JSS Mahavidyapeetha Recruitment 2023: ಮೈಸೂರಿನ ಜೆಎಸ್ಎಸ್ ಮಹಾವಿದ್ಯಾಪೀಠ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಕೋಆರ್ಡಿನೇಟರ್ (Coordinator) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್ 31, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಸಕ್ತರು ತಡಮಾಡದೇ ಈ ಕೂಡಲೇ ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ(Mysuru) ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ವಿದ್ಯಾರ್ಹತೆ:
ಜೆಎಸ್ಎಸ್ ಮಹಾವಿದ್ಯಾಪೀಠ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಜೆಎಸ್ಎಸ್ ಮಹಾವಿದ್ಯಾಪೀಠ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 22 ವರ್ಷ ಮತ್ತು ಗರಿಷ್ಠ 26 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: Banking Jobs: ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ನಲ್ಲಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ವೇತನ:
ನಿಗದಿಪಡಿಸಿಲ್ಲ.
ಉದ್ಯೋಗದ ಸ್ಥಳ:
ಮೈಸೂರು
ಸೂಚನೆ:
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ jssonline.orgಗೆ ಭೇಟಿ ನೀಡಬಹುದು. ಅಭ್ಯರ್ಥಿಗಳು ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿ ಪ್ರಾವಿಣ್ಯತೆ ಹೊಂದಿರಬೇಕು. ಪುರುಷರಿಗೆ ಆದ್ಯತೆ ನೀಡಲಾಗುತ್ತದೆ ಎಂದು ವಿದ್ಯಾಪೀಠವು ತಿಳಿಸಿದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಇದನ್ನೂ ಓದಿ: Post Office Recruitment 2023: ಅಂಚೆ ಇಲಾಖೆ ನೇಮಕಾತಿ- ಅರ್ಜಿ ಹಾಕಲು ನಾಳೆಯೇ ಕೊನೆ ದಿನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ sms_mahesh@yahoo.com ಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 01/03/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಮಾರ್ಚ್ 31, 2023 (ನಾಳೆ)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ