• Home
  • »
  • News
  • »
  • jobs
  • »
  • JOBS in Bengaluru: ತಿಂಗಳಿಗೆ 36 ಸಾವಿರ ಸಂಬಳ, ನಿಮ್ಹಾನ್ಸ್​ನಲ್ಲಿ ಉದ್ಯೋಗ

JOBS in Bengaluru: ತಿಂಗಳಿಗೆ 36 ಸಾವಿರ ಸಂಬಳ, ನಿಮ್ಹಾನ್ಸ್​ನಲ್ಲಿ ಉದ್ಯೋಗ

ನಿಮ್ಹಾನ್ಸ್​

ನಿಮ್ಹಾನ್ಸ್​

ಅಕ್ಟೋಬರ್ 22ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

  • News18 Kannada
  • Last Updated :
  • Bangalore [Bangalore], India
  • Share this:

    NIMHANS Recruitment 2022: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಸೀನಿಯರ್ ರಿಸರ್ಚ್​ ಫೆಲೋ(Senior Research Fellow) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 22ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. 


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು
    ಹುದ್ದೆಯ ಹೆಸರುಸೀನಿಯರ್ ರಿಸರ್ಚ್​ ಫೆಲೋ
    ಒಟ್ಟು ಹುದ್ದೆ02
    ವಿದ್ಯಾರ್ಹತೆಎಂ.ಫಿಲ್, ಸ್ನಾತಕೋತ್ತರ ಪದವಿ
    ವೇತನಮಾಸಿಕ ₹ 36,400
    ಉದ್ಯೋಗದ ಸ್ಥಳಬೆಂಗಳೂರು
    ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ22/10/2022
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ02/11/2022


    ವಿದ್ಯಾರ್ಹತೆ:
    ಸೀನಿಯರ್ ರಿಸರ್ಚ್​ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಲ್ಲಿ ಸೈಕಾಲಜಿ ವಿಭಾಗದಲ್ಲಿ ಸ್ನಾತಕೋತ್ತರ ಪದವಿ, ಸೈಕಿಯಾಟ್ರಿಕ್ ಸೋಷಿಯಲ್ ವರ್ಕ್​​ನಲ್ಲಿ ಎಂ.ಫಿಲ್​ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: DRDO ನೇಮಕಾತಿ: ITI ಆದವರಿಗೆ ಸುವರ್ಣಾವಕಾಶ, ಈಗಲೇ ಅರ್ಜಿ ಸಲ್ಲಿಸಿ


    ವಯೋಮಿತಿ:
    ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ-ಬೆಂಗಳೂರು ಅಧಿಕೃತ ಅಧಿಸೂಚನೆ ಪ್ರಕಾರ, ಸೀನಿಯರ್ ರಿಸರ್ಚ್​ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ , ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸ್ಕಿಲ್​ ಟೆಸ್ಟ್​
    ಸಂದರ್ಶನ


    ಇದನ್ನೂ ಓದಿ: Government JOB: ಫೀಲ್ಡ್​ ವರ್ಕರ್​ ಹುದ್ದೆಗೆ ಅರ್ಜಿ ಹಾಕಿ, ತಿಂಗಳಿಗೆ 18,000 ಸಂಬಳ


    ಪ್ರಮುಖ ದಿನಾಂಕಗಳು
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/10/2022
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02/11/2022

    Published by:Latha CG
    First published: