Jobs in Gadag: ಗದಗ ಜಿಲ್ಲಾ ಪಂಚಾಯತ್​ನಲ್ಲಿದೆ ಉದ್ಯೋಗಾವಕಾಶ; ಇಲ್ಲಿದೆ ಹುದ್ದೆ ಮಾಹಿತಿ

ಅರ್ಜಿಯನ್ನು ಆನ್​ಲೈನ್​ ಮೂಲಕ ಭರ್ತಿ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 16 ಆಗಿದೆ.

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಗದಗ ಜಿಲ್ಲಾ ಪಂಚಾಯತ್​ನಲ್ಲಿ (Gadag Zilla Panchayat)  ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರ (Assistant District Project Manager- ADPM) ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ. ಇ-ಪಂಚಾಯತ್​ ಯೋಜನೆ ಅಡಿ ಕಾರ್ಯ ನಿರ್ವಹಿಸಲು ಈ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾಂತ್ರಿಕ ಪದವಿ ಹೊಂದಿರುವ ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಭರ್ತಿ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 16 ಆಗಿದೆ.

    ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಸಂಸ್ಥೆ
    ಹುದ್ದೆಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ (ADPM)
    ಹುದ್ದೆಗಳ ಸಂಖ್ಯೆನಿರ್ದಿಷ್ಟಪಡಿಸಲಾಗಿಲ್ಲ
    ಕಾರ್ಯ ನಿರ್ವಹಣೆ ಸ್ಥಳಗದಗ
    ವೇತನಗದಗ ಜಿಲ್ಲಾ ಪಂಚಾಯತ್​ ನಿಯಮ ಅನುಸಾರ

    ಶೈಕ್ಷಣಿಕ ಅರ್ಹತೆ: ಗದಗ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ  ಸಿಎಸ್​, ಇಎಸ್​, ಐಸಿಯಲ್ಲಿ ಬಿಇ, ಬಿಸಿಎ ಅಥವಾ ಎಂಸಿಎ ಪದವಿ ಪೂರ್ಣಗೊಳಿಸಿರಬೇಕು.

    ಅನುಭವದ ವಿವರಗಳು
    ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಮೂರು ವರ್ಷಗಳ ಅನುಭವವನ್ನು ಹೊಂದಿರಬೇಕು.

    ವಯೋಮಿತಿ: ಗದಗ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಟ 21 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

    ವಯೋಮಿತಿ ಸಡಿಲಿಕೆ:
    ಗದಗ ಜಿಲ್ಲಾ ಪಂಚಾಯತ್ ನಿಯಮಾನುಸಾರ

    ಅರ್ಜಿ ಸಲ್ಲಿಕೆ ವಿಧಾನ: ಆನ್​ಲೈನ್​ ಮೂಲಕ

    ಅರ್ಜಿ ಶುಲ್ಕ:
    ಅರ್ಜಿ ಶುಲ್ಕ ವಿನಾಯಿತಿ

    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಇದನ್ನು ಓದಿ: Jobs In HP: ಫ್ರೆಶರ್ಸ್​ಗೆ ಎಚ್​ಪಿಯಲ್ಲಿದೆ ಉದ್ಯೋಗ; ಯಾವುದೇ ವಿಷಯದಲ್ಲಿ ಡಿಗ್ರಿ ಆಗಿದ್ರೂ ಅರ್ಜಿ ಸಲ್ಲಿಸಿ

    ವಿಶೇಷ ಸೂಚನೆ
    ಅಭ್ಯರ್ಥಿಗಳು NIC Websiteನಲ್ಲಿ ನಿಗದಿತ ಅರ್ಜಿಗಳನ್ನು ಆನ್​ಲೈನ್​ ಮೂಲಕ ಭರ್ತಿ ಮಾಡಬೇಕು.

    ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿಗೆ ಕೆಲಸದ ವೇಳೆಯಲ್ಲಿ ಜಿ.ಪಂ ಗದಗ ಕಚೇರಿ, ನರೇಗಾ ಶಾಖೆಗೆ ಖುದ್ದು ಭೇಟಿಯಾಗಿ ಮಾಹಿತಿ ಪಡೆಯಬಹುದು. ಅಥವಾ 08372-235947ಗೆ ಕರೆ ಮಾಡಿ ಸಂಪರ್ಕಿಸಬಹುದಾಗಿದೆ

    ಪ್ರಮುಖ ದಿನಾಂಕ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08 ಆಗಸ್ಟ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16 ಆಗಸ್ಟ್ 2022

     ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: gadag.nic.in

    ಇದನ್ನು ಓದಿ: ಜೆಇಇ ಮೇನ್​ ಫಲಿತಾಂಶ ಬಿಡುಗಡೆ; ವೆಬ್​ಸೈಟ್​ ಲಿಂಕ್​, ಟಾಪರ್​ ಲಿಸ್ಟ್​ ಇಲ್ಲಿದೆ

    ಅರ್ಜಿ ಸಲ್ಲಿಕೆ ವಿಧಾನ 

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್ ನೀಡಿ. ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದ ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ
    Published by:Seema R
    First published: