UAS Dharwad Recruitment 2022: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ-ಧಾರವಾಡ(University of Agricultural Sciences Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 Part-Time ಟೀಚರ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 12ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಜನವರಿ 27 ರಂದುಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ uasd.edu ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ-ಧಾರವಾಡ |
ಹುದ್ದೆಯ ಹೆಸರು |
Part-Time ಟೀಚರ್ |
ಒಟ್ಟು ಹುದ್ದೆಗಳು |
01 |
ವಿದ್ಯಾರ್ಹತೆ |
ಸ್ನಾತಕೋತ್ತರ ಪದವಿ |
ಉದ್ಯೋಗದ ಸ್ಥಳ |
ಶಿರಸಿ |
ವೇತನ |
ಮಾಸಿಕ ₹ 40,000 |
ಅರ್ಜಿ ಸಲ್ಲಿಕೆ ಬಗೆ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
12/01/2022 |
ಸಂದರ್ಶನ ನಡೆಯುವ ದಿನಾಂಕ |
27/01/2022 |
ಶೈಕ್ಷಣಿಕ ಅರ್ಹತೆ:
UAS ಧಾರವಾಡದ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕೃಷಿ ಸಂಖ್ಯಾಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ:BARC Recruitment 2022: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ BARC, ಮಾಸಿಕ ₹ 55,000 ಸ್ಟೈಪೆಂಡ್
ವಯಸ್ಸಿನ ಮಿತಿ:
ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು UAS ಧಾರವಾಡ ನೇಮಕಾತಿ ನಿಯಮಗಳ ಪ್ರಕಾರ ಇರಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/01/2022
ಸಂದರ್ಶನ ನಡೆಯುವ ದಿನಾಂಕ: 27/01/2022
ಇದನ್ನೂ ಓದಿ: BELನಲ್ಲಿ ವಿವಿಧ ಹುದ್ದೆಗಳು ಖಾಲಿ, ತಿಂಗಳಿಗೆ ₹ 1,60,000 ಸಂಬಳ, ಈಗಲೇ ಅರ್ಜಿ ಸಲ್ಲಿಸಿ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಸಂದರ್ಶನ ನಡೆಯುವ ಸ್ಥಳ:
ಡೀನ್ ಕಚೇರಿ(ಅರಣ್ಯ)
ಅರಣ್ಯ ವಿಶ್ವವಿದ್ಯಾಲಯ
ಶಿರಸಿ
ಕರ್ನಾಟಕ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ