ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(Nuclear Power Corporation of India Limited)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ, 50 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗೆ ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ ಮೆರಿಟ್ ಮತ್ತು ಸಂದರ್ಶನದ ಆಧಾರದ ಮೇಲೆ ನಡೆಸಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 16 ಆಗಿದೆ. ಅರ್ಜಿಯನ್ನು ಆನ್ ಲೈನ್ ಮತ್ತು ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್ಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ ಪದವೀಧರರು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಸಂಸ್ಥೆಯ ಹೆಸರು: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL)
ಹುದ್ದೆಗಳ ಸಂಖ್ಯೆ: 50
ಉದ್ಯೋಗ ಸ್ಥಳ: ಬುಲಂದ್ಶಹರ್ , ಉತ್ತರ ಪ್ರದೇಶ
ಹುದ್ದೆಯ ಹೆಸರು: ಟ್ರೇಡ್ ಅಪ್ರೆಂಟಿಸ್
ಸ್ಟೈಪೆಂಡ್: 7700-8855 ರೂ ಪ್ರತಿ ತಿಂಗಳು
ಹುದ್ದೆ |
ಹುದ್ದೆ ಸಂಖ್ಯೆ |
ಫಿಟ್ಟರ್ |
25 |
ಎಲೆಕ್ಟ್ರಿಷಿಯನ್ |
13 |
ಎಲೆಕ್ಟ್ರಾನಿಕ್ ಮೆಕ್ಯಾನಿಕ್ಸ್ |
12 |
ಶೈಕ್ಷಣಿಕ ಅರ್ಹತೆ: ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ITI ಪೂರ್ಣಗೊಳಿಸಿರಬೇಕು.
ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಗರಿಷ್ಠ 24 ವರ್ಷಗಳನ್ನು ಹೊಂದಿರಬೇಕು.
ವಯೋಮಿಡಿ ಸಡಿಲಿಕೆ
ಹಿಂದುಳಿದ ವರ್ಗದ ಅಭ್ಯರ್ಥಿಗಳು: 03 ವರ್ಷಗಳು
ಪರಿಶಿಷ್ಟ ಜಾತಿ ಅಭ್ಯರ್ಥಿಗಳು: 05 ವರ್ಷಗಳು
ವಿಕಲ ಚೇತನ ಅಭ್ಯರ್ಥಿಗಳು: 10 ವರ್ಷಗಳು
ಇದನ್ನು ಓದಿ: ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ 61 ಹುದ್ದೆಗಳಿಗೆ ನೇಮಕಾತಿ
ಆಯ್ಕೆ ಪ್ರಕ್ರಿಯೆ
ಮೆರಿಟ್ ಪಟ್ಟಿ ಮತ್ತು ಸಂದರ್ಶನ
ಅರ್ಜಿ ಸಲ್ಲಿಕೆ ವಿಧಾನ
ಆನ್ಲೈನ್ ಬಳಿಕ ಆಫ್ಲೈನ್
ಪ್ರಮುಖ ದಿನಾಂಕ
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಮೇ 27, 2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16 ಜೂನ್ 2022
ಅರ್ಜಿಯ ಹಾರ್ಡ್ ಪ್ರತಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 07 ಜುಲೈ 2022
ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್:
ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ತಿಳಿಯಲು:
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:
npcilcareers.co.in
ಅರ್ಜಿ ಸಲ್ಲಿಕೆ ಪ್ರಕ್ರಿಯೆ
-ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
ಇದನ್ನು ಓದಿ: ಭಾಷಾಂತರಕಾರ, ಟೈಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ; ಬೆಂಗಳೂರಲ್ಲಿ ಹುದ್ದೆ
-ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ನೀಡಿ. ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಅವುಗಳನ್ನು ನೀಡಿ.
-ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
-ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.
-ಕೊನೆಯದಾಗಿ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಲಾಗಿದೆ:
ಮ್ಯಾನೇಜರ್ (HRM), ನರೋರಾ ಅಟಾಮಿಕ್ ಪವರ್ ಸ್ಟೇಷನ್, ಪ್ಲಾಂಟ್ ಸೈಟ್, ನರೋರಾ, PO: NAPP ಟೌನ್ಶಿಪ್, ನರೋರಾ, ಬುಲಂದ್ಶಹರ್ - 203389 ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ