ಕರ್ನಾಟಕ ಅರಣ್ಯ ಇಲಾಖೆಯಲ್ಲಿರುವ 5 ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

KFD recruitment 2021: ಸಹಾಯಕ ಆಯುಕ್ತರು (ಕಂದಾಯ) ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದವರು ಅರ್ಜಿ ಸಲ್ಲಿಸಬೇಕು.

jobs

jobs

 • Share this:
  ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 5 ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳಿಗೆ ಅರ್ಹತೆಯ ಆಧಾರದ ಮೇಲೆ ಅರ್ಜಿ ಸಲ್ಲಿಸಲು ತಿಳಿಸಿದೆ. ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

  ಅರ್ಹತೆ:  ಸಹಾಯಕ ಆಯುಕ್ತರು (ಕಂದಾಯ) ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದವರು ಅರ್ಜಿ ಸಲ್ಲಿಸಬೇಕು.

  ವಯೋಮಿತಿ: ಅರ್ಜಿದಾರರು 70 ವರ್ಷ ವಯಸ್ಸನ್ನು ಮೀರಿರಬಾರದು.

  ವೇತನ: ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 50,000ರೂ ವೇತನವನ್ನು ನೀಡಲಾಗುವುದು.

  ಆಯ್ಕೆ ವಿಧಾನ:  ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

  ಅರ್ಜಿ ಸಲ್ಲಿಸುವುದು ಹೇಗೆ?


  ಅಧಿಕೃತ ವೆಬ್‌ಸೈಟ್ https://aranya.gov.in/ ಗೆ ತೆರಳುವ ಮೂಲಕ ಅರ್ಜಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ನೊಂದಾಯಿತ ಅಂಚೆ ಮುಖಾಂತರ  ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಅರಣ್ಯ ಪಡೆ ಮುಖ್ಯಸ್ಥರು), ಅರಣ್ಯ ಭವನ, ಮಲ್ಲೇಶ್ವರಂ, ಬೆಂಗಳೂರು-560003 ವಿಳಾಸಕ್ಕೆ ಕಳುಹಿಸಬೇಕು.ಜುಲೈ 15,2021ರ ಅಪರಾಹ್ನ 4:30ರೊಳಗಾಗಿ ಅರ್ಜಿಯನ್ನು ಸಲ್ಲಿಸಲು ಸಮಯಾವಕಾಶವಿದೆ.

  Published by:Harshith AS
  First published: