JOBS: ಧಾರವಾಡ ಕೃಷಿ ವಿಜ್ಞಾನ ಯೂನಿವರ್ಸಿಟಿಯಲ್ಲಿ ವಿವಿಧ ಹುದ್ದೆಗಳು ಖಾಲಿ, ಮಾಸಿಕ ವೇತನ ₹ 31,000

ಜನವರಿ 21 ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
 UAS Dharwad Recruitment 2022: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ-ಧಾರವಾಡ(University of Agricultural Sciences Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಸೀನಿಯರ್ ರಿಸರ್ಚ್​ ಫೆಲೋ(Senior Research Fellow) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 6 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಜನವರಿ 21 ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ uasd.edu ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.







































ಸಂಸ್ಥೆಕೃಷಿ ವಿಜ್ಞಾನ ವಿಶ್ವವಿದ್ಯಾಲಯ-ಧಾರವಾಡ
ಹುದ್ದೆಯ ಹೆಸರುಸೀನಿಯರ್ ರಿಸರ್ಚ್​ ಫೆಲೋ
ಒಟ್ಟು ಹುದ್ದೆಗಳು02
ವಿದ್ಯಾರ್ಹತೆ ಪದವಿ, ಸ್ನಾತಕೋತ್ತರ ಪದವಿ
ಉದ್ಯೋಗದ ಸ್ಥಳ ಧಾರವಾಡ
ವೇತನಮಾಸಿಕ ₹ 31,000
ಅರ್ಜಿ ಸಲ್ಲಿಕೆ ಬಗೆಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ06/01/2022
ಸಂದರ್ಶನ ನಡೆಯುವ ದಿನಾಂಕ 21/01/2022

ವಿದ್ಯಾರ್ಹತೆ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕೃಷಿ ಇಂಜಿನಿಯರಿಂಗ್/ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ, ಫಾರ್ಮ್ ಮೆಷಿನರಿಯಲ್ಲಿ ಸ್ನಾತಕೋತ್ತರ ಪದವಿ ಮತ್ತು ಪವರ್ ಇಂಜಿನಿಯರಿಂಗ್/ಮೆಕ್ಯಾನಿಕಲ್ ಇಂಜಿನಿಯರಿಂಗ್​​ನಲ್ಲಿ ಪದವಿ ಪಡೆದಿರಬೇಕು.

ಇದನ್ನೂ ಓದಿ: CIMAP Recruitment 2022: ಬೆಂಗಳೂರಿನಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹ 31,000 ಸಂಬಳ

ವಯೋಮಿತಿ:
ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು ಯುಎಎಸ್ ಧಾರವಾಡ ನೇಮಕಾತಿ ನಿಯಮಗಳ ಪ್ರಕಾರ ಇರಬೇಕು.

ವಯೋಮಿತಿ ಸಡಿಲಿಕೆ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನಿಯಮಾವಳಿ ಪ್ರಕಾರ ಇರುತ್ತದೆ.

ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಇದನ್ನೂ ಓದಿ: TCS Jobs 2022: MBA ಫ್ರೆಶರ್ಸ್​ ನೇಮಕಕ್ಕೆ ಅರ್ಜಿ ಆಹ್ವಾನಿಸಿದ TCS, Apply ಮಾಡಲು 2 ದಿನ ಅಷ್ಟೇ ಬಾಕಿ

ಸಂದರ್ಶನ ನಡೆಯುವ ಸ್ಥಳ

ಡೀನ್ ಕಛೇರಿ (ಕೃಷಿ),
ಕೃಷಿ ವಿಶ್ವವಿದ್ಯಾಲಯ,
ವಿಜಯಪುರ
ಕರ್ನಾಟಕ

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/01/2022
ಸಂದರ್ಶನ ನಡೆಯುವ ದಿನಾಂಕ: 21/01/2022
Published by:Latha CG
First published: