ಭಾರತೀಯ ವಿಜ್ಞಾನ ಸಂಸ್ಥೆ(Indian Institute of Science)-ಬೆಂಗಳೂರಿನಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 1 ಪ್ರಾಜೆಕ್ಟ್ ಎಂಜಿನಿಯರ್ & ಎಸ್ಟೇಟ್ ಆಫೀಸರ್(Project Engineer & Estate Officer) ಹುದ್ದೆ ಖಾಲಿ ಇದ್ದು, ಸಿವಿಲ್ ಎಂಜಿನಿಯರಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು. ಜನವರಿ 13ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 4, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ವಿಜ್ಞಾನ ಸಂಸ್ಥೆಯ ಅಧಿಕೃತ ವೆಬ್ಸೈಟ್ www.iisc.ac.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು |
ಹುದ್ದೆಯ ಹೆಸರು |
ಪ್ರಾಜೆಕ್ಟ್ ಎಂಜಿನಿಯರ್ & ಎಸ್ಟೇಟ್ ಆಫೀಸರ್ |
ಒಟ್ಟು ಹುದ್ದೆಗಳು |
1 |
ವಿದ್ಯಾರ್ಹತೆ |
ಸಿವಿಲ್ ಎಂಜಿನಿಯರಿಂಗ್ |
ಉದ್ಯೋಗದ ಸ್ಥಳ |
ಬೆಂಗಳೂರು |
ವೇತನ |
ಮಾಸಿಕ ₹ 1,23,100-2,15,900 |
ಅರ್ಜಿ ಸಲ್ಲಿಕೆ ಬಗೆ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
13/01/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
04/02/2022 |
ವಿದ್ಯಾರ್ಹತೆ:
ಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್ ಎಂಜಿನಿಯರ್ & ಎಸ್ಟೇಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: Job Alert: ತಿಂಗಳಿಗೆ ₹ 55,000 ಸಂಬಳ, ಬೆಂಗಳೂರು BELನಲ್ಲಿ 247 ಹುದ್ದೆಗಳು ಖಾಲಿ
ಅನುಭವ:
ಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್ ಎಂಜಿನಿಯರ್ & ಎಸ್ಟೇಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಸಂಬಂಧಿತ ಕ್ಷೇತ್ರದಲ್ಲಿ 15 ವರ್ಷ ಅನುಭವ ಹೊಂದಿರಬೇಕು.
ವಯೋಮಿತಿ:
ಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್ ಎಂಜಿನಿಯರ್ & ಎಸ್ಟೇಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಫೆಬ್ರವರಿ 4, 2022ಕ್ಕೆ 55 ವರ್ಷ ಮೀರಿರಬಾರದು.
ಇದನ್ನೂ ಓದಿ:Job Alert: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ಸಂದರ್ಶನ
ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04/02/2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ