• Home
  • »
  • News
  • »
  • jobs
  • »
  • JNCASR Recruitment 2022: ಬೆಂಗಳೂರಿನಲ್ಲಿ ರಿಸರ್ಚ್​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ, Ph.D ಆದವರಿಗೆ ಅವಕಾಶ

JNCASR Recruitment 2022: ಬೆಂಗಳೂರಿನಲ್ಲಿ ರಿಸರ್ಚ್​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ, Ph.D ಆದವರಿಗೆ ಅವಕಾಶ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ರಿಸರ್ಚ್​ ಅಸೋಸಿಯೇಟ್​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.

  • News18 Kannada
  • Last Updated :
  • Bangalore [Bangalore], India
  • Share this:

    JNCASR Recruitment 2022: ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್( Jawaharlal Nehru Centre For Advanced Scientific Research) ಖಾಲಿ ಇರುವ 1 ರಿಸರ್ಚ್​ ಅಸೋಸಿಯೇಟ್(Research Associate) ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ನವೆಂಬರ್ 10, 2022 ಕ್ಕೆ ಮುನ್ನ ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್
    ಹುದ್ದೆಯ ಹೆಸರುರಿಸರ್ಚ್​ ಅಸೋಸಿಯೇಟ್
    ಒಟ್ಟು ಹುದ್ದೆ1
    ವಿದ್ಯಾರ್ಹತೆಪಿಎಚ್​ಡಿ
    ಸ್ಥಳಬೆಂಗಳೂರು
    ವೇತನಮಾಸಿಕ ₹ 47,000
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್​
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ28/10/2022
    ಅರ್ಜಿ ಸಲ್ಲಿಸಲು ಕೊನೆಯ ದಿನ10/11/2022


    ಅರ್ಹತಾ ಮಾನದಂಡಗಳೇನು?


    ಶೈಕ್ಷಣಿಕ ಅರ್ಹತೆ:
    ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ರಿಸರ್ಚ್​ ಅಸೋಸಿಯೇಟ್​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕೆಮಿಕಲ್ ಸೈನ್ಸ್​ನಲ್ಲಿ ಪಿಎಚ್​.ಡಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: MECON Recruitment: ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ವೇತನ 66 ಸಾವಿರ


    ವಯೋಮಿತಿ:
    ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ರಿಸರ್ಚ್​ ಅಸೋಸಿಯೇಟ್​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 28/10/2022
    ಅರ್ಜಿ ಸಲ್ಲಿಸಲು ಕೊನೆಯ ದಿನ: 10/11/2022


    ಇದನ್ನೂ ಓದಿ: JOB ALERT: ಮಂಗಳೂರಿನ ಏರ್​ ಇಂಡಿಯಾ ಎಕ್ಸ್​​ಪ್ರೆಸ್​​ನಲ್ಲಿ ಉದ್ಯೋಗ; ನ.12ರಂದು ಸಂದರ್ಶನ


    ಅರ್ಜಿ ಸಲ್ಲಿಸುವ ಬಗೆ ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ haldarlab.jnc@gmail.com ಗೆ ನವೆಂಬರ್ 10ಕ್ಕೆ ಮುನ್ನ ಕಳುಹಿಸಬೇಕು.

    Published by:Latha CG
    First published: