KSP Recruitment 2021: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಅನೇಕ ಹುದ್ದೆಗಳು ಖಾಲಿ, ಪದವೀಧರರು ಅರ್ಜಿ ಸಲ್ಲಿಸಿ

ಡಿಸೆಂಬರ್ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 15, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಶುಲ್ಕ ಪಾವತಿಸಲು ಜನವರಿ 18 ಕಡೆಯ ದಿನಾಂಕವಾಗಿದೆ.

KSP

KSP

  • Share this:
ಕರ್ನಾಟಕ ಪೊಲೀಸ್​ ಇಲಾಖೆ (Karnataka Police Department)ಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಉದ್ಯೋಗಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ನ್ಯಾಯ ವಿಜ್ಞಾನ ಪ್ರಯೋಗಾಲಯ (Forensic science laboratory) ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ (Regional Forensic science laboratory) ಹಲವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 206 ಸೀನ್​ ಆಫ್​ ಕ್ರೈಂ ಆಫೀಸರ್ (Scene of Crime Officer- SOCO) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 15, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಶುಲ್ಕ ಪಾವತಿಸಲು ಜನವರಿ 18 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪೊಲೀಸ್​ ಇಲಾಖೆಯ ಅಧಿಕೃತ ವೆಬ್​ಸೈಟ್ https://recruitment.​​ksp.gov.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕರ್ನಾಟಕ ಪೊಲೀಸ್​ ಇಲಾಖೆ
ಹುದ್ದೆಯ ಹೆಸರುಸೀನ್​ ಆಫ್​ ಕ್ರೈಂ ಆಫೀಸರ್
ಒಟ್ಟು ಹುದ್ದೆಗಳು206
ವಿದ್ಯಾರ್ಹತೆಪದವಿ
ವೇತನನಿಯಮಾನುಸಾರ
ಉದ್ಯೋಗದ ಸ್ಥಳಬೆಂಗಳೂರು
ವಯೋಮಿತಿ21-35 ವರ್ಷ
ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ17/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ15/01/2022ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/01/2022

ಇತ್ತೀಚೆಗೆ ವಿಧಿ ವಿಜ್ಞಾನ ಪ್ರಯೋಗಾಲಯ/ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ (ಸೀನ್ ಆಫ್ ಕ್ರೈಂ ಆಫೀಸರ್ - SOCO) ಹುದ್ದೆಗಳನ್ನು ನೇಮಕ ಮಾಡವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದ್ದರು. ಅದರಂತೆ ಖಾಲಿ ಇರುವ ಸ್ಥಳೀಯ ವೃಂದದ 28 ಹುದ್ದೆ ಹಾಗೂ ಮಿಕ್ಕುಳಿದ ವೃಂದದ 178 ಹುದ್ದೆ ಸೇರಿ ಒಟ್ಟು 206 SOCO ಹುದ್ದೆಗಳ ಭರ್ತಿಯಾಗಲಿದೆ. ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಮೀಸಲಾತಿ ಕಲ್ಪಿಸಿಲ್ಲ. ಹೀಗಾಗಿ ಸ್ಥಳೀಯ ಹಾಗೂ ಮಿಕ್ಕ ವೃಂದದ ವಿಭಾಗದಲ್ಲಿಯೇ ಅರ್ಜಿ ಸಲ್ಲಿಸಲು ಕಲ್ಯಾಣ ಕರ್ನಾಟಕ ವಿಭಾಗದ ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: KPSC ನೇಮಕಾತಿ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ ₹ 82,400 ಸಂಬಳ

ವಿದ್ಯಾರ್ಹತೆ:
ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಶೇ.55 ರಷ್ಟು ಅಂಕಗಳೊಂದಿಗೆ ಕಡ್ಡಾಯವಾಗಿ ಪದವಿ ಪಡೆದಿರಬೇಕು. ಅಥವಾ ವಿಧಿ ವಿಜ್ಞಾನ ವಿಷಯದಲ್ಲಿ ಪದವಿಯಲ್ಲಿ ಶೇ. 55 ಅಂಕ ಗಳಿಸಿದ್ದು, ಒಂದು ವರ್ಷದ ಡಿಪ್ಲೋಮಾ ಪಡೆದವರು ಅರ್ಜಿ ಸಲ್ಲಿಸಬಹುದು. ಅಥವಾ ವಿಜ್ಞಾನ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ವಿಧಿ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಶೇ. 55 ಅಂಕಗಳೊಂದಿಗೆ ಉತ್ತೀರ್ಣರಾದವರು ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿ:
ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳ ವಯಸ್ಸು 21-35 ವರ್ಷದೊಳಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, SC/ST ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿಯನ್ನು ನೀಡಲಾಗಿದೆ.

ಇದನ್ನೂ ಓದಿ: Bengaluru Metro: SSLC ಪಾಸಾದವರಿಗೆ ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗ, ತಿಂಗಳಿಗೆ ₹ 60,000 ಸಂಬಳ

ಉದ್ಯೋಗದ ಸ್ಥಳ:
ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ:
ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ
ವೈಯಕ್ತಿಕ ಸಂದರ್ಶನ
Published by:Latha CG
First published: