• Home
  • »
  • News
  • »
  • jobs
  • »
  • ITBP Recruitment 2022: ಸಹಾಯಕ ಸಬ್​ ಇನ್ಸ್​ಪೆಕ್ಟರ್ ಹುದ್ದೆ ನೇಮಕಾತಿ

ITBP Recruitment 2022: ಸಹಾಯಕ ಸಬ್​ ಇನ್ಸ್​ಪೆಕ್ಟರ್ ಹುದ್ದೆ ನೇಮಕಾತಿ

 ಸಾಂಧರ್ಬಿಕ ಚಿತ್ರ

ಸಾಂಧರ್ಬಿಕ ಚಿತ್ರ

. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 23 ಆಗಿದೆ.

  • Share this:

    ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್​ನಲ್ಲಿ ( Indo-Tibetan Border Police Force) ಸಹಾಯಕ ಸಬ್​ ಇನ್ಸ್​ಪೆಕ್ಟರ್ (Assistant Sub Inspector)​ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 24 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಫಾಮರ್ಸಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 23 ಆಗಿದೆ.


    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಯ ಹೆಸರುಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP)
    ಹುದ್ದೆಯ ಹೆಸರುಸಹಾಯಕ ಸಬ್ ಇನ್ಸ್‌ಪೆಕ್ಟರ್ (ಫಾರ್ಮಸಿಸ್ಟ್)
    ಹುದ್ದೆಗಳ ಸಂಖ್ಯೆ24
    ಉದ್ಯೋಗ ಸ್ಥಳಅಖಿಲ ಭಾರತ
    ವೇತನ:29200-92300

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಪಿಯುಸಿ , ಡಿಪ್ಲೊಮಾ ಇನ್ ಫಾರ್ಮಸಿ ಪೂರ್ಣಗೊಳಿಸಿರಬೇಕು.


    ಇದನ್ನು ಓದಿ: 1591 ಪೊಲೀಸ್​ ಕಾನ್ಸ್​ಟೇಬಲ್​ ಹುದ್ದೆಗೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ


    ವಯೋಮಿತಿ:  ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು.


    ವಯೋಮಿತಿ ಸಡಿಲಿಕೆ:
    ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಿಯಮಗಳ ಪ್ರಕಾರ


    ಅರ್ಜಿ ಶುಲ್ಕ:
    ಪ.ಜಾ, ಪ.ಪಂ, ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು: ಇಲ್ಲ
    ಎಲ್ಲಾ ಇತರ ಅಭ್ಯರ್ಥಿಗಳು: 100 ರೂ.


    ಪಾವತಿ ವಿಧಾನ: ಆನ್‌ಲೈನ್


    ಆಯ್ಕೆ ಪ್ರಕ್ರಿಯೆ:
    ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ, ಲಿಖಿತ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ


    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25 ಅಕ್ಟೋಬರ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23 ನವೆಂಬರ್ 2022


     ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: itbpolice.nic.in


    ಇದನ್ನು ಓದಿ: ಭಾರತೀಯ ಸೇನೆಯಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ ಹುದ್ದೆ ನೇಮಕಾತಿ


    ಅರ್ಜಿ ಸಲ್ಲಿಕೆ ಪ್ರಕ್ರಿಯೆ


    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಇತ್ಯಾದಿ ದಾಖಲೆಗಳನ್ನು ಲಗತ್ತಿಸಿ.


    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


    -ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. ಅದರ ಮಾಹಿತಿ ಅಪ್​ಲೋಡ್​ ಮಾಡಿ


    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ

    Published by:Seema R
    First published: