KAPL Recruitment: ಬಿ ಫಾರ್ಮ್​ ಆದವರಿಗೆ ಕರ್ನಾಟಕ ಆಂಟಿಬಯಾಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್​​ನಲ್ಲಿದೆ ಕೆಲಸ

ಈ ಹುದ್ದೆಗಳನ್ನು ತಾತ್ಕಲಿಕವಾಗಿ ನಿರ್ದಿಷ್ಟ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. 

6 ಹುದ್ದೆಗೆ ಅರ್ಜಿ ಹಾಕಿ

6 ಹುದ್ದೆಗೆ ಅರ್ಜಿ ಹಾಕಿ

  • Share this:
    ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್​ನಲ್ಲಿ (Karnataka Antibiotics and Pharmaceuticals Limited) ಏರಿಯಾ ಮ್ಯಾನೇಜರ್​ ಮತ್ತು ಆರ್​ಎಸ್​ಎಂ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 11 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಕರ್ನಾಟಕ ಮತ್ತು ಪಶ್ಚಿಮ ಬಂಗಾಳದಲ್ಲಿ ಈ ಹುದ್ದೆಗಳು ಖಾಲಿ ಇವೆ. ಯಾವುದೇ ವಿಷಯದಲ್ಲಿ ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 15 ಆಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಇಮೇಲ್​ ಮೂಲಕ ಸಲ್ಲಿಸಬಹುದಾಗಿದೆ.

    ಈ ಹುದ್ದೆಗಳನ್ನು ತಾತ್ಕಲಿಕವಾಗಿ ನಿರ್ದಿಷ್ಟ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL)
    ಹುದ್ದೆಯ ಹೆಸರು: ಏರಿಯಾ ಮ್ಯಾನೇಜರ್‌ಗಳು, ಪ್ರಾದೇಶಿಕ ಮಾರಾಟ ವ್ಯವಸ್ಥಾಪಕ
    ಹುದ್ದೆಗಳ ಸಂಖ್ಯೆ: 11
    ಉದ್ಯೋಗ ಸ್ಥಳ: ಕರ್ನಾಟಕ - ಪಶ್ಚಿಮ ಬಂಗಾಳ - ತೆಲಂಗಾಣ - ತಮಿಳುನಾಡು
    ವೇತನ: 26000-65000 ರೂ. ಪ್ರತಿ ತಿಂಗಳು































    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವಯೋಮಿತಿವೇತನ
    ವೃತ್ತಿಪರ ಸೇವಾ ಪ್ರತಿನಿಧಿಗಳು – III 8 ಪದವಿ 30 260008ಫಾರ್ಮಸಿ, ವಿಜ್ಞಾನ, ವಾಣಿಜ್ಯದಲ್ಲಿ ಪದವಿಗರಿಷ್ಠ 30 ವರ್ಷ26000 ರೂ ಮಾಸಿಕ
    ಪ್ರದೇಶ ವ್ಯವಸ್ಥಾಪಕರು2ಫಾರ್ಮಸಿ, ವಿಜ್ಞಾನ, ವಾಣಿಜ್ಯದಲ್ಲಿ ಪದವಿಗರಿಷ್ಠ 35 ವರ್ಷ45000 ರೂ ಮಾಸಿಕ
    ಪ್ರಾದೇಶಿಕ ಮಾರಾಟ ವ್ಯವಸ್ಥಾಪಕ (ಆರ್​ಎಸ್​ಎಂ)1ಫಾರ್ಮಸಿ, ವಿಜ್ಞಾನ, ವಾಣಿಜ್ಯದಲ್ಲಿ ಪದವಿಗರಿಷ್ಠ 40 ವರ್ಷ65000 ರೂ ಮಾಸಿಕ

    ವಯಸ್ಸಿನ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
    ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು

    ಇದನ್ನು ಓದಿ: ಅರ್ಥಶಾಸ್ತ್ರದಲ್ಲಿ ಎಂಎ ಆದವರಿಗೆ ಇದೆ ಉದ್ಯೋಗಾವಕಾಶ; ಮಾಸಿಕ 35,000 ರೂವರೆಗೆ ವೇತನ

    ಅರ್ಜಿ ಸಲ್ಲಿಕೆ : ಇಮೇಲ್​ ಮೂಲಕ

    ಇ ಮೇಲ್​ ವಿಳಾಸ: hrdco@kaplindia.com

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 09 ಆಗಸ್ಟ್​ 2022
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 15 ಆಗಸ್ಟ್ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: kaplindia.com

    ಇದನ್ನು ಓದಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿದೆ ಯುವ ವೃತ್ತಿಪರ ಹುದ್ದೆ; ಬೇಗ ಅರ್ಜಿ ಸಲ್ಲಿಸಿ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ರೆಸ್ಯೂಮೆ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ ​ ವಿಳಾಸಕ್ಕೆ ನಿಗದಿತ ದಿನಾಂಕದ ಮುನ್ನ ಕಳುಹಿಸಬೇಕು.
    Published by:Seema R
    First published: