸೋಶಿಯಲ್ & ಎಕನಾಮಿಕ್ ಚೇಂಜ್ ಖಾಲಿ ಇರುವ ಕೆಲ ರಿಸರ್ಚ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅರ್ಥಶಾಸ್ತ್ರ ಅಥವಾ ಸಮಾಜ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಏಪ್ರಿಲ್​ 7ರ ಮೊದಲು ಆಫ್​ಲೈನ್​ ಮೂಲಕ ಅರ್ಜಿ ಹಾಕಬಹುದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.20000/- ವೇತನ ನೀಡಲಾಗುತ್ತದೆ. 

ಇನ್ಸ್ಟಿಟ್ಯೂಟ್ ಹೆಸರು: ಇನ್ಸ್ಟಿಟ್ಯೂಟ್ ಫಾರ್ ಸೋಶಿಯಲ್ & ಎಕನಾಮಿಕ್ ಚೇಂಜ್ (ISEC)

ಪೋಸ್ಟ್‌ಗಳ ಸಂಖ್ಯೆ: ನಿಗದಿ ಮಾಡಲಾಗಿಲ್ಲ

ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ

ಹುದ್ದೆಯ ಹೆಸರು: ರಿಸರ್ಚ್ ಅಸೋಸಿಯೇಟ್

ವೇತನ: ರೂ.20000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: ISEC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಅರ್ಥಶಾಸ್ತ್ರ ಅಥವಾ ಸಮಾಜ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಅನುಭವದ ವಿವರಗಳು

ಅಭ್ಯರ್ಥಿಗಳು ಸಂಶೋಧನಾ ಸಹಾಯಕ/ಸಂಶೋಧನಾ ಸಹಾಯಕರಾಗಿ ಕೆಲಸ ಮಾಡಿದ ಅನುಭವವನ್ನು ಹೊಂದಿರಬೇಕು.

ಇದನ್ನೂ ಓದಿ: 67 ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಹಾಕಲು ಕೇವಲ ಎರಡು ದಿನ ಬಾಕಿ - ಬೇಗ ಅಪ್ಲಿಕೇಶನ್​ ಕಳುಹಿಸಿ

ವಯಸ್ಸಿನ ಮಿತಿ: ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ISEC ನೇಮಕಾತಿ ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ: ಇನ್ಸ್ಟಿಟ್ಯೂಟ್ ಫಾರ್ ಸೋಶಿಯಲ್ & ಎಕನಾಮಿಕ್ ಚೇಂಜ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ

ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಆಫ್‌ಲೈನ್‌ ಮೂಲಕ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಡಾ. ಇಂದ್ರಜಿತ್ ಬೈರಾಗ್ಯ, ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ, ಪ್ರೊಫೆಸರ್ ವಿ ಕೆಆರ್‌ವಿ ರಾವ್ ರಸ್ತೆ, ನಾಗರಭಾವಿ, ಅಂಚೆ, ಬೆಂಗಳೂರು – 560072 ಈ ವಿಳಾಸಕ್ಕೆ ಅರ್ಜಿ ಕಳುಹಿಸಬೇಕು.  ಅಥವಾ indrajit@isec.ac.in ಗೆ ಇಮೇಲ್‌ಗೆ ಕಳುಹಿಸಬೇಕಾಗುತ್ತದೆ.

ಹೆಚ್ಚಿನ ಮಾಹಿತಿಗೆ :
isec.ac.in

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-04-2022

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-04-2022
Published by:Sandhya M
First published: