• Home
  • »
  • News
  • »
  • jobs
  • »
  • Job Alert: ಡಿಗ್ರಿ ಪಾಸಾಗಿದ್ರೆ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿದೆ ಉದ್ಯೋಗ

Job Alert: ಡಿಗ್ರಿ ಪಾಸಾಗಿದ್ರೆ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿದೆ ಉದ್ಯೋಗ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಡಿಸೆಂಬರ್ 3, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಈ ಕೂಡಲೇ ನಿಮ್ಮ ರೆಸ್ಯೂಮ್​ನ್ನು ಇ-ಮೇಲ್(E-Mail) ಮಾಡಿ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

  • Share this:

    Government Job: ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ(National Law School of India University) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಕನ್ಸಲ್ಟೆಂಟ್ಸ್(Consultant) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಡಿಸೆಂಬರ್ 3, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಈ ಕೂಡಲೇ ನಿಮ್ಮ ರೆಸ್ಯೂಮ್​ನ್ನು ಇ-ಮೇಲ್(E-Mail) ಮಾಡಿ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.


    ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ
    ಹುದ್ದೆಕನ್ಸಲ್ಟೆಂಟ್ಸ್​
    ಉದ್ಯೋಗದ ಸ್ಥಳಬೆಂಗಳೂರು
    ವೇತನನಿಯಮಾನುಸಾರ
    ವಿದ್ಯಾರ್ಹತೆಪದವಿ


    ಅರ್ಹತಾ ಮಾನದಂಡಗಳೇನು?


    ಶೈಕ್ಷಣಿಕ ಅರ್ಹತೆ ಏನಿರಬೇಕು?
    ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಾನೂನು, ಸಮಾಜ ವಿಜ್ಞಾನದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: Government Job: ನೀವು ಡಿಪ್ಲೋಮಾ ಮಾಡಿದ್ದೀರಾ? ಇಲ್ಲಿದೆ ನೋಡಿ ಸರ್ಕಾರಿ ಉದ್ಯೋಗ


    ಅನುಭವ ಎಷ್ಟು ವರ್ಷ ಇರಬೇಕು?
    ಅಭ್ಯರ್ಥಿಗಳು ಲೀಗಲ್ ರಿಸರ್ಚ್​ ಮತ್ತು ಡೇಟಾ ಮ್ಯಾಪಿಂಗ್​ನಲ್ಲಿ ಕನಿಷ್ಠ 2-3 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.
    ಬಾಲಾಪರಾಧಿ ಅಥವಾ ವಯಸ್ಕರ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ಕೆಲಸ ಮಾಡಿದ ಅನುಭವ ಇರಬೇಕು.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ರೆಸ್ಯೂಮ್ ಹಾಗೂ ಅಗತ್ಯ ದಾಖಲಾತಗಳೊಂದಿಗೆ ಇ-ಮೇಲ್ ಐಡಿ ccl@nls.ac.in ಗೆ ಡಿಸೆಂಬರ್ 3, 2022ಕ್ಕೆ ಮುನ್ನ ಕಳುಹಿಸಬೇಕು.


    ಇದನ್ನೂ ಓದಿ: GESCOM Recruitment 2022: ಡಿಪ್ಲೋಮಾ ಪಾಸಾದವರಿಗೆ ಜೆಸ್ಕಾಂನಲ್ಲಿದೆ ಉದ್ಯೋಗ, ಇಲ್ಲಿ Apply ಮಾಡಿ


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 26/11/2022
    ಇ-ಮೇಲ್ ಮಾಡಲು ಕೊನೆಯ ದಿನ: 03/12/2022

    Published by:Latha CG
    First published: