KKRTC Recruitment: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ನೇಮಕಾತಿ; ಅರ್ಜಿ ಸಲ್ಲಿಕೆಗೆ ನಾಳೆಯೇ ಕಡೆಯ ದಿನ

ಅರ್ಜಿ ಸಲ್ಲಿಕೆಯನ್ನು ಆನ್​ಲೈನ್​ ಮೂಲಕ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 18 ಆಗಿದೆ.

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ (Kalyana Karnataka Road Transport Corporation) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕುಶಲಕರ್ಮಿ, ತಾಂತ್ರಿಕ ಸಹಾಯಕ, ಸಹಾಯಕ ಸಂಚಾರ ನಿರೀಕ್ಷಕ , ಸಹಾಯಕ ಟ್ರಾಫಿಕ್ ಇನ್ಸ್‌ಪೆಕ್ಟರ್ ಸೇರಿದಂತೆ 36 ಬ್ಯಾಕ್​ಲಾಗ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯನ್ನು ಆನ್​ಲೈನ್​ ಮೂಲಕ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 18 ಆಗಿದೆ.

    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC)
    ಹುದ್ದೆಯ ಹೆಸರು: ಕುಶಲಕರ್ಮಿ, ಸಹಾಯಕ ಸಂಚಾರ ನಿರೀಕ್ಷಕ
    ಹುದ್ದೆಗಳ ಸಂಖ್ಯೆ: 36
    ಉದ್ಯೋಗ ಸ್ಥಳ: ಕರ್ನಾಟಕ
    ವೇತನ: 13970-26670 ರೂ. ಪ್ರತಿ ತಿಂಗಳು








































    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವೇತನ
    ಕುಶಲಕರ್ಮಿ2ಡಿಪ್ಲೊಮಾ13970-20740 ರೂ ಮಾಸಿಕ
    ತಾಂತ್ರಿಕ ಸಹಾಯಕ3ಎಸ್ಎಸ್​ಎಲ್​ಸಿ, ಐಟಿಐ, ಐಟಿಸಿ11640-15700 ರೂ ಮಾಸಿಕ
    ಸಹಾಯಕ ಸಂಚಾರ ನಿರೀಕ್ಷಕರು6ಪಿಯುಸಿ 13970-20740 ರೂ ಮಾಸಿಕ
    ಕರ್ನಾಟಕ ರಾಜ್ಯ ಸಾರಿಗೆ ಪೊಲೀಸ್ ಕಾನ್ಸ್ಟೇಬಲ್5+2ಪಿಯುಸಿ 11640-15700 ರೂ ಮಾಸಿಕ
    ಸಹಾಯಕ ಲೆಕ್ಕಾಧಿಕಾರಿ1ಬಿಕಾಂ14970-26670 ರೂ ಮಾಸಿಕ


    ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು  ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.

    ಇದನ್ನು ಓದಿ: ಕ್ಯಾಪ್​ಜೆಮಿನಿ ಕಂಪನಿಯಲ್ಲಿ ಬಿಇ ಫ್ರೆಶರ್​ ಅಭ್ಯರ್ಥಿಗಳಿಗಿದೆ ಉದ್ಯೋಗಾವಕಾಶ

    ವಯೋಮಿತಿ ಸಡಿಲಿಕೆ:
    ವಿಭಾಗದ ಅಭ್ಯರ್ಥಿಗಳು: 10 ವರ್ಷಗಳು

    ಅರ್ಜಿ ಶುಲ್ಕ:
    ಎಲ್ಲಾ ಅಭ್ಯರ್ಥಿಗಳು: 300 ರೂ.

    ಪಾವತಿ ವಿಧಾನ: ಆನ್‌ಲೈನ್

    ಆಯ್ಕೆ ಪ್ರಕ್ರಿಯೆ:
    ದಾಖಲೆಗಳ ಪರಿಶೀಲನೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಮೆರಿಟ್ ಪಟ್ಟಿ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26 ಆಗಸ್ಟ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 18 ಸೆಪ್ಟೆಂಬರ್​​ 2022

    ಇದನ್ನು ಓದಿ: ಬಿಇಎಲ್​ನಲ್ಲಿ 24 ಡೆಪ್ಯುಟಿ ಇಂಜಿನಿಯರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

     ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ - ಸ್ಥಳೀಯ ಕೇಡರ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ಅಧಿಸೂಚನೆ - ಉಳಿದಿರುವ ಕೇಡರ್: ಇಲ್ಲಿ ಕ್ಲಿಕ್ ಮಾಡಿ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: kkrtc.karnataka.gov.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್ ನೀಡಿ. ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

    -ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ಪಾವತಿಸಿ, ಅದರ ಮಾಹಿತಿ ಅಪ್​ಲೋಡ್​ ಮಾಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದ ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ
    Published by:Seema R
    First published: