• Home
  • »
  • News
  • »
  • jobs
  • »
  • Jobs: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ರೋಡ್ ಸೇಫ್ಟಿ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Jobs: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ರೋಡ್ ಸೇಫ್ಟಿ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ನವೆಂಬರ್ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 15, 2022 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು.

  • Share this:

    ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(National Highway Authority of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ರೋಡ್ ಸೇಫ್ಟಿ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಬಿಇ(B.E), ಬಿ.ಟೆಕ್(B. Tech)​ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 15, 2022 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
    ಹುದ್ದೆರೋಡ್​ ಸೇಫ್ಟಿ ಎಂಜಿನಿಯರ್
    ವೇತನನಿಯಮಾನುಸಾರ
    ಉದ್ಯೋಗದ ಸ್ಥಳನವದೆಹಲಿ
    ವಿದ್ಯಾರ್ಹತೆಬಿಇ/ ಬಿ.ಟೆಕ್
    ಅರ್ಜಿ ಶುಲ್ಕಶುಲ್ಕ ವಿನಾಯಿತಿ  ನೀಡಲಾಗಿದೆ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/11/2022
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/12/2022


    ಅರ್ಜಿ ಶುಲ್ಕ:
    ಶುಲ್ಕ ವಿನಾಯಿತಿ ನೀಡಲಾಗಿದೆ.


    ಇದನ್ನೂ ಓದಿ: NIMHANS Recruitment: ನಿಮ್ಹಾನ್ಸ್​​ನಲ್ಲಿ 7 ಹುದ್ದೆಗಳಿಗೆ ಅರ್ಜಿ ಆಹ್ವಾನ- ತಿಂಗಳಿಗೆ 80,000 ಸಂಬಳ


    ವಿದ್ಯಾರ್ಹತೆ:
    ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.


    ವಯೋಮಿತಿ:
    ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು.


    ಆಯ್ಕೆ ಪ್ರಕ್ರಿಯೆ:
    ದಾಖಲಾತಿ ಪರಿಶೀಲನೆ
    ವೈಯಕ್ತಿಕ ಸಂದರ್ಶನ

    Published by:Latha CG
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು