Jobs in KCC Bank: ಧಾರವಾಡದ ಕರ್ನಾಟಕ ಸೆಂಟ್ರಲ್​ ಕೋ-ಆಪರೇಟಿವ್​​ ಬ್ಯಾಂಕ್​ನಲ್ಲಿದೆ 87 ಕ್ಲರ್ಕ್​​ ಹುದ್ದೆ

ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯನ್ನು ಆನ್​ಲೈನ್​ ಮೂಲಕ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​​ 30 ಆಗಿದೆ.

ಕರ್ನಾಟಕ ಸೆಂಟ್ರಲ್​ ಕೋ-ಆಪರೇಟಿವ್​​ ಬ್ಯಾಂಕ್

ಕರ್ನಾಟಕ ಸೆಂಟ್ರಲ್​ ಕೋ-ಆಪರೇಟಿವ್​​ ಬ್ಯಾಂಕ್

  • Share this:
    ಧಾರವಾಡದ ಕರ್ನಾಟಕ ಸೆಂಟ್ರಲ್​ ಕೋ-ಆಪರೇಟಿವ್​​ ಬ್ಯಾಂಕ್​ ಲಿಮಿಟೆಡ್​ನಲ್ಲಿ ( Karnataka Central Co-operative Bank Limited Dharwad) ಕ್ಲರ್ಕ್​ (Clerk) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನೇರ ನೇಮಕಾತಿ ಮೂಲಕ ಒಟ್ಟು 87 ಕ್ಲರ್ಕ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯನ್ನು ಆನ್​ಲೈನ್​ ಮೂಲಕ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​​ 30 ಆಗಿದೆ.

    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಸಂಖ್ಯೆಹುದ್ದೆ ವಿವರ
    ಬ್ಯಾಂಕ್ ಹೆಸರುಕರ್ನಾಟಕ ಸೆಂಟ್ರಲ್​ ಕೋ-ಆಪರೇಟಿವ್​​ ಬ್ಯಾಂಕ್​ ಲಿಮಿಟೆಡ್ ಧಾರವಾಡ (ಕೆಸಿಸಿ ಬ್ಯಾಂಕ್ ಧಾರವಾಡ)
    ಹುದ್ದೆಯ ಹೆಸರುಕ್ಲರ್ಕ್
    ಹುದ್ದೆಗಳ ಸಂಖ್ಯೆ87
    ಉದ್ಯೋಗ ಸ್ಥಳಧಾರವಾಡ
    ವೇತನ16000-29600 ರೂ ಪ್ರತಿ ತಿಂಗಳು

    ಶೈಕ್ಷಣಿಕ ಅರ್ಹತೆ: ಕೆಸಿಸಿ ಬ್ಯಾಂಕ್ ಧಾರವಾಡ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

    ವಿಶೇಷ ಅರ್ಹತಾ ವಿವರಗಳು
    ಅಭ್ಯರ್ಥಿಗಳು ಕನ್ನಡ ಭಾಷೆಯನ್ನು ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು
    ಅಭ್ಯರ್ಥಿಗಳು ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್‌ನಲ್ಲಿ ಜ್ಞಾನವನ್ನು ಹೊಂದಿರಬೇಕು.

    ವಯೋಮಿತಿ: ಕರ್ನಾಟಕ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ಧಾರವಾಡ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

    ಇದನ್ನು ಓದಿ: ದೂರಸಂಪರ್ಕ ಇಲಾಖೆಯಲ್ಲಿ ಡಿಗ್ರಿ ಆದವರಿಗೆ ಉದ್ಯೋಗಾವಕಾಶ; ತಿಂಗಳಿಗೆ 75 ಸಾವಿರ ರೂ ವೇತನ

    ವಯೋಮಿತಿ ಸಡಿಲಿಕೆ:
    ವಿಕಲಚೇತನ, ವಿಧವೆ, ಮಾಜಿ ಸೈನಿಕ ಅಭ್ಯರ್ಥಿಗಳು: 10 ವರ್ಷಗಳು
    ಪ.ಜಾ, ಪ.ವ ಮತ್ತು ಪ್ರವರ್ಗ- 1 ಅಭ್ಯರ್ಥಿಗಳು: 5 ವರ್ಷಗಳು
    ಒಬಿಸಿ ಅಭ್ಯರ್ಥಿಗಳು:  3 ವರ್ಷಗಳು

    ಅರ್ಜಿ ಶುಲ್ಕ:
    ಪ.ಜಾ, ಪ.ಪಂ, ಪ್ರವರ್ಗ 1, ವಿಕಲಚೇತನ ಮತ್ತು ನಿವೃತ್ತ ಸೇವಾಧಿಕಾರಿ  ಅಭ್ಯರ್ಥಿಗಳು: 590 ರೂ
    ಸಾಮಾನ್ಯ ಮತ್ತು OBC ಅಭ್ಯರ್ಥಿಗಳು: 1180 ರೂ.

    ಪಾವತಿ ವಿಧಾನ: NEFT

    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06 ಸೆಪ್ಟೆಂಬರ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್​​ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: kccbankdharwad.in

    ಇದನ್ನು ಓದಿ: ಪ್ರಾಜೆಕ್ಟ್​ ಸೂಪರ್​ವೈಸರ್​ ಹುದ್ದೆಗೆ ಅರ್ಜಿ ಆಹ್ವಾನ; ಡಿಗ್ರಿ ಆಗಿದ್ರೆ ಅರ್ಜಿ ಸಲ್ಲಿಸಿ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಲಗತ್ತಿಸಿ

    ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: