Jobs: ತುಮಕೂರು- ಮಾಧ್ಯಮ ವೃತ್ತಿಪರ ತರಬೇತಿಗೆ ಅರ್ಹರಿಂದ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ತುಮಕೂರಿನಲ್ಲಿ(Tumkur) ಮಾಧ್ಯಮ(Media) ವೃತ್ತಿಪರ ತರಬೇತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿಯ 2021-22 ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ (SCP/TSP) ಯಡಿ ವೃತ್ತಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 2 ತಿಂಗಳ ಅಪ್ರೆಂಟಿಸ್ ತರಬೇತಿ ನೀಡಲು ಆಸಕ್ತ ಪತ್ರಿಕೋದ್ಯಮ(Journalism) ಸ್ನಾತಕೋತ್ತರ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ತರಬೇತಿ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.ಸಂಸ್ಥೆಕರ್ನಾಟಕ ಮಾಧ್ಯಮ ಅಕಾಡೆಮಿ
ತರಬೇತಿಅಪ್ರೆಂಟಿಸ್
ಒಟ್ಟು ಅಭ್ಯರ್ಥಿಗಳು30
ಸ್ಟೆಫಂಡ್ಮಾಸಿಕ ₹ 15,000
ವಿದ್ಯಾರ್ಹತೆಸ್ನಾತಕೋತ್ತರ ಪದವಿ(ಪತ್ರಿಕೋದ್ಯಮ)
ಆಯ್ಕೆ ವಿಧಾನಸಂದರ್ಶನ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ27/01/2022ಹುದ್ದೆಯ ಮಾಹಿತಿ:
ಪರಿಶಿಷ್ಟ ಜಾತಿ- 22 ಮಂದಿ ಅಭ್ಯರ್ಥಿಗಳು
ಗಿರಿಜನ ಉಪಯೋಜನೆ ಪರಿಶಿಷ್ಟ ಪಂಗಡದಡಿ- 8 ಮಂದಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: Government Job: ಸೆಬಿಯಲ್ಲಿ 120 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ, ತಿಂಗಳಿಗೆ ₹ 55,000 ಸಂಬಳ

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರಿಕಾಲಯಗಳಲ್ಲಿ ತರಬೇತಿ ನೀಡಿ ₹ 15,000 ಸ್ಟೆಫಂಡ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ತರಬೇತಿಗೆ ಆಯ್ಕೆ ಮಾಡಲಾಗುತ್ತದೆ.

ಇತರೆ ಅರ್ಹತೆಗಳು
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಕನ್ನಡ ಭಾಷೆಯಲ್ಲಿ ಪರಿಣಿತರಾಗಿದ್ದು, ಸುಲಲಿತವಾಗಿ ಓದಲು, ಬರೆಯಲು ಬರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು.

ಇದನ್ನೂ ಓದಿ: HALನಲ್ಲಿ ಖಾಲಿ ಇರುವ 150 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇವತ್ತೇ ಕೊನೆ ದಿನ, ಈಗಲೇ Apply ಮಾಡಿ

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆ ಜೊತೆಗೆ ಎಸ್ ಎಸ್ ಎಲ್ ಸಿ ಅಂಕಪಟ್ಟಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ , ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರೆ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಈ ಮೇಲ್ ಮೂಲಕ ಕಳುಹಿಸಬೇಕು.

ಈ ಮೇಲ್ ವಿಳಾಸ: traineekma2022@gmail.com ಮೂಲಕ ಅಥವಾ ಅಂಚೆ ಮೂಲಕ ಕಳುಹಿಸಬೇಕು.

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಜನವರಿ 27 ರೊಳಗೆ ಅರ್ಜಿ ಸಲ್ಲಿಸಬೇಕು.
Published by:Latha CG
First published: