ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ISro ಕಾರ್ಯ ನಿರ್ವಹಿಸಲು ಅನೇಕ ಯುವ ವಿಜ್ಞಾನಿಗಳು ಕಾಯುತ್ತಿರುತ್ತಾರೆ. ಬಾಹ್ಯಕಾಶದ ಬಗ್ಗೆ ಅಗಾಧ ಆಸಕ್ತಿ ನೀವು ಹೊಂದಿದ್ದರೆ, ಇಲ್ಲಿದೆ ನಿಮಗೆ ಸುವರ್ಣಾವಕಾಶ. ಇಸ್ರೋದಲ್ಲಿ 18 ಹುದ್ದೆಗಳಿಗೆ ನೇಮಕಾತಿ ಆರಂಭವಾಗಿದ್ದು, ಜ್ಯೂನಿಯರ್ ರಿಸರ್ಚ್ ಫೆಲೋ (JRF) ಮತ್ತು ರಿಸರ್ಚ್ ಅಸೋಸಿಯೇಟ್ (RA) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ, ನೇರ ನೇಮಕಾತಿ ಮೂಲಕ ಈ ಹುದ್ದೆಗೆ ಆಯ್ಕೆ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 1 ಆಗಿದೆ. ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇಸ್ರೋ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು . ಇನ್ನು ಈ ಹುದ್ದೆಯ ಕುರಿತಾದ ಸಂಪೂರ್ಣ ವಿವರ ಇಲ್ಲಿದೆ.
ಹುದ್ದೆಗಳ ವಿವರ:
ಜೂನಿಯರ್ ರಿಸರ್ಚ್ ಫೆಲೋ (ಜೆಆರ್ಎಫ್) - 16 ಹುದ್ದೆಗಳು
ರಿಸರ್ಚ್ ಅಸೋಸಿಯೇಟ್ (ಆರ್ಎ) - 02 ಹುದ್ದೆಗಳು
ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿರುವ UR ರಾವ್ ಉಪಗ್ರಹ ಕೇಂದ್ರದಲ್ಲಿ ಕಾರ್ಯ ನಿರ್ವಹಿಸಬೇಕು
ವೇತನ ಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿ ಇಸ್ರೋ ನೇಮಕಾತಿ ಅನುಸಾರ ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,100/-ರೂ ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 47,100/-ರೂ ವೇತನ ನಿಗದಿಸಲಾಗಿದೆ
ಇದನ್ನು ಓದಿ: ಭವಿಷ್ಯದಲ್ಲಿ ಉತ್ತಮ ಸಂಪಾದನೆ ಕನಸು ಕಾಣುತ್ತಿದ್ರೆ ಪಿಯುಸಿ ಬಳಿಕ ಈ ಕೋರ್ಸ್ ಆರಿಸಿಕೊಳ್ಳಿ
ವಿದ್ಯಾರ್ಹತೆ
ಜೂನಿಯರ್ ರಿಸರ್ಚ್ ಫೆಲೋ (JRF) ಮತ್ತು ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಸ್ರೋ ಅಧಿಸೂಚನೆಯಲ್ಲಿ ವಿವರಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸಂಬಂಧಿತ ವಿಭಾಗಗಳಲ್ಲಿ ಎಂಇ, ಎಂಟೆಕ್, ಎಂಎಸ್ಸಿ, ಪಿಎಚ್ಡಿ ಹೊಂದಿರಬೇಕು.
ವಯೋಮಿತಿ
ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿ ಕನಿಷ್ಟ 28 ವರ್ಷ ವಯೋಮಿತಿ ಗರಿಷ್ಠ 35 ವರ್ಷ ಮೀರಿರಬಾರದು. ಇನ್ನು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಸಡಿಲಿಕೆ ಇದೆ.
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟಿಂಗ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ಇದನ್ನು ಓದಿ: ಅನುವಾದಕ ಹುದ್ದೆಗೆ ನ್ಯಾಯಾಲಯದಲ್ಲಿ ಅರ್ಜಿ ಆಹ್ವಾನ; ತಿಂಗಳಿಗೆ 44,900 ಸಂಬಳ
ಅರ್ಜಿ ಸಲ್ಲಿಸುವುದು ಹೇಗೆ?
ಹಂತ 1: ಇಸ್ರೋದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
ಹಂತ 2: ಮುಖಪುಟದಲ್ಲಿ, ‘ನೇಮಕಾತಿ’ ವಿಭಾಗವನ್ನು ಕ್ಲಿಕ್ ಮಾಡಿ
ಹಂತ 3: ‘ಆನ್ಲೈನ್ನಲ್ಲಿ ಅನ್ವಯಿಸು’ ಕ್ಲಿಕ್ ಮಾಡಿ ಮತ್ತು ಅರ್ಜಿಯನ್ನು ಭರ್ತಿ ಮಾಡಿ
ಅಭ್ಯರ್ಥಿಗಳು ಇಸ್ರೋ ಮತ್ತು ಎಸ್ಎಸಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು ಅಥವಾ ಖಾಲಿ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿವರವಾದ ಅಧಿಸೂಚನೆಯನ್ನು ಓದಬಹುದು. ಅಧಿಕೃತ ಅಧಿಸೂಚನೆಯನ್ನು ಓದಲು
ಇಲ್ಲಿ ಕ್ಲಿಕ್ ಮಾಡಿ
ಈ ನೇಮಕಾತಿ ಚಾಲನೆಗಾಗಿ ಅರ್ಜಿ ಪ್ರಕ್ರಿಯೆ ಸೆಪ್ಟೆಂಬರ್ 11 ರಿಂದ ಪ್ರಾರಂಭವಾಗಿದ್ದು ಅಕ್ಟೋಬರ್ 1 ರಂದು ಸಂಜೆ 5 ಗಂಟೆಗೆ ಕೊನೆಗೊಳ್ಳುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ