ರಾಷ್ಟ್ರೀಯ ಆಯುರ್ವೇದ ಸಂಸ್ಥೆಯಲ್ಲಿ ಉಪನ್ಯಾಸಕ ಹುದ್ದೆ ಖಾಲಿ, ಮಾಸಿಕ ವೇತನ ₹ 55,000

ಪಿಎಚ್.ಡಿ, ಎಂಡಿ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು. ಇದೇ ಡಿಸೆಂಬರ್ 23ರಂದು ನೇರ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದಾಗಿದೆ.

NIA

NIA

  • Share this:
National Institute of Ayurveda Recruitment 2021: ರಾಷ್ಟ್ರೀಯ ಆಯುರ್ವೇದ ಸಂಸ್ಥೆ(National Institute of Ayurveda) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಂದು ಉಪನ್ಯಾಸಕ(Lecturer) ಹುದ್ದೆ ಖಾಲಿ ಇದ್ದು, ಪಿಎಚ್.ಡಿ, ಎಂಡಿ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು. ಇದೇ ಡಿಸೆಂಬರ್ 23ರಂದು ನೇರ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದಾಗಿದೆ.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆರಾಷ್ಟ್ರೀಯ ಆಯುರ್ವೇದ ಸಂಸ್ಥೆ
ಹುದ್ದೆಯ ಹೆಸರುಉಪನ್ಯಾಸಕ
ಒಟ್ಟು ಹುದ್ದೆಗಳು1
ವಿದ್ಯಾರ್ಹತೆಪಿಎಚ್.ಡಿ, ಎಂಡಿ
ಉದ್ಯೋಗದ ಸ್ಥಳಜೈಪುರ
ವೇತನಮಾಸಿಕ ₹ 55,000
ಆಯ್ಕೆ ವಿಧಾನನೇರ ಸಂದರ್ಶನ
ನೋಟಿಫಿಕೇಶನ್ ದಿನಾಂಕ10/12/2021
ಸಂದರ್ಶನ ನಡೆಯುವ ದಿನಾಂಕ23/12/2021ಪ್ರಮುಖ ದಿನಾಂಕಗಳು
ನೋಟಿಫಿಕೇಶನ್ ದಿನಾಂಕ: 10/12/2021
ಸಂದರ್ಶನ ನಡೆಯುವ ದಿನಾಂಕ: 23/12/2021

ಇದನ್ನೂ ಓದಿ: BMRCL Recruitment 2021: ತಿಂಗಳಿಗೆ ₹ 63,490 ಸಂಬಳ, SSLC, ಡಿಪ್ಲೊಮಾ ಪಾಸಾದವರಿಗೆ ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗ

ವಿದ್ಯಾರ್ಹತೆ:
ರಾಷ್ಟ್ರೀಯ ಆಯುರ್ವೇದ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯುರ್ವೇದ ದ್ರವ್ಯಗುಣ ವಿಷಯದಲ್ಲಿ MD ಪೂರ್ಣಗೊಳಿಸಿರಬೇಕು. ಜೊತೆಗೆ ದ್ರವ್ಯಗುಣದಲ್ಲಿ ಪಿಎಚ್​.ಡಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ರಾಷ್ಟ್ರೀಯ ಆಯುರ್ವೇದ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು.

ಉದ್ಯೋಗದ ಸ್ಥಳ:
ರಾಷ್ಟ್ರೀಯ ಆಯುರ್ವೇದ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಜಸ್ಥಾನದ ಜೈಪುರದಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ:
ರಾಷ್ಟ್ರೀಯ ಆಯುರ್ವೇದ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 55,000 ವೇತನ ನೀಡಲಾಗುತ್ತದೆ.

ಇದನ್ನೂ ಓದಿ: DGCA: ಮಾಸಿಕ ವೇತನ ₹ 75,000; ನಾಗರಿಕ ವಿಮಾನಯಾನ ನಿರ್ದೇಶನಾಲಯದಲ್ಲಿ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಸಂದರ್ಶನ ನಡೆಯುವ ಸ್ಥಳ:
ರಾಷ್ಟ್ರೀಯ ಆಯುರ್ವೇದ ಸಂಸ್ಥೆ
ಜೈಪುರ
Published by:Latha CG
First published: