• Home
  • »
  • News
  • »
  • jobs
  • »
  • BEL Recruitment: ಸೀನಿಯರ್ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ವಿವರ

BEL Recruitment: ಸೀನಿಯರ್ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ವಿವರ

ನೇಮಕಾತಿ 2022

ನೇಮಕಾತಿ 2022

ಭಾರತ್​ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​ನಲ್ಲಿ (Bharat Electronics Limited)  ಸೀನಿಯರ್ ಸಹಾಯಕ ಇಂಜಿನಿಯರ್ (Sr. Assistant Engineer) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 

  • News18 Kannada
  • 5-MIN READ
  • Last Updated :
  • Belsor | Jobat
  • Share this:

ಭಾರತ್​ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​ನಲ್ಲಿ (Bharat Electronics Limited)  ಸೀನಿಯರ್ ಸಹಾಯಕ ಇಂಜಿನಿಯರ್ (Sr. Assistant Engineer) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಕರ್ನಾಟಕ - ಲಕ್ಷದ್ವೀಪ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಆಗಸ್ಟ್​ 11, 2022ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.


ಹುದ್ದೆಯ ಅಧಿಸೂಚನೆ:


ಸಂಸ್ಥೆಯ ಹೆಸರು : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ( BEL )
ಪೋಸ್ಟ್‌ಗಳ ಸಂಖ್ಯೆ: 16
ಉದ್ಯೋಗ ಸ್ಥಳ:  ಕರ್ನಾಟಕ ಮತ್ತು  ಲಕ್ಷದ್ವೀಪ - ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು
ಪೋಸ್ಟ್ ಹೆಸರು: ಸೀನಿಯರ್ ಸಹಾಯಕ ಇಂಜಿನಿಯರ್
ಸಂಬಳ: ರೂ.30000-120000/- ಪ್ರತಿ ತಿಂಗಳು


 ಹುದ್ದೆಯ ವಿವರಗಳು:

ಹುದ್ದೆಯ ಹೆಸರುಖಾಲಿ ಇರುವ ಹುದ್ದೆಗಳ ಸಂಖ್ಯೆ
ಹಿರಿಯ ಸಹಾಯಕ ಇಂಜಿನಿಯರ್ (ಪರೀಕ್ಷೆ/CS/NS/S&CS)8
ಹಿರಿಯ ಸಹಾಯಕ ಇಂಜಿನಿಯರ್ (CSS/NS/R&FCS)8

ಶೈಕ್ಷಣಿಕ ಅರ್ಹತೆ:  ಹಿರಿಯ ಸಹಾಯಕ ಇಂಜಿನಿಯರ್ (CSS/NS/R&FCS): ಇ ಎಲೆಕ್ಟ್ರಾನಿಕ್ಸ್ , ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್, ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಶನ್, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್‌ನಲ್ಲಿ ಡಿಪ್ಲೋಮಾ ಇನ್ ಇಂಜಿನಿಯರಿಂಗ್.


ಹಿರಿಯ ಸಹಾಯಕ ಇಂಜಿನಿಯರ್ (ಪರೀಕ್ಷೆ/CS/NS/S&CS): ಇ ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್, ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಶನ್, ಕಮ್ಯುನಿಕೇಶನ್, ಟೆಲಿ-ಕಮ್ಯುನಿಕೇಶನ್, ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್, ಕಮ್ಯುನಿಕೇಶನ್, ಟೆಲಿಕಮ್ಯುನಿಕೇಶನ್‌ನಲ್ಲಿ ಡಿಪ್ಲೋಮಾ ಇನ್ ಇಂಜಿನಿಯರಿಂಗ್.


ವಯಸ್ಸಿನ ಮಿತಿ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-ಜುಲೈ-2022 ರಂತೆ 50 ವರ್ಷಗಳು.


ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ


ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20 ಜುಲೈ 2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11 ಆಗಸ್ಟ್ 2022


ಅಧಿಸೂಚನೆ ಪ್ರಮುಖ ಲಿಂಕ್‌ಗಳು:


ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ನಮೂನೆ : Sr. Asst ಇಂಜಿನಿಯರ್ (ಪರೀಕ್ಷೆ/CS/NS/S&CS): ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ನಮೂನೆ - Sr. Asst. ಇಂಜಿನಿಯರ್ (CSS/NS /R&FCS): ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: bel-india.in


ಅರ್ಜಿ ಸಲ್ಲಿಕೆ ವಿಧಾನ:


- ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


- ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.


- ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


- ಕೊನೆಯದಾಗಿ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ:- Sr. DGM (HR), ನೇವಲ್ ಸಿಸ್ಟಮ್ಸ್ SBU, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಜಾಲಹಳ್ಳಿ ಪೋಸ್ಟ್, ಬೆಂಗಳೂರು - 560013

Published by:shrikrishna bhat
First published: