ITI Limited Recruitment 2021: ಖಾಲಿ ಇರುವ 5 ಜನರಲ್ ಮ್ಯಾನೇಜರ್ ಮತ್ತು ವೈದ್ಯಕೀಯ ಸೇವೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 52 ವರ್ಷ ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

JOB

JOB

  • Share this:
    ಕೊರೊನಾ ಅವಾಂತರದ ನಡುವೆ ಉದ್ಯೋಗ ಹುಡುಕುತ್ತಿರುವವರು ಅನೇಕರಿದ್ದಾರೆ. ಹೀಗಿರುವಾಗ ಐಟಿಐ ಲಿಮಿಟೆಡ್  5 ಜನರಲ್ ಮ್ಯಾನೇಜರ್ ಮತ್ತು ವೈದ್ಯಕೀಯ ಸೇವೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶ ಮಾಡಿಕೊಟ್ಟಿದೆ .ಜೂನ್ 28,2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

    ವಯೋಮಿತಿ:

    ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 52 ವರ್ಷ ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವೇತನ:

    ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 96,104 ರೂ. ವೇತನ ಸಿಗಲಿದೆ.

    ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 86,728 ರೂ, ವೇತನ ಸಿಗಲಿದೆ.

    ಅರ್ಜಿ ಸಲ್ಲಿಸುವುದು ಹೇಗೆ?

    ಅರ್ಜಿ ಸಲ್ಲಸಿಬೇಕೆಂದಿರುವ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್ https://www.itiltd.in/ ಗೆ ತೆರಳಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಓದಿ ನಂತರ ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು.

    ನಂತರ ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ  ಜೂನ್ 30,2021ರೊಳಗೆ ಅರ್ಜಿಯನ್ನು ಕಚೇರಿಗೆ ತಲುಪಿಸಬೇಕಿರುತ್ತದೆ.

    ಕಚೇರಿ ವಿಳಾಸ:

    ADDL. GENERAL MANAGER-HR, ITI LIMITED, REGD & CORPORATE OFFICE, ITI BHAVAN, DOORAVANI NAGAR, BENGALURU 560016.
    Published by:Harshith AS
    First published: